ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಕಾಂಗ್ರೆಸ್ ವಿರುದ್ಧ ಬಂಡಾಯ ಸಾರಿದ ಸಾದಿಕ್ ಪೈಲ್ವಾನ್...
ವರದಿಗಾರರು : Shobha jagadish | ಸ್ಥಳ : ಬೆಂಗಳೂರು | ದಿನಾಂಕ : 23-03-2026

ಕಾಂಗ್ರೆಸ್ ವಿರುದ್ಧ ಬಂಡಾಯ ಸಾರಿದ ಸಾದಿಕ್ ಪೈಲ್ವಾನ್...

ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆ ಕಣ ರಂಗೇರಿದೆ. ಅಲ್ಪಸಂಖ್ಯಾತರಿಗೆ ಕಾಂಗ್ರೆಸ್ ಟಿಕೆಟ್ ನಿರಾಕರಿಸಿದ್ದರಿಂದ ಅಸಮಾಧಾನ ಭುಗಿಲೆದ್ದಿದ್ದು, ಸಾದಿಕ್ ಪೈಲ್ವಾನ್ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದಾರೆ. ನಾಮಪತ್ರ ಸಲ್ಲಿಕೆಯ ಕೊನೆಯ ದಿನ ರಾಜಕೀಯ ಹೈಡ್ರಾಮಾ ನಡೆಯುವ ಸಾಧ್ಯತೆಗಳಿದ್ದು, ಕಾಂಗ್ರೆಸ್‌ಗೆ ಬಂಡಾಯಗಾರರ ಸವಾಲು ಎದುರಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ದಾವಣಗೆರೆಗೆ ಆಗಮಿಸಿ ಪಕ್ಷದ ಅಭ್ಯರ್ಥಿ ಸಮರ್ಥ್ ಶಾಮನೂರುಗೆ ಬೆಂಬಲ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ . ದಾವಣಗೆರೆ ನಗರದಲ್ಲಿ ಇಂದು ರಾಜಕೀಯ ಹೈಡ್ರಾಮಾ ನಡೆಯುವ ಸಾಧ್ಯತೆ ತೀವ್ರವಾಗಿದೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆಯಲಿರುವ ಉಪಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಅಲ್ಪಸಂಖ್ಯಾತರಿಗೆ ಸಿಗದ ಹಿನ್ನೆಲೆ ಅಸಮಾಧಾನ ಭುಗಿಲೆದ್ದಿದ್ದು, ಹಲವು ಅಭ್ಯರ್ಥಿಗಳು ಸ್ವತಂತ್ರವಾಗಿ ಮತ್ತು ಬೇರೆ ಪಕ್ಷಗಳಿಂದ ಕಣಕ್ಕಿಳಿಯಲು ತಯಾರಿ ನಡೆಸಿದ್ದಾರೆ. ಅಲ್ಪಸಂಖ್ಯಾತ ಸಮುದಾಯದ ನಾಯಕರು ಕಾಂಗ್ರೆಸ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಎಐಎಂಐಎಂ, ಎಸ್‌ಡಿಪಿಐ, ಆಮ್ ಆದ್ಮಿ ಪಕ್ಷ ಹಾಗೂ ಪಕ್ಷೇತರ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಲು ನಿರ್ಧರಿಸಿದ್ದಾರೆ. ವಿಶೇಷವಾಗಿ ಸಮಾಜದ ಮುಖಂಡ ಸಾದಿಕ್ ಪೈಲ್ವಾನ್ ಪಕ್ಷೇತರರಾಗಿ ಸ್ಪರ್ಧಿಸಲು ಮುಂದಾಗಿರುವುದು ಗಮನ ಸೆಳೆದಿದೆ.ಇಂದು ಅಂದರೆ ಮಾರ್ಚ್ 23 ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿರುವುದರಿಂದ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಕಾಂಗ್ರೆಸ್ ಹಾಗೂ ಬಿಜೆಪಿಯಿಂದ ಭಾರೀ ಮೆರವಣಿಗೆಗಳು ನಡೆಯಲಿದ್ದು, ಅದೇ ವೇಳೆ ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದಲೂ ನಾಮಪತ್ರ ಸಲ್ಲಿಕೆ ನಡೆಯಲಿದೆ. ಮಾರ್ಚ್ 22ರಂದು ಅಲ್ಪಸಂಖ್ಯಾತ ಯುವಕರು ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸಿ, ದಾವಣಗೆರೆ ಹಾಗೂ ಬಾಗಲಕೋಟೆಯಲ್ಲಿ ‘ಪಾಠ ಕಲಿಸುತ್ತೇವೆ’ ಎಂದು ಎಚ್ಚರಿಕೆ ನೀಡಿದ್ದರು. ರಾಜಕೀಯ ಹೈಡ್ರಾಮಾ ನಡೆಯಬಹುದಾದ ಸಾಧ್ಯತೆ ಹಿನ್ನೆಲೆ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಶಿವಮೊಗ್ಗ, ಚಿತ್ರದುರ್ಗ ಮತ್ತು ಹಾವೇರಿ ಜಿಲ್ಲೆಗಳಿಂದ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ಕರೆಯಲಾಗಿದೆ. ನಗರದ ಪ್ರಮುಖ ಪ್ರದೇಶಗಳಲ್ಲಿ ಪೊಲೀಸರು ಕಟ್ಟುನಿಟ್ಟಿನ ನಿಗಾವಹಿಸಿದ್ದಾರೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1618+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1848+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4311+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4489+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4510+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4589+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7068+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7549+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7587+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12782+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12906+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13181+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13202+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27170+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30208+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30228+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30257+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33261+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33266+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33388+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33482+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33513+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39059+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39148+