ಬೆಂಗಳೂರಿನ ರಸ್ತೆಗಳಲ್ಲಿ ಪುಂಡರ ಹಾವಳಿ ... ಕೈಯಲ್ಲಿ ಬಿಯರ್ ಬಾಟಲ್ ಹಿಡಿದು ವಾಹನ ಚಾಲನೆ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ನಡೆಯುತ್ತಲೇ ಇವೆ. ಮೊನ್ನೆಯಷ್ಟೇ ನಗರದ ಹೃದಯ ಭಾಗದಲ್ಲಿ ತಡರಾತ್ರಿ ಐಶಾರಾಮಿ ಲ್ಯಾಂಬೋರ್ಗಿನಿ ಕಾರಿನ ಡ್ರಿಫ್ಟಿಂಗ್ ಸ್ಟಂಟ್ ಮಾಡಿದ್ದ ವಿಡಿಯೋ ವೈರಲ್ ಆಗಿತ್ತು. ಇದೀಗ ಮದ್ಯ ಸೇವಿಸುತ್ತಲೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್ ಮಾಡುತ್ತಿರುವ ಯುವಕರ ವಿಡಿಯೋ ವೈರಲ್ ಆಗಿದೆ. ಇದಕ್ಕೆ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಸಂಚಾರ ಸುರಕ್ಷತೆಯ ಕಳವಳ ವ್ಯಕ್ತವಾಗಿದೆ. ಬೆಂಗಳೂರಿನ ಬಿಟಿಎಂ ರಸ್ತೆಯಲ್ಲಿ ರಾತ್ರಿ ವೇಳೆ ಸ್ಕೂಟರ್‍ನಲ್ಲಿ ಮೂವರು ಯುವಕರು ತೆರಳುತ್ತಿರುವ ದೃಶ್ಯ ಕಂಡು ಬಂದಿದೆ. ಹಿಂಬದಿ ಕೂತಿದ್ದ ವ್ಯಕ್ತಿಯ ಕೈಯಲ್ಲಿ ಬಿಯರ್ ಬಾಟಲಿ ಇದ್ದು, ಕುಡಿಯುತ್ತಲೇ ಅಜಾಗರೂಕವಾಗಿ ಸಂಚಾರ ಮಾಡಿದ್ದಾರೆ. ಈ ವಿಡಿಯೋವನ್ನು ಕರ್ನಾಟಕ ಪೋರ್ಟ್‌ಫೊಲಿಯೋ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಬೆಂಗಳೂರು ಸಂಚಾರಿ ಪೊಲೀಸರಿಗೆ ಟ್ಯಾಗ್ ಮಾಡಲಾಗಿದೆ. ಕುಡಿದು ವಾಹನ ಚಲಾಹಿಸುವುದು ತಪ್ಪು ಎಂದು ತಿಳಿದಿದ್ದರೂ , ಕೈಯಲ್ಲಿ ಬಾಟಲ್ ಹಿಡಿದು ಟ್ರಿಪಲ್ ರೈಡ್ ಮಾಡಿರುವುದು ಈಗ ಬೆಳಕಿಗೆ ಬಂದಿದೆ . ಕಾನೂನಿನ ಭಯ ಕನಿಷ್ಠ ಸಾಮಾಜಿಕ ಜವಾಬ್ದಾರಿ ಇಲ್ಲದ ಇವರ ನಡುವಳಿಕೆಗೆ ನೆಟ್ಟಿಗರು ಕಿಡಿ ಕಾರಿದ್ದಾರೆ .
ಇತರೆ ಸುದ್ದಿಗಳು