ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಸರ್ಕಾರಿ ಶಾಲೆ ಮುಚ್ಚದಿರಿ: ರಾಜಘಟ್ಟದಲ್ಲಿ ವಿದ್ಯಾರ್ಥಿ–ಪೋಷಕರ ಪ್ರತಿಭಟನೆ
ವರದಿಗಾರರು : ಕೆ ಜೆ ಸುರೇಶ | ಸ್ಥಳ : ಹಾಸನ | ದಿನಾಂಕ : 01-12-2025

ಸರ್ಕಾರಿ ಶಾಲೆ ಮುಚ್ಚದಿರಿ: ರಾಜಘಟ್ಟದಲ್ಲಿ ವಿದ್ಯಾರ್ಥಿ–ಪೋಷಕರ ಪ್ರತಿಭಟನೆ

ಹಾಸನ: ಕೆಪಿಎಸ್–ಮ್ಯಾಗ್ನೆಟ್ ಶಾಲೆಗಳ ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ವಿಲೀನ ಮಾಡುವ ಸರ್ಕಾರದ ನೀತಿಗೆ ವಿರೋಧವಾಗಿ ಹಾಸನ ತಾಲ್ಲೂಕಿನ ರಾಜಘಟ್ಟ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಉಳಿಸಬೇಕೆಂದು ಎಐಡಿಎಸ್‌ಒ ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರು ಭಾರೀ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಮಾತನಾಡಿದ ಸಂಘಟನೆಯ ಜಿಲ್ಲಾ ಸಂಚಾಲಕಿ ಚೈತ್ರ ಅವರು, “ಸರ್ಕಾರ ಕೆಪಿಎಸ್–ಮ್ಯಾಗ್ನೆಟ್ ಯೋಜನೆಯ ಹೆಸರಿನಲ್ಲಿ ರಾಜ್ಯದ 40 ಸಾವಿರಕ್ಕೂ ಅಧಿಕ ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸುವತ್ತ ಹೆಜ್ಜೆ ಹಾಕಿದೆ. ಹಾಸನ ಜಿಲ್ಲೆಯಲ್ಲಿ ಮಾತ್ರ 1,942 ಸರ್ಕಾರಿ ಶಾಲೆಗಳು ಮುಚ್ಚುವ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜಘಟ್ಟದ ಈ ಶಾಲೆಯೂ ಅದರಲ್ಲಿ ಒಂದಾಗಿದೆ,” ಎಂದು ಆರೋಪಿಸಿದರು.

ರಾಜಘಟ್ಟ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಕಳೆದ ಎರಡು–ಮೂರು ವರ್ಷಗಳಲ್ಲಿ 20ರಿಂದ 41ಕ್ಕೆ ಏರಿಕೆಯಾಗಿದೆ. ಸ್ಥಳೀಯ ಗ್ರಾಮಸ್ಥರು ಹಾಗೂ ಪೋಷಕರು ಶಾಲೆಯ ಅಭಿವೃದ್ಧಿಗೆ ಶ್ರಮಿಸಿ ಸೌಲಭ್ಯಗಳನ್ನು ಹೆಚ್ಚಿಸಿರುವುದನ್ನು ಅವರು ಒತ್ತಿ ಹೇಳಿದರು. “ಈ ಶಾಲೆಯಲ್ಲಿ ಕಲಿಯುತ್ತಿರುವ ಮಕ್ಕಳು ಹೆಚ್ಚಿನವರು ಬಡ ರೈತರ, ಕೂಲಿ ಕಾರ್ಮಿಕರ ಹಾಗೂ ವಲಸೆ ಕಾರ್ಮಿಕರ ಮಕ್ಕಳು. 5 ಕಿ.ಮೀ ದೂರದ ಬೂವನಹಳ್ಳಿ ಶಾಲೆಗೆ ವಿಲೀನ ಮಾಡಿದರೆ ಮಕ್ಕಳಿಗೆ ಸಂಚಾರ ದುಸ್ತರವಾಗಲಿದೆ,” ಎಂದು ಚೈತ್ರ ಚಿಂತೆಯನ್ನು ವ್ಯಕ್ತಪಡಿಸಿದರು. ಮಹಾತ್ಮ ಜ್ಯೋತಿಬಾ ಫುಲೆ ಅವರ ಶಿಕ್ಷಣ ತತ್ವಗಳನ್ನು ಉಲ್ಲೇಖಿಸಿದ ಅವರು, “ಶಿಕ್ಷಣವು ಎಲ್ಲರಿಗೂ ತಲುಪುವಂತೆ ಸಾರ್ವತ್ರಿಕವಾಗಿರಬೇಕು ಎಂದು ಫುಲೆ ಪ್ರತಿಪಾದಿಸಿದ್ದರು. ಆದರೆ ಇಂದಿನ ಸರ್ಕಾರಗಳು ವಿವಿಧ ಯೋಜನೆಗಳ ಹೆಸರಿನಲ್ಲಿ ಶಾಲೆಗಳನ್ನು ಮುಚ್ಚುವ ಮೂಲಕ ಆ ಮಹನೀಯರ ಕನಸುಗಳನ್ನು ನಿರ್ಲಕ್ಷಿಸುತ್ತಿವೆ,” ಎಂದು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಎಐಡಿಎಸ್‌ಒ ರಾಜ್ಯ ಉಪಾಧ್ಯಕ್ಷೆ ಚಂದ್ರಕಲಾ, ಜಿಲ್ಲಾ ಸಹ ಸಂಚಾಲಕಿ ಸುಷ್ಮಾ, ಕಾರ್ಯಕರ್ತರು ರಂಗನಾಥ್, ತರುಣ್ ಸೇರಿದಂತೆ ರಾಜಘಟ್ಟ ಗ್ರಾಮದ ಧರ್ಮಪಾಲ,ಪುರುಷೋತ್ತಮ್, ರಮೇಶ್, ಗಂಗಾಧರ್, ಕಮಲಮ್ಮ, ಗಿರೀಶ ಹಾಗೂ ಶಾಲೆಯ ವಿದ್ಯಾರ್ಥಿಗಳು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 1082+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 4130+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 4171+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 4228+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 4330+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 4378+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 4410+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 4454+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 4502+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 4515+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 4589+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 4649+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6869+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6932+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6983+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 7039+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 7200+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 7228+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 7358+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 7539+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9741+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9906+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9967+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 10139+