ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ವಿವಾದಾತ್ಮಕ ಹೊಸ ಹಾಡು ‘ಟಟೀರಿ’ ಹಾಡಿನ  857 ಲಿಂಕ್‌ ಡಿಲೀಟ್ ಮಾಡಿಸಿದ ಹರಿಯಾಣ ಪೊಲೀಸರು
ವರದಿಗಾರರು : Shobha jagadish | ಸ್ಥಳ : ಬೆಂಗಳೂರು | ದಿನಾಂಕ : 23-03-2026

ವಿವಾದಾತ್ಮಕ ಹೊಸ ಹಾಡು ‘ಟಟೀರಿ’ ಹಾಡಿನ 857 ಲಿಂಕ್‌ ಡಿಲೀಟ್ ಮಾಡಿಸಿದ ಹರಿಯಾಣ ಪೊಲೀಸರು

ಬಾಲಿವುಡ್‌ನ ಖ್ಯಾತ ಗಾಯಕ ಬಾದ್‌ಶಾ ಅವರ ಹೊಸ ಹಾಡು ‘ಟಟೀರಿ’ ಭಾರಿ ವಿವಾದಕ್ಕೆ ಗುರಿಯಾಗಿತ್ತು. ಮಹಿಳೆಯರು ಮತ್ತು ಅಪ್ರಾಪ್ತರ ಬಗ್ಗೆ ಆಕ್ಷೇಪಾರ್ಹ ಸಾಹಿತ್ಯವನ್ನು ಹೊಂದಿದೆ ಎಂಬ ಆರೋಪ ಕೇಳಿಬಂದ ಬೆನ್ನಲ್ಲೇ, ಹರಿಯಾಣ ಪೊಲೀಸರು ಈ ಹಾಡಿನ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದಾರೆ. ಹರಿಯಾಣ ಪೊಲೀಸರು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ‘ಟಟೀರಿ’ ಹಾಡಿನ ಒಟ್ಟು 857 ಲಿಂಕ್‌ಗಳನ್ನು ಈವರೆಗೆ ತೆಗೆದುಹಾಕಿದ್ದಾರೆ. ಇದರಲ್ಲಿ ಯೂಟ್ಯೂಬ್‌ನ 154 ವೀಡಿಯೊಗಳು ಮತ್ತು ಇನ್‌ಸ್ಟಾಗ್ರಾಮ್‌ನ 703 ರೀಲ್ಸ್‌ ಸೇರಿವೆ. ಮರು-ಅಪ್‌ಲೋಡ್ ಮಾಡಲಾದ ವೀಡಿಯೊಗಳು ಮತ್ತು ಶಾರ್ಟ್ಸ್​ಗಳನ್ನು ಸಹ ಡಿಲೀಟ್ ಮಾಡುವಂತೆ ಸೋಶಿಯಲ್ ಮೀಡಿಯಾ ಸಂಸ್ಥೆಗಳಿಗೆ ನೋಟಿಸ್ ನೀಡಲಾಗಿದೆ. ಮಹಿಳೆಯರ ಮತ್ತು ಅಪ್ರಾಪ್ತರ ಘನತೆಗೆ ಧಕ್ಕೆ ತರುವಂತಹ ಯಾವುದೇ ವಿಷಯವನ್ನು ಸಹಿಸುವುದಿಲ್ಲ ಎಂದು ಹರಿಯಾಣ ಪೊಲೀಸ್ ಮಹಾನಿರ್ದೇಶಕ ಅಜಯ್ ಸಿಂಘಾಲ್ ತಿಳಿಸಿದ್ದಾರೆ. ನಿಯಮ ಉಲ್ಲಂಘಿಸುವ ಖಾತೆಗಳನ್ನು ನಿರ್ಬಂಧಿಸಲಾಗುವುದು ಮತ್ತು ಪದೇ ಪದೇ ತಪ್ಪು ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ. ಅಲ್ಲದೇ, ಈ ಹಾಡನ್ನು ಬಳಸಿ ಹೊಸ ವೀಡಿಯೊಗಳನ್ನು ಕ್ರಿಯೇಟ್ ಮಾಡದಂತೆ ಅಥವಾ ಶೇರ್ ಮಾಡದಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ. ಹರಿಯಾಣದ ಪಂಚಕುಲ ನಗರದ ಸೆಕ್ಟರ್ 20 ಸೈಬರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಈ ಹಾಡಿನ ವಿವಾದದಿಂದಾಗಿ ಬಾದ್​ಶಾ ಅವರಿಗೆ ಅಪಖ್ಯಾತಿ ಬಂದಂತೆ ಆಗಿದೆ. ಕಳೆದ ವಾರವಷ್ಟೇ ರಾಷ್ಟ್ರೀಯ ಮಹಿಳಾ ಆಯೋಗವು ಈ ಹಾಡಿನ ಅಶ್ಲೀಲತೆಯ ಬಗ್ಗೆ ಗಾಯಕ ಬಾದ್‌ಶಾ ಮತ್ತು ಹಾಡಿನ ನಿರ್ಮಾಪಕರಿಗೆ ಸಮನ್ಸ್ ನೀಡಿತ್ತು. ಈ ಹಾಡು ಭಾರತೀಯ ನ್ಯಾಯ ಸಂಹಿತೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ನಿಬಂಧನೆಗಳನ್ನು ಉಲ್ಲಂಘಿಸಿದೆ ಎಂದು ಆಯೋಗ ಅಭಿಪ್ರಾಯಪಟ್ಟಿದೆ. ಸಂಕಷ್ಟಕ್ಕೆ ಸಿಲುಕಿದ ಬಾದ್‌ಶಾ ಈಗಾಗಲೇ ಈ ಬಗ್ಗೆ ಕ್ಷಮೆಯಾಚಿಸಿದ್ದು, ಎಲ್ಲಾ ಪ್ಲಾಟ್‌ಫಾರ್ಮ್‌ಗಳಿಂದ ಹಾಡನ್ನು ಹಿಂಪಡೆದಿದ್ದಾರೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1608+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1838+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4301+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4479+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4500+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4579+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7058+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7539+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7577+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12772+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12896+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13171+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13192+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27160+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30198+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30218+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30247+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33251+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33256+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33378+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33472+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33503+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39049+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39138+