ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಹೊಸ ವರ್ಷಾಚರಣೆ ವೇಳೆ ಯುವಕರು ಅಶ್ಲೀಲ, ಅಸಭ್ಯವಾಗಿ ವರ್ತಿಸಿದರೆ ಹುಷಾರ್:
ವರದಿಗಾರರು : ದರ್ಶನ್ ಎಂ. ಎನ್ | ಸ್ಥಳ : ದಾವಣಗೆರೆ | ದಿನಾಂಕ : 30-12-2025

ಹೊಸ ವರ್ಷಾಚರಣೆ ವೇಳೆ ಯುವಕರು ಅಶ್ಲೀಲ, ಅಸಭ್ಯವಾಗಿ ವರ್ತಿಸಿದರೆ ಹುಷಾರ್:

2025 ಮುಗಿದು 2026 ಬರಮಾಡಿಕೊಳ್ಳಲು ಎಲ್ಲೆಡೆ ಸಿದ್ಧತೆ ಜೋರಾಗಿದೆ. ದಾವಣಗೆರೆ ಜಿಲ್ಲೆಯಲ್ಲಿಯೂ ಹೊಸವರ್ಷಾಚರಣೆ ಬರುವಿಕೆಗೆ ಜನರು ಕಾಯುತ್ತಿದ್ದಾರೆ. ಈ ವೇಳೆ ಯುವಕರು ಅಶ್ಲೀಲ ಹಾಗೂ ಅಸಭ್ಯವಾಗಿ ವರ್ತಿಸಿದರೆ ಹಾಗೂ ವಿಶೇಷವಾಗಿ ಹೆಣ್ಣು ಮಕ್ಕಳಿಗೆ ಚುಡಾಯಿಸುವುದು, ದಾಂದಲೇ ನಡೆಸುವುದು, ಮಹಿಳೆಯರಿಗೆ ತೊಂದರೆ ಉಂಟುಮಾಡುವುದು ಕಂಡು ಬಂದರೆ ಅಂತವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಎಚ್ಚರಿಕೆ ನೀಡಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಅಮಲು ಅಥವಾ ಮಧ್ಯ ನಶೆಯಲ್ಲಿ ಆಚರಣೆ ಮಾಡಿ ಸಾರ್ವಜನಿಕರಿಗೆ ಶಾಂತಿಗೆ ತೊಂದರೆ ನೀಡಿದರೆ ಅಂತಹವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು. ಹೊಸ ವರ್ಷಾಚರಣೆ ಆಚರಣೆ ಕಾರ್ಯಕ್ರಮಗಳ ಆಯೋಜಕರುಗಳು ಕಡ್ಡಾಯವಾಗಿ ಸಿಸಿಟಿವಿಗಳನ್ನು ಅಳವಡಿಸಬೇಕು ಸಾರ್ವಜನಿಕರು ಮುಖ್ಯವಾಗಿ ಯುವಕರು ಬೇರೆಯವರಿಗೆ ತೊಂದೆರೆಯಾಗದ ರೀತಿಯಲ್ಲಿ ಹೊಸ ವರ್ಷಾಚರಣೆ ಮಾಡಲು ಸೂಚಿಸಿದೆ.

ವಾಹನಗಳನ್ನು ಅತೀ ವೇಗವಾಗಿ ಚಾಲನೆ ಮಾಡುತ್ತಾ, ಸಾರ್ವಜನಿಕರಿಗೆ ತೊಂದರೆಯಾಗುವಂತೆ ಜೋರಾಗಿ ಕೂಗುವುದು, ಕಿರಿಚುವುದನ್ನು ನಿಷೇಧಿಸಿಲಾಗಿದ್ದು. ಅಂತವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕ/ಜನ ಸಂದಣಿ ಪ್ರದೇಶಗಳಲ್ಲಿ ಪಟಾಕಿಗಳನ್ನು ಸಿಡಿಸಬಾರದು ಹಾಗೂ ಯಾವುದೇ ಅಗ್ನಿಅವಘಡಗಳು ಆಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವುದು. ಜಿಲ್ಲೆಯಲ್ಲಿ ಹೊಸ ವರ್ಷಾಚರಣೆ ಸಂಧರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದೇ ಶಾಂತಿಯುತವಾಗಿ ಹಾಗೂ ಸೌಹಾರ್ಧಯುತವಾಗಿ ಆಚರಿಸುವುದು, ಯಾವುದೇ ಅಹಿತಕರ ಘಟನೆಗಳು ಕಂಡುಬಂದರೆ ತುರ್ತು ಸಹಾಯವಣಿ 112 ಗೆ ಕರೆ ಮಾಡುವುದು ಹಾಗೂ ಸ್ಥಳೀಯ ಪೊಲೀಸ್ ಠಾಣೆ/ಪೊಲೀಸ್ ಅಧಿಕಾರಿ ಸಿಬ್ಬಂದಿಗಳಿಗೆ ಮಾಹಿತಿ ನೀಡಲು ಕೋರಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಕೋಮುಪ್ರಚೋದಕ ಹಾಗೂ ಧಾರ್ಮಿಕ ನಿಂದನೆ, ಸುಳ್ಳುಸುದ್ದಿ ಹರಡುವುದು, ಕಾನೂನು ಸುವ್ಯವಸ್ಥೆಗೆ ದಕ್ಕೆ ಬರುವಂತಹ ಪೋಸ್ಟ್ಗಳನ್ನು ಹಾಕುವುದಾಗಲೀ ಹಾಗು ಶೇರ್ ಮಾಡುವುದಾಗಲೀ ಕಂಡು ಬಂದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಾಲಾಗುವುದು.

ಹೊಸ ವರ್ಷಾಚರಣೆ ಸಂಧರ್ಭದಲ್ಲಿ ಕರ್ಕಶವಾದ ಶಬ್ಧವನ್ನುಂಟು ಮಾಡುವ ಸೌಂಡ್ ಸಿಸ್ಟಂ ಮತ್ತು ಡಿಜೆಗಳನ್ನು ಉಪಯೋಗಿಸಬಾರದು, ಲೌಡ್ ಸ್ಪೀಕರ್ ಗಳನ್ನು ಸರ್ವೋಚ್ಚ ನ್ಯಾಯಾಲಯ ಮತ್ತು ಸರ್ಕಾರದ ಆದೇಶಗಳನ್ನು ಉಲ್ಲಂಘನೆ ಆಗದಂತೆ ಮತ್ತು ಶಬ್ದ ಮಾಲಿನ್ಯ ಆಗದಂತೆ ಧ್ವನಿವರ್ಧಕಗಳನ್ನು ಬಳಸುವುದು. ಉಲ್ಲಂಘಿಸಿದ್ದಲ್ಲಿ ಕಾನೂನು ರಿತ್ಯಾ ಕ್ರಮ ಕೈಗೊಳ್ಳಲಾಗುವುದು.

ನೈತಿಕ ಪೊಲೀಸ್ ಗಿರಿ ಮತ್ತು ಅನುಚಿತ ವರ್ತನೆ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಹೊಸ ವರ್ಷಾಚರಣೆ ಆಚರಣೆ ನಡೆಸುವ ಆಯೋಜಕರು ವಾಹನಗಳ ಪಾರ್ಕಿಂಗ್ ಗಾಗಿ ಪ್ರತ್ಯೇಕ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ಇಲಾಖೆಯು ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 1092+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 4140+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 4181+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 4238+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 4340+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 4388+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 4420+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 4464+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 4512+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 4525+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 4599+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 4659+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6879+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6942+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6993+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 7049+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 7210+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 7238+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 7368+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 7549+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9752+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9917+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9978+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 10149+