ಪಕ್ಷ ವಿರೋಧಿ ಚಟುವಟಿಕೆ ಆರೋಪ ಹಿನ್ನೆಲೆ ಕಾಂಗ್ರೆಸ್ ನಿಂದ ಅಬ್ದುಲ್ ಜಬ್ಬಾರ್ ವಜಾ ... ! ಡಿಕೆಶಿ
ಬೆಂಗಳೂರು : ದಾವಣಗೆರೆ ಉಪ ಚುನಾವಣೆ ದಂಗಲ್ ವಿಚಾರಕ್ಕೆ ಅಲ್ಪಸಂಖ್ಯಾತ ನಾಯಕರ ತಲೆದಂಡ ಮುಂದುವರೆದಿದೆ. ಪಕ್ಷ ವಿರೋಧಿ ಚಟುವಟಿಕೆ ಆರೋಪ ಹಿನ್ನೆಲೆ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ಅವರ ವಿರುದ್ಧ ಕಾಂಗ್ರೆಸ್ ಶಿಸ್ತು ಕ್ರಮ ಕೈಗೊಂಡಿದ್ದು, ಪಕ್ಷದಿಂದ ವಜಾಗೊಳಿಸಲಾಗಿದೆ. ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವದಿಂದ ಅಬ್ದುಲ್ ಜಬ್ಬಾರ್ ಅವರನ್ನು ವಜಾಗೊಳಿಸಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಮಾನತು ಆದೇಶ ಹೊರಡಿಸಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಚುನಾವಣೆ ವಿಚಾರ ಅಬ್ದುಲ್ ಜಬ್ಬಾರ್ ವಿರುದ್ದ ಮತ್ತಷ್ಟು ದಾಖಲೆಗಳು ಲಭ್ಯವಾದ ಹಿನ್ನೆಲೆ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದಲೇ ಡಿಕೆ ಶಿವಕುಮಾರ್ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಅಲ್ಪಸಂಖ್ಯಾತ ನಾಯಕರು ತಮ್ಮ ಸಮುದಾಯದ ನಾಯಕನಿಗೆ ಟಿಕೆಟ್ ನೀಡುವಂತೆ ಬೇಡಿಕೆ ಇಟ್ಟಿದ್ದರು. ಆದ್ರೆ ಈಗ ಚುನಾವಣೆಯಲ್ಲಿ ಸೋಲುವ ಭಯದಿಂದ ನನ್ನನ್ನು ಬಲಿಪಶುವನ್ನಾಗಿ ಮಾಡಲಾಗುತ್ತಿದೆ ಎಂದು ಎಂಎಲ್‌ಸಿ ಅಬ್ದುಲ್ ಜಬ್ಬಾರ್ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು.