ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?
ವರದಿಗಾರರು : SHOBHA JAGADISH | ಸ್ಥಳ : BANGLORE | ದಿನಾಂಕ : 27-05-2026

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

ಬೆಂಗಳೂರು, ಮೇ 27: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ (Siddaramaiah) ಅವರಿಂದ ರಾಜೀನಾಮೆ ಪಡೆದು ನೂತನ ಮುಖ್ಯಮಂತ್ರಿಯ ಆಯ್ಕೆಯ ಬಳಿಕವೂ ವೋಟ್​​ ಬ್ಯಾಂಕ್​​ ಕಳೆದುಕೊಳ್ಳದಿರುವಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಕಾಂಗ್ರೆಸ್​​ ವರಿಷ್ಠರು ಹತ್ತು ಹಲವು ತಂತ್ರಗಳನ್ನು ಹೆಣೆದಿದ್ದಾರೆ. ಜಾತಿ ಸಮೀಕರಣ ಆಧರಿಸಿ ಲೆಕ್ಕಾಚಾರ ಹಾಕಲಾಗಿದ್ದು, ಕೇವಲ ಮುಖ್ಯಮಂತ್ರಿ ಬದಲಾವಣೆ ಮಾತ್ರವಲ್ಲದೆ ಸರ್ಕಾರ ಮತ್ತು ಪಕ್ಷಕ್ಕೆ ಸಂಬಂಧಿಸಿ ಕೆಲ ಮಹತ್ವದ ನಿರ್ಣಯ ಕೈಗೊಂಡಿದ್ದಾರೆ. ಸಿಎಂ ಬದಲಾವಣೆಯಿಂದ ಯಾವುದೇ ಸಮುದಾಯಗಳಿಗೂ ನೋವಾಗಂತೆ ನೋಡಿಕೊಳ್ಳುವ ಬಗ್ಗೆಯೂ ಹೈಕಮಾಂಡ್​​ ಪ್ಲ್ಯಾನ್​​ ರೂಪಿಸಿರುವ ಮಾಹಿತಿ ಸಿಕ್ಕಿದೆ. ನಾಲ್ವರಿಗೆ ಡಿಸಿಎಂ ಸ್ಥಾನ? ನೂತನ ಮುಖ್ಯಮಂತ್ರಿಯ ಆಯ್ಕೆ ಜೊತೆಗೆ ನಾಲ್ವರಿಗೆ ಡಿಸಿಎಂ ಸ್ಥಾನ ನೀಡುವ ಬಗ್ಗೆ ಹೈಕಮಾಂಡ್​​ನಲ್ಲಿ ಚರ್ಚೆ ನಡೆದಿದೆ. ಜಾತಿ ಸಮೀಕರಣ ಆಧರಿಸಿ ನಾಲ್ವರಿಗೆ ಪ್ರಾತಿನಿಧ್ಯ ನೀಡುವ ಮಾತುಗಳು ಕೇಳಿಬಂದಿವೆ. ಒಬಿಸಿ, ದಲಿತ, ಮುಸ್ಲಿಂ ಅಥವಾ ಅಲ್ಪಸಂಖ್ಯಾತ ಮತ್ತು ಲಿಂಗಾಯತ ಕೋಟಾದಡಿಯಲ್ಲಿ ನಾಲ್ವರನ್ನು ಉಪಮುಖ್ಯಮಂತ್ರಿ ಮಾಡುವ ಬಗ್ಗೆ ವರಿಷ್ಠರು ಒಲವು ತೋರಿದ್ದಾರಂತೆ. ಡಿಸಿಎಂ ರೇಸ್​​ನಲ್ಲಿ ಯಾರ್ಯಾರು? ದಲಿತ ಕೋಟಾದಲ್ಲಿ ಹಾಲಿ ಗೃಹ ಸಚಿವರಾಗಿರುವ ಪರಮೇಶ್ವರ್ ಅಥವಾ ಸಚಿವ ಪ್ರಿಯಾಂಕ್​​ ಖರ್ಗೆ ಡಿಸಿಎಂ ಆಗುವ ಸಾಧ್ಯತೆ ಇದ್ದರೆ, ಒಬಿಸಿ ಕೋಟಾದಲ್ಲಿ ಯತೀಂದ್ರಗೆ ಡಿಸಿಎಂ ಸ್ಥಾನ ಸಿಗಬಹುದು ಎನ್ನಲಾಗಿದೆ. ಇನ್ನು ಮುಸ್ಲಿಂ ಕೋಟಾದಲ್ಲಿ ಹಾಲಿ ಸಚಿವ ಜಮೀರ್ ಅಥವಾ ಸದ್ಯ ವಿಧಾನ ಸಭೆ ಸ್ಪೀಕರ್​​ ಆಗಿರುವ ಯು.ಟಿ. ಖಾದರ್​ಗೆ ಹೈಕಮಾಂಡ್​​ ಮಣೆ ಹಾಕುವ ಸಾಧ್ಯತೆ ಇದೆ. ಲಿಂಗಾಯತ ಕೋಟಾದಲ್ಲಿ ಈಶ್ವರ್ ಖಂಡ್ರೆ ಮತ್ತು ಎಂ.ಬಿ.ಪಾಟೀಲ್ ರೇಸ್​​ನಲ್ಲಿದ್ದರೆ, ಅಲ್ಪಸಂಖ್ಯಾತ ಕೋಟಾದಲ್ಲಿ ಕೆ.ಜೆ.ಜಾರ್ಜ್​ಗೆ ಡಿಸಿಎಂ ಸ್ಥಾನ ಸಿಗುವ ಬಗ್ಗೆ ಅಂದಾಜಿಸಲಾಗಿದೆ. ನೂತನ ಸಿಎಂ ಬೆನ್ನಲ್ಲೇ ಕೆಪಿಸಿಸಿಗೂ ಹೊಸ ಸಾರಥಿ ಇನ್ನು ನೂತನ ಸಿಎಂ ಆಗಿ ಡಿ.ಕೆ. ಶಿವಕುಮಾರ್​​ ಅವರ ಆಯ್ಕೆ ಬಹುತೇಕ ಖಚಿತವಾಗಿರುವ ಹಿನ್ನೆಲೆ ಕೆಪಿಸಿಸಿಗೂ ಹೊಸ ಸಾರಥಿಯ ನೇಮಕವಾಗಲಿದೆ. ಸಿಎಂ ಘೋಷಣೆಯ ಜೊತೆ ಜೊತೆಗೆ ಕೆಪಿಸಿಸಿಗೂ ನೂತನ ಅಧ್ಯಕ್ಷರನ್ನು ಹೈಕಮಾಂಡ್ ಘೋಷಿಸಲಿದ್ದು, ಸಿಎಂ ಮತ್ತು ಡಿಸಿಎಂ ಆಯ್ಕೆ ಆಧರಿಸಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ಯಾರಿಗೆ ದಕ್ಕಲಿದೆ ಎಂಬುದು ನಿರ್ಧಾರವಾಗಲಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಈಗಾಗಲೇ ಸಚಿವ ಸತೀಶ್​​ ಜಾರಕಿಹೊಳಿ ಕಣ್ಣಿಟ್ಟಿದ್ದು, ಈ ಸಂಬಂಧ ಕೆಲ ನಾಯಕರ ಜೊತೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಆದರೆ ಹೈಕಮಾಂಡ್​​ ಮನ್ನಣೆ ಯಾರಿಗೆ ಅನ್ನೋದನ್ನು ಕಾದುನೋಡಬೇಕಿದೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1517+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1748+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4210+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4388+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4409+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4488+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 6968+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7448+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7487+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12682+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12805+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13080+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13102+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27070+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30107+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30127+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30157+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33160+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33165+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33287+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33382+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33412+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 38958+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39047+