ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

   ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?
ವರದಿಗಾರರು : Shobha jagadish | ಸ್ಥಳ : Bangalore | ದಿನಾಂಕ : 09-04-2026

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

ಕ್ರಿಕೆಟಿಗ ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರವನ್ನು ಹಾಡಿ ಹೊಗಳಿದ ನಂತರ, ಸಿನಿಮಾ ಕಲೆಕ್ಷನ್ ಹೆಚ್ಚಿದೆ ಎಂಬ ಚರ್ಚೆ ಶುರುವಾಗಿದೆ. ಥಿಯೇಟರ್‌ನಲ್ಲಿ ನೂಕು ನುಗ್ಗಲಿನ ವೈರಲ್ ವಿಡಿಯೋ ಸಹ ಹರಿದಾಡಿತು. ಆದರೆ, ಕೊಹ್ಲಿ ಪೋಸ್ಟ್ ನಂತರ ಸಂಗ್ರಹದಲ್ಲಿ ಅಷ್ಟೇನೂ ಗಮನಾರ್ಹ ಏರಿಕೆ ಆಗಿಲ್ಲ. ವೈರಲ್ ವಿಡಿಯೋ ಹಳೆಯದಾಗಿರಬಹುದು ಎಂದು ಹೇಳಲಾಗುತ್ತಿದೆ.ಕ್ರಿಕೆಟರ್ ವಿರಾಟ್ ಕೊಹ್ಲಿ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಇದೆ. ಅವರು ಏನೇ ಮಾಡಿದರೂ ಆ ಬಗ್ಗೆ ಚರ್ಚೆಗಳು ನಡೆಯುತ್ತವೆ. ಇತ್ತೀಚೆಗೆ ಅವರು ‘ಧುರಂಧರ್ 2’ ಚಿತ್ರವನ್ನು ನೋಡಿ ಹಾಡಿ ಹೊಗಳಿದ್ದರು. ಆದಿತ್ಯ ಧಾರ್ ನಿರ್ದೇಶನ, ರಣವೀರ್ ಸಿಂಗ್ ನಟನೆ ಸೇರಿ ಎಲ್ಲದಕ್ಕೂ ಮೆಚ್ಚುಗೆ ಸೂಚಿಸಿದ್ದರು. ಸಿನಿಮಾ ಅದ್ಭುತ ಎಂದಿದ್ದರು. ಇದಾದ ಬಳಿಕ ಸಿನಿಮಾ ಹೌಸ್​​ಫುಲ್ ಕಾಣುತ್ತಿದೆ ಎಂಬ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಹಾಗಾದರೆ, ಸಿನಿಮಾದ ಕಲೆಕ್ಷನ್ ಹೆಚ್ಚಿದೆಯೇ ? ಧುರಂಧರ್ 2 ಸಿನಿಮಾ ವಿಶ್ವ ಮಟ್ಟದಲ್ಲಿ 1652 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಭಾರತದಲ್ಲಿ ಚಿತ್ರದ ಗ್ರಾಸ್ ಕಲೆಕ್ಷನ್ 1653 ರೂಪಾಯಿ. ಈ ಚಿತ್ರದ ನೆಟ್ ಕಲೆಕ್ಷನ್ 1,041 ಕೋಟಿ ರೂಪಾಯಿ. ಈವರೆಗೆ ಸಿನಿಮಾ ಸುಮಾರು 4 ಲಕ್ಷ ಶೋಗಳನ್ನು ರನ್ ಮಾಡಿದೆ. ಈ ಸಿನಿಮಾ ಕಳೆದ ಭಾನುವಾರ 30 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಕೊಹ್ಲಿ ಸಿನಿಮಾ ಬಗ್ಗೆ ಪೋಸ್ಟ್ ಮಾಡಿದ್ದು ಸೋಮವಾರ ಸಂಜೆ. ಸೋಮವಾರ ಚಿತ್ರದ ಗಳಿಕೆ 12 ಕೋಟಿ ರೂಪಾಯಿ ಇತ್ತು. ಮಂಗಳವಾರ ಚಿತ್ರದ ಕಲೆಕ್ಷನ್ ತಗ್ಗಿಲ್ಲ. ಬದಲಿಗೆ 12 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಬುಧವಾರ ಸಿನಿಮಾದ ಕಲೆಕ್ಷನ್ 9.46 ಕೋಟಿ ರೂಪಾಯಿಗೆ ಇಳಿದಿದೆ. ಇದನ್ನು ಹೋಲಿಕೆ ಮಾಡಿದರೆ ಮಂಗಳವಾರ ಸ್ವಲ್ಪ ಪ್ರಮಾಣದಲ್ಲಿ ಕೊಹ್ಲಿ ಅಭಿಮಾನಿಗಳು ಸಿನಿಮಾ ವೀಕ್ಷಿಸಿರಬಹುದು ಎನ್ನಬಹುದು. ಆದರೆ, ಗಳಿಕೆಯಲ್ಲಿ ಗಮನಾರ್ಹ ಏರಿಕೆ ಏನೂ ಆಗಿಲ್ಲ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1618+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1848+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4311+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4489+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4510+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4589+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7068+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7549+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7587+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12782+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12906+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13181+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13202+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27170+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30208+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30228+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30257+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33261+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33266+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33388+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33482+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33513+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39059+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39148+