ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ದಾವಣಗೆರೆ: ಜೆಡಿಎಸ್ ಮುಖಂಡರ ಹತ್ಯಾ ಯತ್ನ ಪ್ರಕರಣ—ಕಾಂಗ್ರೆಸ್ ನಾಯಕಿ ಸವಿತಾ ಮಲ್ಲೇಶ್ ನಾಯ್ಕ್ ಬಂಧನ
ವರದಿಗಾರರು : ದರ್ಶನ್ ಎಂ. ಎನ್ | ಸ್ಥಳ : ದಾವಣಗೆರೆ | ದಿನಾಂಕ : 24-11-2025

ದಾವಣಗೆರೆ: ಜೆಡಿಎಸ್ ಮುಖಂಡರ ಹತ್ಯಾ ಯತ್ನ ಪ್ರಕರಣ—ಕಾಂಗ್ರೆಸ್ ನಾಯಕಿ ಸವಿತಾ ಮಲ್ಲೇಶ್ ನಾಯ್ಕ್ ಬಂಧನ

ದಾವಣಗೆರೆ: ಜೆಡಿಎಸ್ ಮುಖಂಡ ಹಾಗೂ ಸಾಮಾಜಿಕ ಹೋರಾಟಗಾರ ಟಿ. ಅಸ್ಗರ್ ಅವರ ಮೇಲೆ ನಡೆದಿದ್ದ ಹತ್ಯಾ ಯತ್ನ ಪ್ರಕರಣದಲ್ಲಿ ಆರೋಪಿಗೆ ಸಹಕಾರ ನೀಡಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕಿ ಹಾಗೂ ನಟಿ ಸವಿತಾ ಮಲ್ಲೇಶ್ ನಾಯ್ಕ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮಾಯಕೊಂಡ ಕ್ಷೇತ್ರದ ಕಾಂಗ್ರೆಸ್ ನಾಯಕಿಯಾದ ಸವಿತಾ ನಾಯ್ಕ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಕೊಲೆ ಯತ್ನದಲ್ಲಿ ಪ್ರಮುಖ ಆರೋಪಿ ಹಾಗೂ ರೌಡಿಶೀಟರ್ ಖಾಲಿದ್ ಪೈಲ್ವಾನ್‌ಗೆ ಆಶ್ರಯ ಮತ್ತು ಹಣಕಾಸಿನ ನೆರವು ನೀಡಿದ್ದುದು ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಕಳೆದ ನವೆಂಬರ್ 10ರಂದು ಟಿಪ್ಪು ಜಯಂತಿ ಕಾರ್ಯಕ್ರಮದ ವೇಳೆ ಜೆಡಿಎಸ್ ಮುಖಂಡ ಟಿ. ಅಸ್ಗರ್ ಮೇಲೆ ಕಾಂಗ್ರೆಸ್ ಮುಖಂಡ ಖಾಲಿದ್ ಪೈಲ್ವಾನ್ ಚಾಕುವಿನಿಂದ ದಾಳಿ ನಡೆಸಿದ್ದ. ಗಂಭೀರವಾಗಿ ಗಾಯಗೊಂಡಿದ್ದ ಅಸ್ಗರ್ ಸಮಯಕ್ಕೆ ಚಿಕಿತ್ಸೆ ದೊರೆತ ಕಾರಣ ಕೂದಲೆಳೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದರು. ದಾಳಿಕೋರನಾದ ಖಾಲಿದ್ ಪೈಲ್ವಾನ್ ಸಧ್ಯ ತಲೆಮರೆಸಿಕೊಂಡಿದ್ದು, ಅವರನ್ನು ಪತ್ತೆಹಚ್ಚಲು ಪೊಲೀಸರು ಬಲೆ ಬೀಸಿದ್ದಾರೆ. ಸವಿತಾ ಮಲ್ಲೇಶ್ ನಾಯ್ಕ್ ಅವರು ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಬಯಸಿದ್ದರೂ ನೀಡದ ಹಿನ್ನೆಲೆ ಪಕ್ಷೇತರರಾಗಿ ಸ್ಪರ್ಧಿಸಿ ಸೋಲು ಕಂಡಿದ್ದರು. ಬಳಿಕ ಪುನಃ ಕಾಂಗ್ರೆಸ್‌ಗೆ ಮರಳಿದ್ದ ಅವರು ಪಕ್ಷದ ವಿವಿಧ ಕಾರ್ಯಕ್ರಮಗಳು, ಸಭೆ, ಪ್ರತಿಭಟನೆಗಳಲ್ಲಿ ಸಕ್ರಿಯರಾಗಿದ್ದರೆಂದು ಮೂಲಗಳು ತಿಳಿಸಿವೆ.

ಅವರ ವಿರುದ್ಧ ದಾಖಲಾದ ಆರೋಪಗಳ ಹಿನ್ನೆಲೆಯಲ್ಲಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿಕೊಂಡಿದ್ದು, ಅವರು ಇದೀಗ ಜೈಲಿನಲ್ಲಿದ್ದಾರೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1618+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1848+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4311+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4489+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4510+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4589+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7068+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7549+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7587+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12782+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12906+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13181+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13202+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27170+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30208+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30228+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30257+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33261+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33266+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33388+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33482+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33513+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39059+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39148+