ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!
ವರದಿಗಾರರು : Shobha jagadish | ಸ್ಥಳ : Bangalore | ದಿನಾಂಕ : 08-04-2026

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

ಚಿಕ್ಕಮಗಳೂರು : ಶರಣ್ಯ ಸಿಕ್ಕ ಬೆನ್ನಲ್ಲೇ ಮತ್ತೋರ್ವ ಬಾಲಕಿ ಕಾಣೆಯಾಗಿದ್ದಾಳೆ . ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆಯಾಗಿರುವ ಘಟನೆ ನಡೆದಿದೆ .ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ 14 ವರ್ಷದ ಕೇರಳ ಮೂಲದ ಬಾಲಕಿ ಶ್ರೀ ನಂದಾ ನಾಪತ್ತೆಯಾಗಿದ್ದಾಳೆ. 40 ಜನರ ಪ್ರವಾಸಿ ತಂಡದೊಂದಿಗೆ ಬಂದಿದ್ದ ಶ್ರೀ ನಂದಾ ಮಾಣಿಕ್ಯಧಾರಾ ಬಳಿ ಕಾಣೆಯಾಗಿದ್ದು, ಕೂಡಲೇ ಸ್ಥಳೀಯರು ಹುಡುಕಾಟ ನಡೆಸಿದ್ದರು. ಇದೀಗ ಅಗ್ನಿಶಾಮಕ, ಅರಣ್ಯ, ಪೊಲೀಸ್ ಇಲಾಖೆಗಳು ಡ್ರೋನ್ ಸಹಾಯದಿಂದ ಬಾಲಕಿಯ ಶೋಧ ಕಾರ್ಯದಲ್ಲಿ ತೊಡಗಿವೆ. ಕೊಡಗಿನಲ್ಲಿ ಚಾರಣಕ್ಕೆಂದು ತೆರಳಿದ್ದ ಶರಣ್ಯ ನಾಪತ್ತೆಯಾಗಿ ವಾಪಸಾದ ಬೆನ್ನಲ್ಲೇ ಅದೇ ರೀತಿಯ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಜಿಲ್ಲೆಯ ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಅಪ್ರಾಪ್ತ ಬಾಲಕಿ ಶ್ರೀ ನಂದಾ ನಿನ್ನೆ ಸಂಜೆ ಸುಮಾರು 6 ಗಂಟೆಯಿಂದ ಕಾಣೆಯಾಗಿದ್ದಾಳೆ. ಕೇರಳ ರಾಜ್ಯದ ಪಾಲಕ್ಕಾಡ್ ಮೂಲದ 14 ವರ್ಷದ ಈ ಬಾಲಕಿ ಪೋಷಕರೊಂದಿಗೆ ಸುಮಾರು 40 ಜನರ ತಂಡದೊಂದಿಗೆ ಪ್ರವಾಸಕ್ಕೆ ಬಂದಿದ್ದಳು. ಈ ವೇಳೆ ಚಂದ್ರದ್ರೋಣ ಪರ್ವತ ಸರಣಿಯ ಮಾಣಿಕ್ಯಧಾರಾ ಸಮೀಪದಲ್ಲಿ ಕಾಣೆಯಾಗಿರುವುದು ತಿಳಿದುಬಂದಿದೆ. ಬಾಲಕಿ ಕಾಣೆಯಾಗುತ್ತಿದ್ದಂತೆಯೇ ಸ್ಥಳೀಯರು ಹಾಗೂ ಪ್ರವಾಸಿಗರು ಹುಡುಕಾಟ ಆರಂಭಿಸಿದರೂ ಯಾವುದೇ ಸುಳಿವು ಸಿಗಲಿಲ್ಲ. ರಾತ್ರಿ ಪೂರ್ತಿ ಅಗ್ನಿಶಾಮಕ ದಳ, ಅರಣ್ಯ ಇಲಾಖೆ ಹಾಗೂ ಪೊಲೀಸ್ ಸಿಬ್ಬಂದಿ ಸಂಯುಕ್ತವಾಗಿ ಶೋಧ ಕಾರ್ಯ ನಡೆಸಿದರು. ಇಂದೂ ಡ್ರೋನ್ ಸಹಾಯದಿಂದ ಹುಡುಕಾಟ ಮುಂದುವರಿದಿದ್ದು, ಸಂಪೂರ್ಣ ಹುಲ್ಲುಗಾವಲು ಹಾಗೂ ಇಳಿಜಾರು ಪ್ರದೇಶಗಳಿಂದ ಕೂಡಿರುವ ಈ ಪ್ರದೇಶದಲ್ಲಿ ಕಾರ್ಯಾಚರಣೆ ಸವಾಲಿನದ್ದಾಗಿದೆ. ಈ ಘಟನೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಾಲಕಿ ನಾಪತ್ತೆಯಾಗಿರುವ ಹಿನ್ನೆಲೆ ಹಲವು ಅನುಮಾನಗಳು ವ್ಯಕ್ತವಾಗುತ್ತಿವೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1648+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1878+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4341+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4519+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4540+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4619+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7098+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7579+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7617+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12812+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12936+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13211+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13232+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27200+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30238+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30258+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30287+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33291+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33296+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33418+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33512+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33543+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39089+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39178+