ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

 ದಾವಣಗೆರೆಯಲ್ಲಿ ಮಳೆಯಲ್ಲೇ ‘ಕೈ’ ನಾಯಕರ ಘರ್ಜನೆ..! ಚರಂತಿಮಠ ಪರ ಯತ್ನಾಳ್ ಮತಬೇಟೆ!
ವರದಿಗಾರರು : shobha jagadish | ಸ್ಥಳ : ಬೆಂಗಳೂರು | ದಿನಾಂಕ : 03-04-2026

ದಾವಣಗೆರೆಯಲ್ಲಿ ಮಳೆಯಲ್ಲೇ ‘ಕೈ’ ನಾಯಕರ ಘರ್ಜನೆ..! ಚರಂತಿಮಠ ಪರ ಯತ್ನಾಳ್ ಮತಬೇಟೆ!

ದಾವಣಗೆರೆ : ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆ ಪ್ರಚಾರ ಕೊನೆಯ ಹಂತದಲ್ಲಿದೆ. ದಾವಣಗೆರೆಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಕಾಂಗ್ರೆಸ್ ಪರ ಅಬ್ಬರಿಸಿದರೆ, ಬಾಗಲಕೋಟೆಯಲ್ಲಿ ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ಕೇಸರಿ ಅಭ್ಯರ್ಥಿ ಪರ ಪ್ರಚಾರ ಮಾಡಿ ಅಚ್ಚರಿ ಮೂಡಿಸಿದ್ದಾರೆ. ಮಳೆ, ಅಲ್ಪಸಂಖ್ಯಾತ ಮತಗಳ ಧ್ರುವೀಕರಣ, ಹಾಗೂ ಯತ್ನಾಳ್ ನಡೆ ಈ ಚುನಾವಣೆಗಳನ್ನು ಇನ್ನಷ್ಟು ಕುತೂಹಲಕಾರಿಯನ್ನಾಗಿಸಿವೆ. ಕರ್ನಾಟಕದ ಎರಡು ಪ್ರಮುಖ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಪ್ರಚಾರ ಅಂತಿಮ ಘಟ್ಟಕ್ಕೆ ತಲುಪಿದ್ದು, ಅಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿ ನಡುವೆ ಬಿರುಸಿನ ಪೈಪೋಟಿ ಏರ್ಪಟ್ಟಿದೆ. ದಾವಣಗೆರೆ ದಕ್ಷಿಣದ ಪ್ರಚಾರ ಕಣದಲ್ಲಿ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅಬ್ಬರಿಸಿದರೆ, ಬಾಗಲಕೋಟೆಯಲ್ಲಿ ಬಿಜೆಪಿಯಿಂದ ಉಚ್ಚಾಟಿತರಾಗಿರುವ ಬಸನಗೌಡ ಪಾಟೀಲ್ ಯತ್ನಾಳ್ ಕೇಸರಿ ಅಭ್ಯರ್ಥಿ ಪರ ಬ್ಯಾಟಿಂಗ್ ಮಾಡಿ ಅಚ್ಚರಿ ಮೂಡಿಸಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರವು ಕಾಂಗ್ರೆಸ್‌ಗೆ ಪ್ರತಿಷ್ಠೆಯ ಕಣವಾಗಿದೆ. ಇಲ್ಲಿನ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಪರವಾಗಿ ಗುರುವಾರ ಅಕ್ತರ್ ರಾಜಾ ಸರ್ಕಲ್‌ನಲ್ಲಿ ಬೃಹತ್ ಸಮಾವೇಶ ನಡೆಯಿತು. ಸಮಾವೇಶದ ವೇಳೆ ಭಾರಿ ಮಳೆ ಸುರಿದರೂ ಲೆಕ್ಕಿಸದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರು ಅಬ್ಬರದ ಭಾಷಣ ಮಾಡಿದರು. ಈ ವೇಳೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಪುತ್ರ ಸಮರ್ಥ್ ಶಾಮನೂರು ಅವರು ಡಿಸಿಎಂಗೆ ಕೊಡೆ ಹಿಡಿದು ನಿಂತಿದ್ದು ಎಲ್ಲರ ಗಮನ ಸೆಳೆಯಿತು. ಬಿಜೆಪಿ ಅಲ್ಪಸಂಖ್ಯಾತರ ವಿರೋಧಿಯಾಗಿದ್ದು ಯಾವುದೇ ಕಾರಣಕ್ಕೂ ಗೆಲ್ಲಬಾರದು ಎಂದು ಕರೆ ನೀಡಿದರು. ಅಸಮಾಧಾನಗೊಂಡಿದ್ದ ಮುಸ್ಲಿಂ ಮುಖಂಡರಾದ ದಾದುಸೇಟ್ ಸೇರಿದಂತೆ ಹಲವರ ಮನೆಗಳಿಗೆ ಸಿಎಂ ಖುದ್ದಾಗಿ ಭೇಟಿ ನೀಡಿ ಮನವೊಲಿಸುವಲ್ಲಿ ಯಶಸ್ವಿಯಾದರು. ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಕೂಡ ಸಮರ್ಥ್ ಪರವಾಗಿ ‘ನಿಮ್ಮ ಮನೆಯ ಮಗ’ ಎಂದು ಭಾವುಕವಾಗಿ ಮತಯಾಚಿಸಿದರು.ಇನ್ನೊಂದೆಡೆ, ಬಾಗಲಕೋಟೆಯಲ್ಲಿ ರಾಜಕೀಯ ಚಿತ್ರಣ ಬದಲಾಗಿದೆ. ಬಿಜೆಪಿಯಿಂದ ಉಚ್ಚಾಟಿತರಾಗಿದ್ದರೂ ಹಿಂದೂ ಫೈರ್ ಬ್ರ್ಯಾಂಡ್ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರ ಅಖಾಡಕ್ಕಿಳಿದಿದ್ದಾರೆ. ಹೈಕಮಾಂಡ್ ಮೇಲೆ ಮುನಿಸು ಹೊಂದಿದ್ದರೂ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸುತ್ತಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ‘ಬಾಗಲಕೋಟೆಯಲ್ಲಿ ಬಿಜೆಪಿ ಗೆಲುವು ಈಗಾಗಲೇ ಖಚಿತವಾಗಿದೆ, ಯತ್ನಾಳ್ ಪ್ರಚಾರದಿಂದ ಅಂತರ ಹೆಚ್ಚಾದರೆ ಸಂತೋಷ’ ಎಂದು ಮಾರ್ಮಿಕವಾಗಿ ನುಡಿದರು.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1719+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1949+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4412+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4590+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4611+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4690+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7169+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7650+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7688+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12883+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 13007+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13282+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13303+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27271+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30309+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30329+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30358+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33362+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33367+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33489+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33582+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33613+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39159+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39248+