ಜಿಮ್ ಗೆ ಬರುವ ಹಿಂದೂ ಯುವತಿಯರನ್ನುಅಸಭ್ಯವಾಗಿ ನಡೆಸಿಕೊಳ್ಳುತಿದ್ದ ಜಿಮ್ ಟ್ರೈನರ್ ...
ಧಾರವಾಡ ; ಧಾರವಾಡದದಲ್ಲಿ ಜಿಮ್ ಟ್ರೈನರ್ ಓರ್ವ ಹಿಂದೂ ಯುವತಿಯರನ್ನೇ ಟಾರ್ಗೆಟ್ ಮಾಡಿ ಅಸಭ್ಯವಾಗಿ ವರ್ತಿಸಿದ ಆರೋಪ ಕೇಳಿಬಂದಿದೆ. ಹಿಂದೂ ಯುವತಿಯರನ್ನು ಟಾರ್ಗೆಟ್ ಮಾಡಿ ಅನುಚಿತವಾಗಿ ವರ್ತಿಸಿದ ಆರೋಪ ಮುಸ್ಲಿಂ ಜಿಮ್ ಟ್ರೈನರ್ ವಿರುದ್ಧ ಕೇಳಿಬಂದಿದೆ. ಧಾರವಾಡದ ನಗರದ ಮರಾಠಾ ಕಾಲನಿಯಲ್ಲಿರುವ ಫಿಟ್ನೆಸ್ ಫಸ್ಟ್ ಜಿಮ್ ಟ್ರೈನರ್ ಸಾಬಿರ್, ಟ್ರೈನಿಂಗ್ ವೇಳೆ ಬೇಕಂತಲೇ ಮೈಮುಟ್ಟಿ ಅನುಚಿತ ವರ್ತನೆ ಮಾಡುತ್ತಾನೆಂದು ಆರೋಪಿಸಲಾಗಿದೆ. ವರ್ಕೌಟ್ ಮಾಡಲು ಬರುವ ಹಿಂದೂ ಯುವತಿಯರಿಗೆ ಟ್ರೈನಿಂಗ್ ವೇಳೆ ಬೇಕಂತಲೇ ಮೈಮುಟ್ಟಿ ಅನುಚಿತವಾಗಿ ವರ್ತಿಸುವುದಲ್ಲದೇ ಯುವತಿಯರ ಬಾತ್ ರೂಮ್ಗೆ ಹೋಗಿ ಬರುತ್ತಿದ್ದ ಎಂದು ಆರೋಪಿಸಿದ್ದು, ಈ ಸಂಬಂಧ ಬಜರಂಗದಳ ಕಾರ್ಯಕರ್ತರು ಜಿಮ್ಗೆ ಬೀಗ ಹಾಕಿ ಜಿಮ್ ಟ್ರೈನರ್ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಹೀಗೆ ಹಿಂದೂ ಯುವತಿಯರನ್ನೇ ಟಾರ್ಗೆಟ್ ಮಾಡಿ ಅವರೊಂದಿಗೆ ಅಸಭ್ಯವಾಗಿ ವರ್ತನೆ ಮಾಡಿದ ಆರೋಪ ಸಂಬಂಧ ಈ ಹಿಂದೆಯೇ ಟ್ರೈನರ್ ಸಾಬಿರ್ಗೆ ಬಜರಂಗದಳ ಕಾರ್ಯಕರ್ತರು ಎಚ್ಚರಿಕೆ ನೀಡಿದ್ದರು. ಆದರೂ ವರ್ತನೆ ಸರಿಪಡಿಸಿಕೊಳ್ಳದ ಸಾಬಿರ್ ವಿರುದ್ಧ ಮತ್ತೆ ಆರೋಪಗಳು ಕೇಳಿಬಂದಿದ್ದು, ಈ ಸಂಬಂಧ ಇದೀಗ ಬಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಹಿಂದೂ ಯುವತಿಯರನ್ನೇ ಟಾರ್ಗೆಟ್ ಮಾಡಿ ಅನುಚಿತ ವರ್ತನೆ ಮಾಡುವ ಜಿಮ್ ನಲ್ಲಿ ಟ್ರೈನರ್ ಸಾಬಿರ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಇತರೆ ಸುದ್ದಿಗಳು