ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಜಿಲ್ಲಾ ಮಟ್ಟದ ಪಿಯುಸಿ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಶ್ರೀ ಸಿದ್ಧಗಂಗಾ ಪಿಯುಸಿ ಕಾಲೇಜು ಚಾಂಪಿಯನ್‌
ವರದಿಗಾರರು : ದರ್ಶನ್ ಎಂ.ಎನ್ | ಸ್ಥಳ : ದಾವಣಗೆರೆ | ದಿನಾಂಕ : 25-11-2025

ಜಿಲ್ಲಾ ಮಟ್ಟದ ಪಿಯುಸಿ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಶ್ರೀ ಸಿದ್ಧಗಂಗಾ ಪಿಯುಸಿ ಕಾಲೇಜು ಚಾಂಪಿಯನ್‌

ದಾವಣಗೆರೆ: ಜಿಲ್ಲೆಯ ಪದವಿ ಪೂರ್ವ ಕಾಲೇಜುಗಳ ನಡುವೆ ನಡೆದ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಶ್ರೀ ಸಿದ್ಧಗಂಗಾ ಪದವಿ ಪೂರ್ವ ಕಾಲೇಜು ಒಟ್ಟಾರೆ ಚಾಂಪಿಯನ್ ಪಟ್ಟ ಕೈಸೇರಿಸಿಕೊಂಡಿದೆ. ಈ ಸ್ಪರ್ಧೆಗಳಿಗೆ ಕಾಲೇಜಿನ ನಿರ್ದೇಶಕ ಡಾ. ಜಯಂತ್ ಡಿ.ಎಸ್. ಅವರು ಚಾಲನೆ ನೀಡಿದರು. ಉಪನಿರ್ದೇಶಕ ಡಿ. ಪಳನಿವೇಲು ಅಧ್ಯಕ್ಷತೆ ವಹಿಸಿದ್ದರು. ಪ್ರಾಚಾರ್ಯರ ಸಂಘದ ಅಧ್ಯಕ್ಷ ಎನ್. ಓಹಿಲೇಶ್ವರ, ಕಾರ್ಯದರ್ಶಿ ಜೆ. ಶಿವಪ್ಪ, ಪ್ರಾಚಾರ್ಯ ಆರ್. ಸುರೇಶ ಹಾಗೂ ವಾಣಿಶ್ರೀ ಉಪಸ್ಥಿತರಿದ್ದರು.

ಪ್ರಥಮ ಹಾಗೂ ದ್ವಿತೀಯ ಪಿಯುಸಿ ಹಂತದ 11 ವಿಭಾಗಗಳ ಸ್ಪರ್ಧೆಗಳಲ್ಲಿ ದಾವಣಗೆರೆ ಜಿಲ್ಲೆಯ 41 ಪದವಿ ಪೂರ್ವ ಕಾಲೇಜುಗಳಿಂದ ಸುಮಾರು 580 ಸ್ಪರ್ಧಾರ್ಥಿಗಳು ಭಾಗವಹಿಸಿದ್ದರು. ಸಮಾರೋಪ ಹಾಗೂ ಬಹುಮಾನ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಪಳನಿವೇಲು, ವಿದ್ಯಾರ್ಥಿಗಳಿಗೆ ಸರ್ಕಾರ ಒದಗಿಸಿರುವ ಅವಕಾಶಗಳನ್ನು ಸದುಪಯೋಗ ಪಡಿಸಿಕೊಂಡು ಭವಿಷ್ಯ ನಿರ್ಮಾಣಕ್ಕಾಗಿ ಶ್ರಮಿಸಬೇಕೆಂದು ಸಲಹೆ ನೀಡಿದರು. ವಿಜೇತರು ಹಾಗೂ ವಿಭಾಗ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ತಯಾರಿ ಕುರಿತು ಮಾರ್ಗದರ್ಶನ ನೀಡಿ, ಬಹುಮಾನಗಳನ್ನು ವಿತರಿಸಲಾಯಿತು. ಡಿ.ಎಸ್. ಹೇಮಂತ್‌, ಗಾಯತ್ರಿ ಚಿಮ್ಮಡ್‌, ವಾಣಿಶ್ರೀ, ಸುರೇಶ್ ಆರ್‌, ಶಿವಪ್ಪ ಜೆ, ಭೀಮಕುಮಾರ ಜೆ.ವಿ. ಅವರು ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಮಾಡಿ ಶುಭ ಹಾರೈಸಿದರು.

ವಿಜೇತ ವಿದ್ಯಾರ್ಥಿಗಳ ಸಾಧನೆ – ಶ್ರೀ ಸಿದ್ಧಗಂಗಾ ಪಿಯುಸಿ ಕಾಲೇಜು ದ್ವಿತೀಯ ಪಿಯುಸಿ ಹಂತ ಭಾವಗೀತೆ (ಪ್ರಥಮ): ವರುಣ ಎಂ ಜಾನಪದ ನೃತ್ಯ (ಪ್ರಥಮ): ಉಷಾರಾಣಿ ಎಂ ಏಕಪಾತ್ರಾಭಿನಯ (ದ್ವಿತೀಯ): ಕವನ ಕೆ.ಎನ್ ಆಂಗ್ಲ ಪ್ರಬಂಧ (ದ್ವಿತೀಯ): ಸಿಂಧು ಡಿ.ಜಿ ಆಂಗ್ಲ ಚರ್ಚೆ (ತೃತೀಯ): ಅನುಷಾ ಕೆ.ಎಸ್ ರಸಪ್ರಶ್ನೆ (ತೃತೀಯ): ಪ್ರಣವ್ ದಿಗ್ಗಾವಿ, ಅನಂತಸೇನ ಬಿ.ಎಂ ಪ್ರಥಮ ಪಿಯುಸಿ ಹಂತ ಜಾನಪದ ನೃತ್ಯ (ಪ್ರಥಮ): ಎಂ. ನಾಡಿಗರ್ ಏಕಪಾತ್ರಾಭಿನಯ (ಪ್ರಥಮ): ಶಶಾಂಕ ಈರಪ್ಪ ತೆಪ್ಪದ್ ಕನ್ನಡ ಚರ್ಚೆ (ಪ್ರಥಮ): ವೇದ ಪ್ರಕಾಶ್ ಅಜ್ಜಂನವರ್ ಆಂಗ್ಲ ಚರ್ಚೆ (ಪ್ರಥಮ): ಹುಸ್ನ ಎನ್ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಡಾ. ಧನಂಜಯಪ್ಪ ಬಿ.ಎನ್, ಸದಾಶಿವ ಹೊಳ್ಳ, ಸಂತೋಷ್ ಎಸ್ ಹಾಗೂ ಕಾಲೇಜಿನ ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗ ಸಹಕಾರ ನೀಡಿದರು.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1618+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1848+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4311+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4489+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4510+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4589+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7068+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7549+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7587+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12782+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12906+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13181+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13202+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27170+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30208+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30228+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30257+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33261+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33266+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33388+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33482+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33513+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39059+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39148+