ಬೆಂಗಳೂರಿನಲ್ಲಿ ಸಿಲಿಂಡರ್ ಕಳ್ಳರ ಹಾವಳಿ ಹೆಚ್ಚಳ ...! ಅಪಾರ್ಟ್ಮೆಂಟ್ ನಿಂದ ಸಿಲಿಂಡರ್ ಕಳ್ಳತನ
ಬೆಂಗಳೂರು: ಪಶ್ಚಿಮ ಏಷ್ಯಾದ ಯುದ್ಧದ ಪರಿಣಾಮವಾಗಿ ಎಲ್‌ಪಿಜಿ ಕೊರತೆ ಎದುರಿಸುತ್ತಿರುವ ಈ ಸಂದರ್ಭದಲ್ಲಿ, ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕಳವು ಪ್ರಕರಣಗಳು ಆತಂಕ ಹುಟ್ಟಿಸಿದೆ. ಮಡಿವಾಳದ ಆರ್‌ಸಿ ಲೇಔಟ್‌ನ ಸಾಯಿ ರೆಸಿಡೆನ್ಸಿ ಅಪಾರ್ಟ್‌ಮೆಂಟ್‌ನಲ್ಲಿ ಇಬ್ಬರು ದುಷ್ಕರ್ಮಿಗಳು ಎರಡು ಗ್ಯಾಸ್ ಸಿಲಿಂಡರ್‌ಗಳನ್ನು ಕದ್ದೊಯ್ದ ಘಟನೆ ಬೆಳಕಿಗೆ ಬಂದಿದೆ. ಗುರುವಾರ ಮಧ್ಯಾಹ್ನ ಸುಮಾರು 2.45ರ ಸುಮಾರಿಗೆ ಜಾಕೆಟ್ ಮತ್ತು ಹೆಲ್ಮೆಟ್ ಧರಿಸಿ ಸ್ಕೂಟರ್ ನಲ್ಲಿ ಬಂದಿರುವ ಇಬ್ಬರು ದುಷ್ಕರ್ಮಿಗಳು ಅಪಾರ್ಟ್‌ಮೆಂಟ್‌ನ ನೆಲಮಹಡಿಯಿಂದ ಸಿಲಿಂಡರ್‌ಗಳನ್ನು ಕದ್ದಿದ್ದಾರೆ. ಸಿಸಿಟಿವಿ ಕ್ಯಾಮೆರಾಗಳಲ್ಲಿ ದೃಶ್ಯ ಸೆರೆಯಾಗಿದ್ದು, ಕೇವಲ ಐದು ನಿಮಿಷಗಳಲ್ಲಿ ಕಳ್ಳತನ ನಡೆಸಿ ಸ್ಥಳದಿಂದ ಕಾಲ್ಕಿತ್ತಿರುವುದು ವೀಡಿಯೋದಲ್ಲಿ ಕಂಡು ಬಂದಿದೆ.