ಜಾಮೀನು ನೀಡಿ ಎಂದು ಮನವಿ ಸಲ್ಲಿಸಿ ಕೋರ್ಟ್ ಮೊರೆ ಹೋದ ದರ್ಶನ್....
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಜೈಲ್ ಸೇರಿರೋದು ಎಲ್ಲರಿಗೂ ತಿಳಿದಿರುವ ವಿಷಯ .ಜೈಲ್ ನಲ್ಲಿ ಇರುವ ದರ್ಶನ್ ಯಾವಾಗ ಹೊರಗಡೆ ಬರೋದು ಎಂದು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ . ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ದರ್ಶನ್ ಅವರು ಈಗ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ಈ ಮೊದಲು ದರ್ಶನ್ ಅವರಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿತ್ತು. ಕಳೆದ ವರ್ಷ ಆಗಸ್ಟ್ 14ರಂದು ಅವರು ಮತ್ತೆ ಅರೆಸ್ಟ್ ಆದರು. ಈಗ ದರ್ಶನ್ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇಡಲಾಗಿದೆ. ಈಗ ದರ್ಶನ್ ಅವರು ಜಾಮೀನು ಕೋರಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ‘ಸಾಕ್ಷ್ಯ ವಿಚಾರಣೆ ವಿಳಂಬವಾಗುತ್ತಿದೆ’ ಎಂಬ ಕಾರಣ ನೀಡಿ ಏ.14ರಂದೇ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ. ಮುಂದಿನ ವಾರ ಸುಪ್ರೀಂಕೋರ್ಟ್ನಲ್ಲಿ ಅರ್ಜಿ ವಿಚಾರಣೆ ನಡೆಯುವ ಸಾಧ್ಯತೆ ಇದೆ.ದರ್ಶನ್ ಭವಿಷ್ಯ ಏನಾಗಲಿದೆ ಎಂಬುವುದನ್ನು ಕಾದು ನೋಡಬೇಕಾಗಿದೆ .