ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ರಾಗಿ ಕಟಾವು ಯಂತ್ರ ಬಾಡಿಗೆಗೆ ಕೊರಟಗೆರೆಯಲ್ಲಿ ರೂ. 2,700 ನಿಗದಿ
ವರದಿಗಾರರು : ಸುರೇಶ | ಸ್ಥಳ : ತುಮಕೂರು | ದಿನಾಂಕ : 21-11-2025

ರಾಗಿ ಕಟಾವು ಯಂತ್ರ ಬಾಡಿಗೆಗೆ ಕೊರಟಗೆರೆಯಲ್ಲಿ ರೂ. 2,700 ನಿಗದಿ

ಕೊರಟಗೆರೆ: ತಾಲ್ಲೂಕಿನಲ್ಲಿ ರಾಗಿ ಕಟಾವು ಯಂತ್ರಗಳ ಬಾಡಿಗೆ ದರವನ್ನು ಪ್ರತಿ ಗಂಟೆಗೆ ರೂ. 2,700 ಎಂದು ನಿಗದಿಪಡಿಸಲಾಗಿದ್ದು, ಇದಕ್ಕಿಂತ ಹೆಚ್ಚಾಗಿ ಹಣ ಬೇಡಿಕೆ ಮಾಡುವವರ ವಿರುದ್ಧ ವಿಪತ್ತು ನಿರ್ವಹಣೆ ಕಾಯ್ದೆ–2005ರಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್ ಮಂಜುನಾಥ ಕೆ. ಸ್ಪಷ್ಟಪಡಿಸಿದರು. ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ರೈತ ಮುಖಂಡರು ಹಾಗೂ ಕಟಾವು ಯಂತ್ರ ಮಾಲೀಕರೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು. 2025–26ರ ಮುಂಗಾರು ಹಂಗಾಮಿನಲ್ಲಿ ತಾಲ್ಲೂಕಿನಲ್ಲಿ 12,180 ಹೆಕ್ಟೇರ್ ಪ್ರದೇಶದಲ್ಲಿ ರಾಗಿ ಬಿತ್ತನೆ ನಡೆದಿದ್ದು, ಕಳೆದ ವರ್ಷದ ಹೊಲಿಕೆಗೆ ಹೋಲಿಸಿದರೆ ಈ ಬಾರಿ ಉತ್ತಮ ಮಳೆಯಿಂದ 3000 ಹೆಕ್ಟೇರ್ ಹೆಚ್ಚು ವಿಸ್ತೀರ್ಣದಲ್ಲಿ ಬಿತ್ತನೆಯಾಗಿದೆ. ಇದೀಗ ರಾಗಿ ಕಟಾವು ಹಂತ ತಲುಪಿರುವುದರಿಂದ ಬಳ್ಳಾರಿ ಜಿಲ್ಲೆಯಿಂದ 15–20 ಕಟಾವು ಯಂತ್ರಗಳು ತಾಲ್ಲೂಕಿಗೆ ಆಗಮಿಸಿರುವುದಾಗಿ ಮಾಹಿತಿ ನೀಡಿದರು.

ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನವೆಂಬರ್ 11ರಂದು ನಡೆದ ಸಭೆಯಲ್ಲಿ ಕಟಾವು ಯಂತ್ರಗಳ ಬಾಡಿಗೆ ದರ ಅಂತಿಮಗೊಳಿಸಲಾಗಿರುವುದಾಗಿ ಅವರು ತಿಳಿಸಿದರು. ನಿಗದಿಪಡಿಸಿದ ದರವನ್ನು ಮಾತ್ರ ರೈತರಿಂದ ವಸೂಲಿಸಬೇಕು ಎಂದು ಯಂತ್ರ ಮಾಲೀಕರು ಹಾಗೂ ಗುತ್ತಿಗೆದಾರರಿಗೆ ಸೂಚಿಸಲಾಯಿತು. ಸಹಾಯಕ ಕೃಷಿ ನಿರ್ದೇಶಕ ಎಂ. ಆರ್. ರುದ್ರಪ್ಪ ಮಾತನಾಡಿ, ಟ್ರ್ಯಾಕ್ಟರ್ ಚಾಲಿತ ಕಟಾವು ಯಂತ್ರಗಳಿಗೆ ರೂ. 2,400 ಬಾಡಿಗೆ ಹಾಗೂ ರಾಗಿ ಕಂತೆ ಮಾಡಲು ಬಳಸುವ ಬೇಲರ್‌ಗಳಿಗೆ ಪ್ರತಿ ಕಂತೆಗೆ ರೂ. 25 ನಿಗದಿ ಮಾಡಲಾಗಿದೆ ಎಂದು ತಿಳಿಸಿದರು. ನಿಗದಿತ ದರಕ್ಕಿಂತ ಹೆಚ್ಚಾಗಿ ಹಣ ವಸೂಲಿ ಮಾಡಿದರೆ, ಹತ್ತಿರದ ರೈತ ಸಂಪರ್ಕ ಕೇಂದ್ರ, ಕಂದಾಯ ಇಲಾಖೆ ಅಥವಾ ಪೊಲೀಸ್ ಠಾಣೆಯಲ್ಲಿ ದೂರು ನೀಡುವಂತೆ ರೈತರಿಗೆ ಕರೆ ನೀಡಿದರು. ಸಭೆಯಲ್ಲಿ ಕೃಷಿ ಇಲಾಖೆಯ ಸಿಬ್ಬಂದಿ ನರಸಿಂಹಮೂರ್ತಿ, ನಾಗರಾಜು, ವೆಂಕಟೇಶ್, ರೈತ ಮುಖಂಡರು ಹಾಗೂ ಕಟಾವು ಯಂತ್ರ ಮಾಲೀಕರು ಹಾಜರಿದ್ದರು.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1618+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1848+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4311+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4489+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4510+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4589+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7068+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7549+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7587+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12782+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12906+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13181+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13202+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27170+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30208+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30228+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30257+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33261+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33266+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33388+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33482+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33513+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39059+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39148+