ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಮತ್ತಷ್ಟು ದುಬಾರಿಯಾಗಲಿದೆ ಚಿನ್ನ, ಬೆಳ್ಳಿ – ಆಮದು ಸುಂಕ 15% ಏರಿಕೆ
ವರದಿಗಾರರು : SHOBHA JAGAISH | ಸ್ಥಳ : BANGLORE | ದಿನಾಂಕ : 13-05-2026

ಮತ್ತಷ್ಟು ದುಬಾರಿಯಾಗಲಿದೆ ಚಿನ್ನ, ಬೆಳ್ಳಿ – ಆಮದು ಸುಂಕ 15% ಏರಿಕೆ

ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಮತ್ತಷ್ಟು ದುಬಾರಿಯಾಗಲಿವೆ. ಚಿನ್ನ ಖರೀದಿಯನ್ನು ಮುಂದೂಡಿ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ ಬೆನ್ನಲ್ಲೇ ಕೇಂದ್ರ ಸರ್ಕಾರ ಈಗ ಚಿನ್ನ ಮತ್ತು ಬೆಳ್ಳಿ ಮೇಲಿನ ಒಟ್ಟು ಒಟ್ಟು ಆಮದು ಸುಂಕವನ್ನು ತಕ್ಷಣದಿಂದ ಜಾರಿಗೆ ಬರುವಂ 15% ಕ್ಕೆ ಭಾರಿ ಏರಿಕೆ ಮಾಡಿದೆ. ದೇಶದ ವಿದೇಶಿ ವಿನಿಮಯ ಮೀಸಲು ನಿಧಿಯನ್ನು ರಕ್ಷಿಸಲು ಮತ್ತು ರೂಪಾಯಿ ಮೌಲ್ಯದ ಕುಸಿತವನ್ನು ತಡೆಯಲು ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಮೂಲ ಕಸ್ಟಮ್ಸ್ ಸುಂಕ ಈ ಹಿಂದೆ 5% ಇತ್ತು. ಈಗ ಇದನ್ನು 10%ಗೆ ಏರಿಕೆ ಮಾಡಲಾಗಿದೆ. ಕೃಷಿ ಮೂಲಸೌಕರ್ಯ ಮತ್ತು ಅಭಿವೃದ್ಧಿ ಸೆಸ್ ಈ ಹಿಂದೆ 5% ಇತ್ತು. ಈ ಸೆಸ್‌ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಆದರೆ ಮೂಲ ಕಸ್ಟಮ್ಸ್‌ ಸುಂಕ 5% ಏರಿಕೆ ಮಾಡಿದ್ದರಿಂದ ಒಟ್ಟು ಆಮದು ಸುಂಕ 15% ಏರಿಕೆಯಾಗಿದೆ. ಭಾರತದಲ್ಲಿ ಚಿನ್ನದ ಹೂಡಿಕೆ ಮತ್ತು ಖರೀದಿ ತೀವ್ರವಾಗಿ ಹೆಚ್ಚಿದ್ದರಿಂದ ಆಮದು ಪ್ರಮಾಣ ಹೆಚ್ಚಾಗಿತ್ತು, ಇದನ್ನು ನಿಯಂತ್ರಿಸಲು ಸುಂಕ ಏರಿಸಲಾಗಿದೆ. ಆಮದು ಸುಂಕ ಹೆಚ್ಚಾದ ಬೆನ್ನಲ್ಲೇ ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ತಕ್ಷಣವೇ ದುಬಾರಿಯಾಗಲಿವೆ. ಮುಂಬರುವ ಹಬ್ಬ ಹಾಗೂ ಮದುವೆ ಸೀಸನ್‌ಗಳಲ್ಲಿ ಆಭರಣ ಖರೀದಿಸುವ ಗ್ರಾಹಕರಿಗೆ ಮೇಕಿಂಗ್ ಚಾರ್ಜ್ ಹಾಗೂ ಜಿಎಸ್‌ಟಿ ಜೊತೆಗೆ ಈ ಹೆಚ್ಚುವರಿ ಸುಂಕದ ಹೊರೆಯೂ ತಟ್ಟಲಿದೆ. ಸಾರ್ವಜನಿಕರು ಕನಿಷ್ಠ ಒಂದು ವರ್ಷದವರೆಗೆ ಅನಗತ್ಯ ಚಿನ್ನದ ಖರೀದಿಯನ್ನು ಮುಂದೂಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಮನವಿ ಮಾಡಿದ್ದರು. ಆಮದಾಗುವ ಚಿನ್ನದ ಮೇಲೆ 15% ತೆರಿಗೆ ವಿಧಿಸಲಾಗಿದೆ. ಇದರ ಜೊತೆ ಇದರ ಜೊತೆಗೆ ಚಿನ್ನದ ಮೌಲ್ಯದ ಮೇಲೆ 3% ಜಿಎಸ್‌ಟಿ ಮೊದಲದೇ ವಿಧಿಸಲಾಗಿದೆ. ಹೀಗಾಗಿ ಚಿನ್ನದ ದರ ಮತ್ತಷ್ಟು ಏರಿಕೆಯಾಗಲಿದೆ. ಭಾರತದ ಚಿನ್ನದ ಆಮದು ಬಿಲ್ 2025 ರಲ್ಲಿ ಸುಮಾರು 58.9 ಬಿಲಿಯನ್‌ ಡಾಲರ್‌ಗೆ(5.62 ಲಕ್ಷ ಕೋಟಿ ರೂ.) ತಲುಪಿತ್ತು, ಇದು ದೇಶದ ಒಟ್ಟು ವಿದೇಶಿ ವಿನಿಮಯ ಮೀಸಲು ನಿಧಿಯ ಮೇಲೆ ಭಾರಿ ಒತ್ತಡ ಹೇರಿತು. ಚಿನ್ನಕ್ಕಾಗಿ ಭಾರತೀಯ ರೂಪಾಯಿಗಳನ್ನು ನೀಡಿ ಡಾಲರ್ ಖರೀದಿಸುವುದರಿಂದ ಜಾಗತಿಕ ಮಾರುಕಟ್ಟೆಯಲ್ಲಿ ರೂಪಾಯಿ ಮೌಲ್ಯ ಕುಸಿಯುತ್ತಿತ್ತು. ಇದನ್ನು ತಡೆಯಲು ಆಮದು ಪ್ರಮಾಣವನ್ನು ಕಡಿಮೆ ಮಾಡುವುದು ಅನಿವಾರ್ಯವಾಗಿತ್ತು. ವರ್ಷದಿಂದ ವರ್ಷಕ್ಕೆ ಚಿನ್ನದ ಸ್ಮಗ್ಲಿಂಗ್‌ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ 2024 ರ ಬಜೆಟ್‌ನಲ್ಲಿ ತೆರಿಗೆ ಇಳಿಸಿತ್ತು. ಚಿನ್ನ ಮತ್ತು ಬೆಳ್ಳಿಯ ಕಸ್ಟಮ್ಸ್‌ ಡ್ಯುಟಿ 15% ಇದ್ದರೆ ಅದನ್ನು 6% ಇಳಿಸಲಾಗಿತ್ತು. 6% ಹೇಗೆ ಅಂದರೆ ಅಮದು ಸುಂಕವನ್ನು 10% ರಿಂದ 5% ಇಳಿಕೆ ಮಾಡಿದ್ದರೆ ಕೃಷಿ ಮೂಲಸೌಕರ್ಯ ಅಭಿವೃದ್ಧಿ ಸೆಸ್ 5% ನಿಂದ 1% ಕ್ಕೆ ಇಳಿಸಲಾಗಿತ್ತು. ಆದರೆ ಈಗ ಮತ್ತೆ ಆಮದು ಸುಂಕವನ್ನು 15%ಗೆ ಏರಿಕೆ ಮಾಡಿದೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1608+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1838+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4301+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4479+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4500+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4579+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7058+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7539+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7577+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12772+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12896+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13171+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13192+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27160+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30198+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30218+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30247+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33251+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33256+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33378+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33472+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33502+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39048+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39137+