ಹಿಂದೂ ಧರ್ಮದಿಂದ ಮತಾಂತರವಾದ್ರೆ SC ಸ್ಥಾನಮಾನ ರದ್ದು - ಸುಪ್ರೀಂ ಕೋರ್ಟ್ ತೀರ್ಪು !
ಪರಿಶಿಷ್ಟ ಜಾತಿ ಮೀಸಲಾತಿ ಸೌಲಭ್ಯಗಳ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪನ್ನು ನೀಡಿದೆ. ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಬಿಟ್ಟು ಬೇರೆ ಧರ್ಮಕ್ಕೆ ಮತಾಂತರವಾದರೆ ಎಸ್‌ಸಿ ಸ್ಥಾನಮಾನ ಮತ್ತು ಮೀಸಲಾತಿ ಸೌಲಭ್ಯಗಳು ಸಿಗಲ್ಲ. ಈ ತೀರ್ಪು ದೇಶಾದ್ಯಂತ ಸಂಚಲನಕ್ಕೆ ಕಾರಣವಾಗಿದೆ. ಸುಪ್ರೀಂ ಕೋರ್ಟ್ ಈ ರೀತಿಯ ತೀರ್ಪು ನೀಡಲು ಕಾರಣ ಏನು? ಮತಾಂತರಕ್ಕೂ ಮತ್ತು ಮೀಸಲಾತಿಗೂ ಇರುವ ಸಂಬಂಧವೇನು? ಇದರಿಂದ ಕರ್ನಾಟಕಕ್ಕೆ ಏನು ಪರಿಣಾಮ? ಮತಾಂತರವಾದರೆ ಪರಿಶಿಷ್ಟ ಜಾತಿ ಮೀಸಲಾತಿ ಸಂಪೂರ್ಣ ರದ್ದು ಎಂದು ಸುಪ್ರೀಂ ಕೋರ್ಟ್‌ನ ತೀರ್ಪು ನೀಡಿದೆ. ಈ ತೀರ್ಪು ಕರ್ನಾಟಕದ ಮೇಲೂ ಭಾರೀ ಪರಿಣಾಮ ಬೀರಲಿದ್ದು, 12 ಸಾವಿರಕ್ಕೂ ಅಧಿಕ ದಲಿತ ಕ್ರಿಶ್ಚಿಯನ್ನರಿಗೆ ಮೀಸಲಾತಿ ಕೈತಪ್ಪಲಿದೆ.ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಪಿಕೆ ಮಿಶ್ರಾ ಹಾಗೂ ಎನ್‌ವಿ ಅಂಜಾರಿಯಾ ಅವರಿದ್ದ ಪೀಠವು ಐತಿಹಾಸಿಕ ತೀರ್ಪನ್ನು ನೀಡಿದೆ. ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಪಾಲಿಸುವ ವ್ಯಕ್ತಿಗಳಿಗೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನವನ್ನು ಕ್ಲೇಮ್ ಮಾಡುವ ಹಕ್ಕಿದೆ. ಒಂದು ವೇಳೆ ಬೇರೆ ಯಾವುದೇ ಧರ್ಮಕ್ಕೆ ಮತಾಂತರಗೊಂಡರೆ, ಅವರು ತಕ್ಷಣವೇ ತಮ್ಮ ಎಸ್‌ಸಿ ಸ್ಥಾನಮಾನವನ್ನು ಕಳೆದುಕೊಳ್ಳುತ್ತಾರೆ ಎಂದು ಕೋರ್ಟ್ ಸ್ಪಷ್ಟಪಡಿಸಿದೆ.ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಪಿಕೆ ಮಿಶ್ರಾ ಹಾಗೂ ಎನ್‌ವಿ ಅಂಜಾರಿಯಾ ಅವರಿದ್ದ ಪೀಠವು ಐತಿಹಾಸಿಕ ತೀರ್ಪನ್ನು ನೀಡಿದೆ. ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಪಾಲಿಸುವ ವ್ಯಕ್ತಿಗಳಿಗೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನವನ್ನು ಕ್ಲೇಮ್ ಮಾಡುವ ಹಕ್ಕಿದೆ. ಒಂದು ವೇಳೆ ಬೇರೆ ಯಾವುದೇ ಧರ್ಮಕ್ಕೆ ಮತಾಂತರಗೊಂಡರೆ, ಅವರು ತಕ್ಷಣವೇ ತಮ್ಮ ಎಸ್‌ಸಿ ಸ್ಥಾನಮಾನವನ್ನು ಕಳೆದುಕೊಳ್ಳುತ್ತಾರೆ ಎಂದು ಕೋರ್ಟ್ ಸ್ಪಷ್ಟಪಡಿಸಿದೆ.