ತಲೆ ಸುತ್ತಿ ಕೆಳಗೆ ಬಿದ್ದ ಯುಪಿ ಕಾಂಗ್ರೆಸ್ ಮುಖ್ಯಸ್ಥ ಅಜಯ್ ರೈ! ಆಸ್ಪತ್ರೆಗೆ ದಾಖಲು, ಆರೋಗ್ಯ ಸ್ಥಿರ
ಯುಪಿ ಕಾಂಗ್ರೆಸ್ ಮುಖ್ಯಸ್ಥ ಅಜಯ್ ರೈ ರವರು ಲೋ ಬಿಪಿ ಇಂದ ಶುಕ್ರವಾರ ಮೇ ಒಂದರಂದು ಸಂಜೆ ಪ್ರಜ್ಞೆ ತಪ್ಪಿದ್ದರು ಎಂದು ತಿಳಿದುಬಂದಿದೆ . ನಂತರ ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಅಜಯ್ ರೈ ಅವರನ್ನು ಲಕ್ನೋದ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಯಿತು. "ಕಡಿಮೆ ಸೋಡಿಯಂ ಅಂಶದಿಂದಾಗಿ ರಾಜ್ಯ ಅಧ್ಯಕ್ಷ ಅಜಯ್ ರೈ ತಮ್ಮ ನಿವಾಸದಲ್ಲಿ ಪ್ರಜ್ಞೆ ತಪ್ಪಿದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯಕೀಯ ನಿಗಾದಲ್ಲಿದ್ದಾರೆ" ಎಂದು ಯುಪಿ ಕಾಂಗ್ರೆಸ್ ಘಟಕ ಹೇಳಿಕೆಯಲ್ಲಿ ತಿಳಿಸಿದೆ.ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀ ರೈ ಅವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸಿದರು. ಕಳೆದ ಮೂರು ಸಂಸತ್ ಚುನಾವಣೆಗಳಲ್ಲಿ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಶ್ರೀ ಮೋದಿ ಅವರ ಪ್ರಮುಖ ಎದುರಾಳಿಯಾಗಿ ಸ್ಪರ್ಧೆ ನಡೆಸಿದ್ದರು .