ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಬಾಯ್​ಫ್ರೆಂಡ್​ನನ್ನು ಪ್ರೀತಿಸಲು  ಅಡ್ಡಿಯಾದ ಹೆತ್ತವರಿಗೆ ವಿಷವಿಟ್ಟ ಅಪ್ರಾಪ್ತ ಮಗಳು ...
ವರದಿಗಾರರು : Shobha jagadish | ಸ್ಥಳ : Bangalore | ದಿನಾಂಕ : 13-04-2026

ಬಾಯ್​ಫ್ರೆಂಡ್​ನನ್ನು ಪ್ರೀತಿಸಲು ಅಡ್ಡಿಯಾದ ಹೆತ್ತವರಿಗೆ ವಿಷವಿಟ್ಟ ಅಪ್ರಾಪ್ತ ಮಗಳು ...

ಮಧ್ಯಪ್ರದೇಶದ ಮೊರೆನಾದಲ್ಲಿ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ . ಬಾಯ್​ಫ್ರೆಂಡ್​ನನ್ನು ಮದುವೆಯಾಗಲು ಅಪ್ರಾಪ್ತ ಬಾಲಕಿಯೊಬ್ಬಳು ತನ್ನ ಹೆತ್ತವರಿಗೆ ಚಪಾತಿಯಲ್ಲಿ ಇಲಿ ವಿಷ ಬೆರೆಸಿ ಕೊಲೆಗೆ ಯತ್ನಿಸಿದ್ದಾಳೆ. ಪೋಷಕರ ಆರೋಗ್ಯ ಚಿಂತಾಜನಕವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಆಡಿಯೋ ಸಾಕ್ಷ್ಯದ ಆಧಾರದ ಮೇಲೆ ಬಾಲಕಿ ಮತ್ತು ಆಕೆಯ ಗೆಳೆಯನ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಾಗಿದೆ. ಅಪ್ರಾಪ್ತ ಬಾಲಕಿಯೊಬ್ಬಳು ಬಾಯ್​ಫ್ರೆಂಡ್​ನನ್ನು ಮದುವೆಯಾಗಲು ತನ್ನ ಹೆತ್ತವರಿಗೆ ವಿಷ ಉಣಿಸಿರುವ ಘಟನೆ ಮಧ್ಯಪ್ರದೇಶದ ಮರೆನಾದಲ್ಲಿ ನಡೆದಿದೆ. ಪ್ರೀತಿಯ ಅಮಲಿನಲ್ಲಿ ಕುರುಡಾದ ಮಗಳೊಬ್ಬಳು, ಹೆತ್ತವರನ್ನೇ ಮುಗಿಸಲು ಸಂಚು ರೂಪಿಸಿದ ಕರಾಳ ಕಥೆ ಇಲ್ಲಿದೆ. ಹೆತ್ತವರು ಮಗಳ ಮೇಲೆ ಇಟ್ಟಿದ್ದ ನಂಬಿಕೆ ಹುಸಿಯಾಗಿದೆ, ಚಪಾತಿಯಲ್ಲಿ ಇಲಿ ಪಾಷಾಣ ಬೆರೆಸಿ ಪೋಷಕರಿಗೆ ನೀಡಿರುವ ಘಟನೆ ಬೆಳಕಿಗೆ ಬಂದಿದೆ . ಮೊರೆನಾ ಜಿಲ್ಲೆಯ ಪೋರ್ಸಾ ಎಂಬಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳು ತನ್ನ ಗೆಳೆಯನ ಜೊತೆ ಸೇರಿ ತಂದೆ-ತಾಯಿಯನ್ನೇ ಕೊಲೆ ಮಾಡಲು ಯತ್ನಿಸಿದ್ದಾಳೆ. ತನ್ನ ಪ್ರೇಮಕ್ಕೆ ಅಡ್ಡಿಯಾಗುತ್ತಾರೆಂಬ ಕಾರಣಕ್ಕೋ ಏನೋ, ಈ ಬಾಲಕಿ ತನ್ನ ಗೆಳೆಯ ಸುದಾಮನ ಜೊತೆ ಸೇರಿ ಕ್ರೂರ ಯೋಜನೆಯೊಂದನ್ನು ರೂಪಿಸಿದ್ದಳು. ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿ, ತಾನೇ ಅಡುಗೆ ಮಾಡುವ ಜವಾಬ್ದಾರಿ ವಹಿಸಿಕೊಂಡ ಬಾಲಕಿ, ಚಪಾತಿಯ ಹಿಟ್ಟಿನಲ್ಲಿ ಇಲಿ ವಿಷವನ್ನು ಬೆರೆಸಿದ್ದಾಳೆ. ಇದನ್ನು ತಿಂದ ತಾಯಿ ಮಿಥಿಲೇಶ್ ಮತ್ತು ತಂದೆ ಗಬ್ಬರ್ ಪ್ರಜಾಪತಿ ಅವರ ಆರೋಗ್ಯ ತಕ್ಷಣವೇ ಹದಗೆಟ್ಟಿದೆ. ಸದ್ಯ ಇಬ್ಬರ ಸ್ಥಿತಿಯೂ ಚಿಂತಾಜನಕವಾಗಿದ್ದು, ಮೊರೆನಾದಿಂದ ಗ್ವಾಲಿಯರ್‌ನ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳಾಂತರಿಸಲಾಗಿದೆ. ಈ ಪ್ರಕರಣವು ಆರಂಭದಲ್ಲಿ ಕೇವಲ ಫುಡ್​ಪಾಯ್ಸನ್​ನಂತೆ ತೋರಿತ್ತು. ಆದರೆ ಪೊಲೀಸರಿಗೆ ಸಿಕ್ಕ ಒಂದು ಆಡಿಯೋ ಕ್ಲಿಪ್ ಇಡೀ ಕಥೆಯನ್ನೇ ಬದಲಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಈ ಆಡಿಯೋದಲ್ಲಿ ಬಾಲಕಿ ಮತ್ತು ಆಕೆಯ ಗೆಳೆಯ ಸುದಾಮ ಪರಸ್ಪರ ಸಂಚು ಹೂಡುತ್ತಿರುವುದು ಸ್ಪಷ್ಟವಾಗಿದೆ.ಹತ್ತಿರದಲ್ಲೇ ಗೊಬ್ಬರದ ಅಂಗಡಿ ಇದೆ, ಅಲ್ಲಿಂದ ಇಲಿ ವಿಷ ತಂದಿಟ್ಟುಕೊ. ಇವತ್ತು ನಾನೇ ರೊಟ್ಟಿ ಮಾಡುತ್ತಿದ್ದೇನೆ, ನನಗೆ ಒಳ್ಳೆಯ ಅವಕಾಶ ಸಿಕ್ಕಿದೆ. ರೊಟ್ಟಿಯಲ್ಲಿ ವಿಷ ಬೆರೆಸಿ ಅವರಿಗೆ ತಿನ್ನಿಸಿಬಿಡುತ್ತೇನೆ ಎಂದು ಆಕೆ ಹೇಳಿದ್ದಳು. ಈ ಒಂದು ಸಂಭಾಷಣೆ ಪೊಲೀಸರ ಕೈಗೆ ಸಿಕ್ಕ ನಂತರವೇ ಮಗಳ ಕ್ರೂರ ಮುಖ ಅನಾವರಣಗೊಂಡಿತು. ಪೋಷಕರಾದ ಮಿಥಿಲೇಶ್ ಮತ್ತು ಗಬ್ಬರ್ ಪ್ರಜಾಪತಿ ಅವರು ಪ್ರಾಣಾಪಾಯದಿಂದ ಪಾರಾದ ನಂತರ ಪೋರ್ಸಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆಡಿಯೋ ಸಾಕ್ಷ್ಯ ಮತ್ತು ಪೋಷಕರ ದೂರಿನ ಆಧಾರದ ಮೇಲೆ ಪೊಲೀಸರು ಅಪ್ರಾಪ್ತ ಬಾಲಕಿ ಮತ್ತು ಆಕೆಯ ಗೆಳೆಯ ಸುದಾಮನ ವಿರುದ್ಧ ಕೊಲೆ ಯತ್ನದ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಪೊಲೀಸರು ಈ ಇಬ್ಬರನ್ನೂ ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1648+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1878+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4341+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4519+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4540+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4619+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7098+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7579+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7617+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12812+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12936+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13211+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13232+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27200+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30238+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30258+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30287+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33291+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33296+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33418+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33512+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33543+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39089+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39178+