ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಬೆಳಗಾವಿ ವಂಚನೆ ಪ್ರಕರಣದಲ್ಲಿ ನೂರಾರು ಕೋಟಿ ಹಣ ಪತ್ತೆ!
ವರದಿಗಾರರು : SHOBHA JAGADISH | ಸ್ಥಳ : BANGLORE | ದಿನಾಂಕ : 19-05-2026

ಬೆಳಗಾವಿ ವಂಚನೆ ಪ್ರಕರಣದಲ್ಲಿ ನೂರಾರು ಕೋಟಿ ಹಣ ಪತ್ತೆ!

ಬೆಳಗಾವಿಯ ಶಿವಂ ಅಸೋಸಿಯೇಟ್ಸ್ (Shivam Associates) ಬಹುಕೋಟಿ ಹಗರಣದ ಪ್ರಮುಖ ಆರೋಪಿ ಶಿವಾನಂದ ನೀಲಣ್ಣನವರ್‌ನನ್ನು ಬೆಳಗಾವಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 10 ದಿನಗಳ ಕಾಲ ಸಿಐಡಿ (CID) ಕಸ್ಟಡಿಗೆ ಒಪ್ಪಿಸಿದೆ. ಬೆಳಗಾವಿಯ 4,500 ಕೋಟಿ ರೂ. ಮಹಾವಂಚನೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಸಿಐಡಿ, ಆರೋಪಿಯ 15 ಖಾತೆಗಳನ್ನು ಫ್ರೀಜ್ ಮಾಡಿದೆ. ಹೈಪ್ರೊಫೈಲ್ ವಂಚನೆ ಪ್ರಕರಣದ ಇತ್ತೀಚಿನ ಪ್ರಮುಖ ಅಪ್ಡೇಟ್‌ಗಳು ಇಲ್ಲಿವೆ. 10 ದಿನಗಳ ಕಾಲ ಸಿಐಡಿ ತೀವ್ರ ವಿಚಾರಣೆಸಿಐಡಿ ಡಿಐಜಿ ಭೇಟಿ ಪ್ರಕರಣದ ಗಂಭೀರತೆ ಪರಿಗಣಿಸಿ ಸಿಐಡಿ ಡಿಐಜಿ ಡಾ. ಭೀಮಾಶಂಕರ್ ಗುಳೇದ್ ಅವರು ಖುದ್ದಾಗಿ ಬೆಂಗಳೂರಿನಿಂದ ಬೆಳಗಾವಿಗೆ ಆಗಮಿಸಿ ತನಿಖೆಯ ಜವಾಬ್ದಾರಿ ವಹಿಸಿಕೊಂಡಿದ್ದಾರೆ.ಅಂತರರಾಜ್ಯ ತನಿಖೆ ಆರೋಪಿಯು ಕರ್ನಾಟಕ ಮಾತ್ರವಲ್ಲದೆ ಮಹಾರಾಷ್ಟ್ರ, ಗೋವಾ ಸೇರಿದಂತೆ ಇತರೆ ರಾಜ್ಯಗಳಲ್ಲೂ ವ್ಯವಹಾರ ನಡೆಸಿರುವುದರಿಂದ, ಹಣದ ಹರಿವನ್ನು ಪತ್ತೆಹಚ್ಚಲು ಸಿಐಡಿ ತಂಡ ಆ ರಾಜ್ಯಗಳಿಗೂ ಭೇಟಿ ನೀಡಿ ಸಾಕ್ಷ್ಯ ಸಂಗ್ರಹಿಸಲಿದೆ. ನ್ಯಾಯಾಲಯದಲ್ಲಿ ಆರೋಪಿ ಹೇಳಿಕೆ ಮತ್ತು ಜಡ್ಜ್ ಪ್ರತಿಕ್ರಿಯೆ"ಜನರಿಗೆ ನಾನೇ ಬೇಕು": ವಿಚಾರಣೆ ವೇಳೆ ಆರೋಪಿ ಶಿವಾನಂದ, 35,000 ಹೂಡಿಕೆದಾರರಿಗೆ ಹಣ ಬೇಡ, ನಾನೇ ಬೇಕು" ಎಂದು ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಿದ್ದಾನೆ.ನ್ಯಾಯಾಧೀಶರ ಗರಂ: ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು, ಹಣ ಲೂಟಿ ಮಾಡಿ ಓಡಿಹೋದ ಇಂತಹ ಹಗರಣಗಳ ಇತಿಹಾಸ ನೋಡಿಯೇ ಸರ್ಕಾರ ಕಠಿಣ ಕಾನೂನು ತಂದಿದೆ. ಮುಗ್ಧ ಹೂಡಿಕೆದಾರರ ಹಿತರಕ್ಷಣೆ ಮಾಡುವುದು ಸರ್ಕಾರದ ಜವಾಬ್ದಾರಿ ಎಂದು ಗರಂ ಆಗಿ ಬುದ್ಧಿ ಕಲಿಸಿದ್ದಾರೆ. ವಂಚನೆಯ ಜಾಲ ಮತ್ತು ಮುಟ್ಟುಗೋಲುಶೇ. 36 ರಷ್ಟು ಬಡ್ಡಿಯ ಆಮಿಷ 1 ಲಕ್ಷ ರೂಪಾಯಿ ಡೆಪಾಸಿಟ್ ಇಟ್ಟರೆ ಪ್ರತಿ ತಿಂಗಳು ₹3,000 (ವಾರ್ಷಿಕ ಶೇ. 36) ಬಡ್ಡಿ ನೀಡುವುದಾಗಿ ನಂಬಿಸಿ ಮಾಜಿ ಸೈನಿಕರು, ರೈತರು ಸೇರಿದಂತೆ ಸುಮಾರು 35,000 ಕ್ಕೂ ಹೆಚ್ಚು ಜನರಿಗೆ ವಂಚಿಸಲಾಗಿದೆ.ಆಸ್ತಿ, ದಾಖಲೆಗಳ ಜಪ್ತಿ ಮಾಲ್ಮಾರುತಿ ಪೊಲೀಸ್ ಠಾಣೆಯಲ್ಲಿ BUDS ಹಾಗೂ KPID ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಯ ಕೋಟ್ಯಂತರ ಮೌಲ್ಯದ ಬಾಂಡ್ ಪೇಪರ್‌ಗಳು, ಐಷಾರಾಮಿ ಕಾರುಗಳು ಹಾಗೂ ನೂರಾರು ಕೋಟಿ ಹಣದ ಬ್ಯಾಂಕ್ ಖಾತೆಗಳನ್ನು ಫ್ರೀಜ್ ಮಾಡಲಾಗಿದೆ.ಸಿಐಡಿ ತನಿಖೆ ಮುಂದುವರಿದಿದ್ದು, ಈ ಪ್ರಕರಣದಲ್ಲಿ ಭಾಗಿಯಾಗಿರುವ ಇನ್ನುಳಿದ ರಾಜಕೀಯ ಪ್ರಭಾವಿ ನಾಯಕರ ಲಿಂಕ್‌ಗಳು ಶೀಘ್ರದಲ್ಲೇ ಹೊರಬರುವ ಸಾಧ್ಯತೆ ಇದೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1648+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1878+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4341+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4519+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4540+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4619+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7098+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7579+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7617+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12812+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12936+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13211+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13232+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27200+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30238+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30258+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30287+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33291+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33296+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33418+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33512+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33543+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39089+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39178+