ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ದಾವಣಗೆರೆ ಎಸ್ಪಿ ಫೋನ್ ಇನ್ ಕಾರ್ಯಕ್ರಮದಲ್ಲಿ ಸಾಲು ಸಾಲು ದೂರುಗಳು!
ವರದಿಗಾರರು : ದರ್ಶನ್ ಎಂ.ಎನ್ | ಸ್ಥಳ : ದಾವಣಗೆರೆ | ದಿನಾಂಕ : 12-01-2026

ದಾವಣಗೆರೆ ಎಸ್ಪಿ ಫೋನ್ ಇನ್ ಕಾರ್ಯಕ್ರಮದಲ್ಲಿ ಸಾಲು ಸಾಲು ದೂರುಗಳು!

ದಾವಣಗೆರೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಎಸ್ಪಿ ಉಮಾ ಪ್ರಶಾಂತ್ ಅವರು ಫೋನ್‌ ಇನ್‌ ಕಾರ್ಯಕ್ರಮ ನಡೆಸಿಕೊಟ್ಟರು. ಈ ಕಾರ್ಯಕ್ರಮದಲ್ಲಿ ಸುಮಾರು 50ಕ್ಕೂ ಹೆಚ್ಚು ಕರೆಗಳು ಬಂದಿದ್ದು, ಜಿಲ್ಲೆಯ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿದರು

)ದಾವಣಗೆರೆ ನಗರದ ಆಂಜನೇಯ ಬಡಾವಣೆ ನಿವಾಸಿಯೊಬ್ಬರು ಕರೆ ಮಾಡಿ ಮಾತನಾಡಿದರು. ದಾವಣಗೆರೆ ನಗರದ ಅನುಭವ ಮಂಟಪ ಶಾಲೆ -ಕಾಲೇಜು, ಕಾಲೇಜುಗಳ ಹತ್ತಿರ ಕೆಲವು ಯುವಕರು ಕಾರುಗಳಲ್ಲಿ ಕುಳಿತುಕೊಂಡು ರಾತ್ರಿ 9 ಗಂಟೆಯಿಂದ ಡ್ರಿಂಕ್ಸ್ ಮಾಡುತ್ತಾರೆ. ಕಾರಿನಲ್ಲಿ ಕುಳಿತುಕೊಂಡು ಫುಡ್ ಆರ್ಡರ್ ಮಾಡಿ ತಿನ್ನುತ್ತಿದ್ದಾರೆ. ಇದರಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದೆ. ಈ ಭಾಗದಲ್ಲಿ ಕೆಲವು ಹುಡುಗ ಹುಡುಗಿಯರು ಅನೈತಿಕ ಚಟುವಟಿಕೆಗಳು ಕೂಡ ಮಾಡುತ್ತಾರೆ ಎಂದು ದೂರು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಎಸ್ಪಿ ಉಮಾ ಪ್ರಶಾಂತ್ ಅವರು, ಈ ಬಗ್ಗೆ ಗಮನಹರಿಸಿ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.

ದಾವಣಗೆರೆ ನಗರದ ಕೆಬಿ ಬಡಾವಣೆ ವ್ಯಕ್ತಿಯೊಬ್ಬರು ಕರೆ ಮಾಡಿ ಮಾತನಾಡಿ ನನಗೆ ವಯಸ್ಸಾಗಿದೆ ನಾಲ್ಕು ಲಕ್ಷ ಹಣ ನೀಡಿದ್ದೇನೆ. ಒಬ್ಬ ವ್ಯಕ್ತಿ ಚೆಕ್ಕ್ಕು ಕೊಟ್ಟು ತೆಗೆದುಕೊಂಡು ಹೋಗಿದ್ದಾನೆ. ಆದರೆ ಈ ಹಣ ಇನ್ನು ವಾಪಸ್ಸು ಕೊಟ್ಟಿಲ್ಲ. ಈ ಸಮಸ್ಯೆಯನ್ನು ಪರಿಹಾರ ಮಾಡಕೊಡಬೇಕು ಎಂದು ಕೋರಿದರು. ಇದಕ್ಕೆ ಎಸ್ಪಿ ಅವರು,ಇದು ಸಿವಿಲ್ ವ್ಯಾಜ್ಯವಾಗಿರುತ್ತದೆ. ಆದರೂ ಕೂಡ ನೀವು ಕೆಟಿಜೆ ನಗರ ಪೊಲೀಸ್ ಠಾಣೆಗೆ ದೂರು ನೀಡಿ, ಕ್ರಿಮಿನಲ್ ಪ್ರಕರಣವಾಗಿದ್ದರೆ ನಾವು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.

ದಾವಣಗೆರೆ ನಗರದ ನಿಟ್ಟುವಳ್ಳಿಯಲ್ಲಿರುವ ರಾಷ್ಟ್ರೋತ್ಥಾನ ಸ್ಕೂಲ್ ಮುಖ್ಯ ಗೇಟ್ ಹತ್ತಿರ ಹಾದು ಹೋಗುವ ರಸ್ತೆಯಲ್ಲಿ ಎಲ್ಲೆಂದರಲ್ಲಿ ವಾಹನಗಳನ್ನು ನಿಲ್ಲಿಸಲಾಗುತ್ತಿದೆ. ಇದರಿಂದ ಟ್ರಾಫಿಕ್ ದಟ್ಟಣೆ ಉಂಟಾಗಿ ಶಾಲಾ ಮಕ್ಕಳಿಗೆ ತೊಂದರೆ ಉಂಟಾಗುತ್ತಿದೆ ಎಂದು ಗಮನಕ್ಕೆ ತಂದರು. ನಂತರ ಪೊಲೀಸ್ ವರಿಷ್ಠಾಧಿಕಾರಿಗಳು ಮಾತನಾಡಿಈ ಬಗ್ಗೆ ಕ್ರಮ ಕೈಗೊಂಡು ಸಮಸ್ಯೆಯನ್ನು ಬಗೆಹರಿಸುತ್ತೇವೆ ಎಂದರು.

ದಾವಣಗೆರೆ ತಾಲೂಕು ಬಸವಾಪುರ ಗ್ರಾಮದ ನಿವಾಸಿಯೊಬ್ಬರು ಕರೆ ಮಾಡಿ ಮಾತನಾಡಿ ನಾನು ಹೆಲ್ಮೆಟ್ ಇಲ್ಲದೆ ದ್ವಿಚಕ್ರ ವಾಹನ ಚಾಲನೆ ಮಾಡುತ್ತಿದ್ದಾಗ ದಾವಣಗೆರೆ ನಗರದ ಹದಡಿ ರಸ್ತೆಯ ಸರ್ ಎಂ ವಿ ಕಾಲೇಜು ಹತ್ತಿರ ಟ್ರಾಫಿಕ್ ಪೊಲೀಸರು ನನ್ನ ಗಾಡಿಯನ್ನು ಹಿಡಿದು ಫೈನ್ ಹಾಕಿದರು. ನಾನು ನಂತರ ಫೈನ್ ಅಮೌಂಟ್ ಅನ್ನು ಕಟ್ಟುವುದಾಗಿ ತಿಳಿಸಿದಾಗ ವೈಯಕ್ತಿಕವಾಗಿ ನಿನಗೆ ಯೋಗ್ಯತೆ ಇಲ್ಲ ಎಂದು ನಿಂದನೆ ಮಾಡಿದ್ದಾರೆ. ಇದರಿಂದ ನನಗೆ ತುಂಬಾ ಬೇಸರವಾಗಿದೆ ಎಂದು ನೊಂದು ನುಡಿದರು. ನಂತರ ಪೊಲೀಸ್ ವರಿಷ್ಠಾಧಿಕಾರಿಗಳು ಮಾತನಾಡಿ: ಈ ಬಗ್ಗೆ ಸದರಿ ಪೊಲೀಸ್ ಸಿಬ್ಬಂದಿಗಳ ಮೇಲೆ ಪರಿಶೀಲನೆ ನಡೆಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.

ದಾವಣಗೆರೆ ನಗರನಿವಾಸಿ ಕರೆ ಮಾಡಿ ಮಾತನಾಡಿ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ420 ಕಲಂ ಅಡಿ ಕಂಪ್ಲೇಂಟ್ ಆಗಿದೆ. ಕೋರ್ಟ್ ನಿಂದ ಸಮನ್ಸ್ ಬಂದರೂ ಕೂಡಾ ಪೊಲೀಸರು ಅಪರಾಧಿಗೆ ಸಮನ್ಸ್ ಜಾರಿ ಮಾಡುತ್ತಿಲ್ಲ ಎಂದರು. ನಂತರ ಪೊಲೀಸ್ ವರಿಷ್ಠಾಧಿಕಾರಿಗಳು ಮಾತನಾಡಿ ಈ ಬಗ್ಗೆ ಕ್ರಮ ವಹಿಸಲಾಗುವುದು ಎಂದು ತಿಳಿಸಿರುತ್ತಾರೆ.

ದಾವಣಗೆರೆ ನಗರದ ರಾಜೀವ್ ಗಾಂಧಿ ಬಡಾವಣೆ ನಿವಾಸಿ ಮಹಿಳೆ ಕರೆ ಮಾಡಿ ಮಾತನಾಡಿ ನಗರದ ವಿಜಯನಗರ ಬಡಾವಣೆಯಲ್ಲಿ 30 * 40 ಸೈಟ್ ಇದೆ. ಯಾರೋ ಬಂದು ಈ ಸೈಟಿಗೆ ಬೋರ್ಡ್ ಹಾಕಿದ್ದಾನೆ. ಕರೆ ಮಾಡಿ ಸೆಟಲ್‌ಮೆಂಟ್ ಮಾಡಿಕೊಳ್ಳೋಣ ಎಂದು ಬೆದರಿಕೆ ಹಾಕುತ್ತಿದ್ದಾನೆ. ಈ ಬಗ್ಗೆ ದಿನಾಂಕ 05/01/2026 ರಂದು ದಾವಣಗೆರೆ ಎಸ್ಪಿ ಕಚೇರಿಯ ಟಪಾಲ್ ಗೆ ಅರ್ಜಿ ನೀಡಿದ್ದೇವೆ ಎಂದು ಹೇಳಿದರು. ನಂತರ ಪೊಲೀಸ್ ವರಿಷ್ಠಾಧಿಕಾರಿಗಳು ಮಾತನಾಡಿ: ಈ ಬಗ್ಗೆ ಪರಿಶೀಲನೆ ನಡೆಸುತ್ತೇವೆ. ಪೊಲೀಸ್ ಠಾಣೆಗೆ ದೂರು ನೀಡಿ. ನಾನು ಮಾತನಾಡುತ್ತೇನೆ ಎಂದರು.

ಫೋನ್ ಇನ್ ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಪರಮೇಶ್ವರ ಹೆಗಡೆ, ಡಿಪಿಒ ಡಿಎಸ್ ಬಿ ಪಿಐ ಕಿರಣ್‌ ಕುಮಾರ್, ಪೊಲೀಸ್ ಇನ್ ಸ್ಪೆಕ್ಟರ್ ಲಿಂಗನಗೌಡ ನೆಗಳೂರು, ರವೀಂದ್ರ ಕಾಲಭೈರವ ಮತ್ತಿತರರು ಹಾಜರಿದ್ದರು.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1618+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1848+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4311+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4489+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4510+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4589+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7068+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7549+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7587+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12782+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12906+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13181+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13202+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27170+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30208+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30228+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30257+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33261+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33266+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33388+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33482+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33513+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39059+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39148+