ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಭಾರತದಲ್ಲಿ ಸಾಕಷ್ಟು ರಸಗೊಬ್ಬರ  ಸಂಗ್ರಹವಿದೆ , ರೈತರಿಗೆ ತೊಂದರೆಯಾಗಲು ಬಿಡುವುದಿಲ್ಲ: ಮೋದಿ ಭರವಸೆ
ವರದಿಗಾರರು : Shobha jagadish | ಸ್ಥಳ : ಬೆಂಗಳೂರು | ದಿನಾಂಕ : 23-03-2026

ಭಾರತದಲ್ಲಿ ಸಾಕಷ್ಟು ರಸಗೊಬ್ಬರ ಸಂಗ್ರಹವಿದೆ , ರೈತರಿಗೆ ತೊಂದರೆಯಾಗಲು ಬಿಡುವುದಿಲ್ಲ: ಮೋದಿ ಭರವಸೆ

ನವದೆಹಲಿ: ಪ್ರಧಾನಿ ಮೋದಿ ಅವರು ಭಾರತದಲ್ಲಿ ಸಾಕಷ್ಟು ರಸಗೊಬ್ಬರ ಸಂಗ್ರಹವಿದೆ ಎಂದು ರೈತರಿಗೆ ಭರವಸೆ ನೀಡಿದ್ದಾರೆ, ಮಧ್ಯಪ್ರಾಚ್ಯ ಯುದ್ಧದಿಂದ ಎಲ್​ಪಿಜಿ, ಪೆಟ್ರೋಲ್ ಮತ್ತು ರಸಗೊಬ್ಬರಗಳ ಮೇಲೆ ಪರಿಣಾಮ ಬೀರಿದ್ದರೂ, ರೈತರಿಗೆ ಯಾವುದೇ ತೊಂದರೆಯಾಗಲು ಬಿಡುವುದಿಲ್ಲ ಎಂದಿದ್ದಾರೆ. ಜಾಗತಿಕ ಆರ್ಥಿಕತೆಯ ಮೇಲಿನ ಯುದ್ಧದ ದುಷ್ಪರಿಣಾಮಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ಪೂರೈಕೆ ಸರಪಳಿಯನ್ನು ಸುಸ್ಥಿತಿಯಲ್ಲಿಡಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ. ಮಧ್ಯಪ್ರಾಚ್ಯದಲ್ಲಿ ಯುದ್ಧ ನಡೆಯುತ್ತಿರುವ ಕಾರಣ ಎಲ್​ಪಿಜಿ, ಪೆಟ್ರೋಲ್ ಹಾಗೂ ರಸಗೊಬ್ಬರಗಳ ಮೇಲೆ ಸ್ವಲ್ಪ ಪ್ರಮಾಣದ ಪರಿಣಾಮ ಬೀರಿದೆ. ಆದರೆ ದೇಶದಲ್ಲಿ ರಸಗೊಬ್ಬರಗಳ ಸಾಕಷ್ಟು ಸಂಗ್ರಹವಿದ್ದು, ಯಾವುದೇ ಕಾರಣಕ್ಕೂ ರೈತರಿಗೆ ತೊಂದರೆಯಾಗಲು ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ಲೋಕಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ರೈತರು ಈಗ ಡೀಸೆಲ್ ಮೇಲಿನ ಅವಲಂಬನೆ ಕಡಿಮೆಯಾಗಿದೆ ಎಂದು ಹೇಳಿದ್ದಾರೆ. ಜಾಗತಿಕ ಆರ್ಥಿಕತೆ ಮೇಲೆ ದುಷ್ಪರಿಣಾಮ ಯುದ್ಧವು ಇಡೀ ಜಾಗತಿಕ ಆರ್ಥಿಕತೆಯ ಮೇಲೆ ಪರಿಣಾಮ ಬೀರುತ್ತಿದೆ, ಹೆಚ್ಚಿನ ಪ್ರಮಾಣದ ಕಚ್ಚಾ ತೈಲ ಮತ್ತು ಅನಿಲ ಮಧ್ಯಪ್ರಾಚ್ಯದಿಂದ ಬರುತ್ತಿದೆ, ಆದ್ದರಿಂದ ಈ ಯುದ್ಧದ ಬಗ್ಗೆ ಭಾರತದ ಕಳವಳ ಸಹಜ. ಯುದ್ಧ ಪ್ರಾರಂಭವಾದಾಗಿನಿಂದ, ಪೀಡಿತ ದೇಶಗಳಲ್ಲಿರುವ ಪ್ರತಿಯೊಬ್ಬ ಭಾರತೀಯರಿಗೂ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲಾಗಿದೆ ಎಂದರು. ಪಶ್ಚಿಮ ಏಷ್ಯಾದ ಪರಿಸ್ಥಿತಿ ಚಿಂತಾಜನಕವಾಗಿದೆ, ಈ ಬಿಕ್ಕಟ್ಟನ್ನು ಆದಷ್ಟು ಬೇಗ ಕೊನೆಗೊಳಿಸಲು ಪರಿಹಾರ ಕಂಡುಕೊಳ್ಳುವಂತೆ ಇಡೀ ಜಗತ್ತಿಗೆ ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ ಪಶ್ಚಿಮ ಏಷ್ಯಾದ ಪ್ರಸ್ತುತ ಪರಿಸ್ಥಿತಿ ಚಿಂತಾಜನಕವಾಗಿದೆ, ಕಳೆದ ಎರಡು ಮೂರು ವಾರಗಳಲ್ಲಿ, ವಿದೇಶಾಂಗ ಸಚಿವ ಜೈಶಂಕರ್ ಮತ್ತು ಸಚಿವ ಹರ್ದೀಪ್ ಪುರಿ ಈ ವಿಷಯದ ಬಗ್ಗೆ ಸಂಸತ್ತಿಗೆ ಪ್ರಮುಖ ಮಾಹಿತಿಯನ್ನು ಒದಗಿಸಿದ್ದಾರೆ. ಈ ಬಿಕ್ಕಟ್ಟು ಈಗ ಮೂರು ವಾರಗಳಿಗೂ ಹೆಚ್ಚು ಕಾಲ ಮುಂದುವರೆದಿದೆ. ಇದು ಜಾಗತಿಕ ಆರ್ಥಿಕತೆ ಮತ್ತು ಜನರ ಜೀವನದ ಮೇಲೆ ವಿನಾಶಕಾರಿ ಪರಿಣಾಮವನ್ನು ಬೀರುತ್ತಿದೆ. ಆದ್ದರಿಂದ, ಇಡೀ ಜಗತ್ತು ಎಲ್ಲಾ ಪಕ್ಷಗಳು ಈ ಬಿಕ್ಕಟ್ಟನ್ನು ಸಾಧ್ಯವಾದಷ್ಟು ಬೇಗ ಪರಿಹರಿಸುವಂತೆ ಒತ್ತಾಯಿಸುತ್ತಿದೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1618+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1848+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4311+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4489+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4510+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4589+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7068+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7549+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7587+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12782+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12906+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13181+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13202+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27170+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30208+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30228+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30257+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33261+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33266+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33388+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33482+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33513+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39059+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39148+