ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಾರಥ್ಯ ವಹಿಸಿಕೊಳ್ಳುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದ್ದಾರೆ. ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ವರದಿಗಳು ಹಾಗೂ ಚುನಾವಣಾ ಅಫಿಡವಿಟ್‌ಗಳ ಪ್ರಕಾರ, ದೇಶದ ಬೇರೆಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳನ್ನು ಹಿಂದಿಕ್ಕಿ ಡಿಕೆಶಿ ಮೊದಲ ಸ್ಥಾನದಲ್ಲಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯ ಅಫಿಡವಿಟ್‌ನಲ್ಲಿ ಡಿಕೆಶಿ ಸುಮಾರು 1,413 ಕೋಟಿ ರೂ. ಮೌಲ್ಯದ ಒಟ್ಟು ಆಸ್ತಿಯನ್ನು ಘೋಷಿಸಿಕೊಂಡಿದ್ದರು. ಈ ಪೈಕಿ 273 ಕೋಟಿ ಚರ ಆಸ್ತಿ ಇದ್ದರೆ ರಿಯಲ್ ಎಸ್ಟೇಟ್ ಮತ್ತು ಜಮೀನು ಸೇರಿ ಸ್ಥಿರ ಆಸ್ತಿ 1,140 ಕೋಟಿ ರೂ. ಇದೆ. 265 ಕೋಟಿ ರೂ.ಗಿಂತ ಹೆಚ್ಚು ತನಗೆ ಸಾಲವಿದೆ ಎಂದು ಹೇಳಿಕೊಂಡಿದ್ದರು.