ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!
ವರದಿಗಾರರು : Shobha jagadish | ಸ್ಥಳ : Bangalore | ದಿನಾಂಕ : 08-04-2026

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

ಬೆಂಗಳೂರು : ಕರ್ನಾಟಕದಲ್ಲಿ ತೆರಿಗೆ ಪಾವತಿಸದೆ ಅನ್ಯರಾಜ್ಯಗಳ ನೋಂದಣಿ ಸಂಖ್ಯೆಯ ವಾಹನಗಳನ್ನು ಬಳಸುತ್ತಿದ್ದ ಮಾಲೀಕರಿಗೆ ಸಾರಿಗೆ ಇಲಾಖೆ ಬಿಸಿ ಮುಟ್ಟಿಸಿದೆ. ಕಳೆದ ಐದು ವರ್ಷಗಳಲ್ಲಿ ನಡೆಸಿದ ವಿಶೇಷ ಕಾರ್ಯಾಚರಣೆಯ ಮೂಲಕ ಒಟ್ಟು 62.4 ಕೋಟಿ ರೂ. ದಂಡ ವಸೂಲಿ ಮಾಡಲಾಗಿದೆ. ಇದರಲ್ಲಿ ಬೆಂಗಳೂರು ನಗರದಲ್ಲಿಯೇ 54.6 ಕೋಟಿ ರೂ. ದಂಡ ವಿಧಿಸಲಾಗಿದೆ. ಕಡಿಮೆ ತೆರಿಗೆಯ ಆಸೆಗೆ ಪಾಂಡಿಚೇರಿ, ಗೋವಾದಂತಹ ರಾಜ್ಯಗಳಲ್ಲಿ ಐಷಾರಾಮಿ ವಾಹನ ಖರೀದಿಸಿ, ಎನ್‌ಒಸಿ ಪಡೆದೂ ಇಲ್ಲಿ ತೆರಿಗೆ ಕಟ್ಟದ 5,200ಕ್ಕೂ ಹೆಚ್ಚು ವಾಹನಗಳ ಮೇಲೆ ಪ್ರಕರಣ ದಾಖಲಿಸಲಾಗಿದೆ. ಕಡಿಮೆ ಹಣ ನೀಡಿ ನೆರೆರಾಜ್ಯಳಲ್ಲಿ ವಾಹನಗಳನ್ನು ಖರೀದಿಸಿ ತೆರಿಗೆ ಕಟ್ಟದೇ ಓಡಾಡುತ್ತಿದ್ದ ವಾಹನ ಸವಾರರಿಗೆ ಸಾರಿಗೆ ಇಲಾಖೆ ಬಿಸಿ ಮುಟ್ಟಿಸಿದೆ. ಕಳೆದ 5 ವರ್ಷಗಳಲ್ಲಿ ರಾಜ್ಯದ ವಿವಿಧೆಡೆ ವಿಶೇಷ ಕಾರ್ಯಾಚರಣೆಗಳ ಮೂಲಕ ಬರೋಬ್ಬರಿ 62.4 ಕೋಟಿ ರೂ. ದಂಡ ವಸೂಲಿ ಮಾಡಲಾಗಿದೆ. ಈ ಪೈಕಿ, ಬೆಂಗಳೂರಿನಲ್ಲಿ 54.6 ಕೋಟಿ ರೂ. ದಂಡ ಸಂಗ್ರಹವಾಗಿದೆ.ಸಾರಿಗೆ ಇಲಾಖೆ ನೀಡಿರುವ ಅಂಕಿ- ಅಂಶಗಳ ಪ್ರಕಾರ, ರಾಜ್ಯಾದ್ಯಂತ 773 ದ್ವಿಚಕ್ರ ವಾಹನ ಮಾಲೀಕರು ಹಾಗೂ 4,504 ಕಾರು ಮಾಲೀಕರ ವಿರುದ್ಧ ತೆರಿಗೆ ವಂಚನೆ ಸಂಬಂಧ ಪ್ರಕರಣ ದಾಖಲಾಗಿದೆ. ಈ ಪೈಕಿ ಬೆಂಗಳೂರಿನಲ್ಲಿ ಶೇ.85ರಷ್ಟು ಪ್ರಕರಣಗಳು ಪತ್ತೆಯಾಗಿದ್ದು, ನಗರದ 747 ದ್ವಿಚಕ್ರ ವಾಹನ ಮಾಲೀಕರು ಹಾಗೂ 3,739 ಕಾರು ಮಾಲೀಕರು ಕರ್ನಾಟಕಕ್ಕೆ ತೆರಿಗೆ ಪಾವತಿಸದೇ ನೆರೆರಾಜ್ಯದ ವಾಹನಗಳನ್ನು ಬಳಸಿರುವುದು ಬೆಳಕಿಗೆ ಬಂದಿದೆ.ತೆರಿಗೆ ಉಳಿಸಲು ಅನ್ಯರಾಜ್ಯದ ವಾಹನ ಖರೀದಿ ಮಾಡಿರುವುದು ಬೆಳಕಿಗೆ ಬಂದಿದೆ . ಈ ಬಗ್ಗೆ ಮಾಹಿತಿ ನೀಡಿರುವ ಹಿರಿಯ ಸಾರಿಗೆ ಅಧಿಕಾರಿಯೊಬ್ಬರು, ಬೇರೆ ರಾಜ್ಯಗಳಲ್ಲಿ ತೆರಿಗೆ ಕಡಿಮೆ ಇರುವುದರಿಂದ ಐಷಾರಾಮಿ ಕಾರು, ಬೈಕ್‌ಗಳನ್ನು ಖರೀದಿಸಲಾಗುತ್ತಿದೆ. ರಾಜ್ಯದಲ್ಲಿ ವಾಣಿಜ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡ ಅನೇಕರು ತೆರಿಗೆ ಉಳಿಸುವ ಸಲುವಾಗಿ ಅನ್ಯರಾಜ್ಯದ ವಾಹನಗಳ ಖರೀದಿಗೆ ಮುಂದಾಗುತ್ತಿದ್ದಾರೆ, ಎಂದು ಮಾಹಿತಿ ನೀಡಿದ್ದಾರೆ. ಬೇರೆ ರಾಜ್ಯಗಳ ವಾಹನಗಳನ್ನು ಖರೀದಿಸಿದ ಬಳಿಕ, ಎನ್‌ಒಸಿ ಪಡೆದರೂ ಕೆಲ ಮಾಲೀಕರು ಕರ್ನಾಟಕದಲ್ಲಿ ತೆರಿಗೆ ಪಾವತಿಸದೇ ವಾಹನಗಳನ್ನು ಬಳಸುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ದಿಲ್ಲಿ, ಕೇರಳ, ಪಾಂಡಿಚೇರಿ, ಗೋವಾ ಸೇರಿದಂತೆ ಬೇರೆ ಬೇರೆ ಭಾಗದ ವಾಹನಗಳು ಹೆಚ್ಚಾಗಿ ನಿಯಮ ಉಲ್ಲಂಘಿಸಿ ರಸ್ತೆಗೆ ಇಳಿಯುತ್ತಿರುವುದು ಕಾರ್ಯಾಚರಣೆ ವೇಳೆ ಬಯಲಾಗಿದೆ. 2021-22 ರಲ್ಲಿ 232 ದ್ವಿಚಕ್ರ ವಾಹನಗಳು, 424 ಕಾರು ಮಾಲೀಕರು ನಿಯಮ ಉಲ್ಲಂಘಿಸಿದ್ದರು. ಈ ಪೈಕಿ 226 ದ್ವಿಚಕ್ರ ವಾಹನಗಳು, 395 ಕಾರುಗಳು ನಗರ ವ್ಯಾಪ್ತಿಗೆ ಸೇರಿವೆ. 2025-26ರಲ್ಲಿ 164 ದ್ವಿಚಕ್ರ ವಾಹನ ಮಾಲೀಕರು, 2,278 ಕಾರು ಮಾಲೀಕರ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ವೇಳೆ ಇಲಾಖೆ 41.4 ಕೋಟಿ ರೂ. ತೆರಿಗೆ ಮತ್ತು ದಂಡ ಸಂಗ್ರಹಿಸಿತ್ತು. ಇದರಲ್ಲಿ ಬೆಂಗಳೂರು ವ್ಯಾಪ್ತಿಯಲ್ಲೇ 34.5 ಕೋಟಿ ರೂ. ಆದಾಯ ಹರಿದುಬಂದಿತ್ತು.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 960+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 4008+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 4049+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 4106+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 4208+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 4256+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 4288+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 4332+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 4379+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 4393+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 4467+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 4527+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6748+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6810+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6861+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 6916+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 7078+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 7106+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 7236+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 7417+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9619+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9784+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9845+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 10017+