ನಟ ದರ್ಶನ್ ಗೆ ಬಾರಿ ಹಿನ್ನೆಡೆ ! ಜಾಮೀನು ಅರ್ಜಿ ತಿರಸ್ಕರಿದ ಕೋರ್ಟ್,ಇನ್ನು ಒಂದು ವರ್ಷ ಜೈಲು ಖಾಯಂ
ದರ್ಶನ್ ಜಾಮೀನು ಅರ್ಜಿ ಕುರಿತು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ . ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ನ್ಯಾಯಾಂಗ ಬಂಧನದಲಿದ್ದು, ಇತ್ತೀಚೆಗಷ್ಟೆ ಸುಪ್ರೀಂ ಕೋರ್ಟ್‌ನಲ್ಲಿ ಜಾಮೀನು ನಿರೀಕ್ಷೆಯಲ್ಲಿದ್ದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು ಇನ್ನು ಒಂದು ವರ್ಷ ಜೈಲಿನಲ್ಲಿ ಕಾಲ ಕಳೆಯುವುದು ಅನಿವಾರ್ಯವಾಗಿದೆ. ಒಂದು ವರ್ಷದೊಳಗೆ ವಿಚಾರಣಾ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಸೂಚಿಸಿದ ಕೋರ್ಟ್ ಅಲ್ಲಿಯವರೆಗೆ ಜಾಮೀನು ನೀಡಲು ನಿರಾಕರಿಸಿದೆ. ಈ ಆದೇಶದಿಂದ ಮುಂದಿನ ವರ್ಷ ಮೇ 15ರವರೆಗೆ ದರ್ಶನ್‌ಗೆ ಜೈಲಿನಲ್ಲಿರುವುದು ಅನಿವಾರ್ಯವಾಗಿದೆ. ನ್ಯಾ. ಪರ್ದಿವಾಲಾ ಮತ್ತು ನ್ಯಾ. ವಿಜಯ್ ಬಿಷ್ನೋಯಿ ಅವರ ಪೀಠದಲ್ಲಿ ಇಂದು ದರ್ಶನ್ ಸಲ್ಲಿಸಿದ ಜಾಮೀನು ಅರ್ಜಿಯ ವಿಚಾರಣೆ ನಡೆಯಿತು. ವಿಚಾರಣೆ ಆರಂಭವಾಗುತ್ತಿದ್ದಂತೆ ದರ್ಶನ್ ಪರ ವಕೀಲರು, “ಜೈಲಿನಲ್ಲಿ ದರ್ಶನ್ ಅವರನ್ನು ಕ್ವಾರಂಟೈನ್ ಸೆಲ್‌ನಲ್ಲಿ ಇರಿಸಲಾಗಿದ್ದು, ಯಾರೊಂದಿಗೂ ಮಾತನಾಡಲು ಅವಕಾಶ ನೀಡುತ್ತಿಲ್ಲ. ಕುಟುಂಬ ಸದಸ್ಯರನ್ನು ಭೇಟಿ ಮಾಡಲು ಕೇವಲ ಗ್ಲಾಸ್ ತಡೆಗೋಡೆ ಮೂಲಕ ಅವಕಾಶ ನೀಡಲಾಗುತ್ತಿದೆ. 9 ತಿಂಗಳಿನಿಂದ ಜೈಲಿನಲ್ಲಿದ್ದಾರೆ” ಎಂದು ವಾದ ಮಂಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು, “ಕ್ವಾರಂಟೈನ್ ಸೆಲ್ ಕೂಡ ಜೈಲಿನ ಒಂದು ಭಾಗವೇ ಆಗಿದೆ. ಸ್ಪೆಷಲ್ ಟ್ರೀಟ್‌ಮೆಂಟ್ ಸಿಗಬಾರದು ಎಂಬ ಉದ್ದೇಶದಿಂದ ಅಲ್ಲಿ ಇರಿಸಿರಬಹುದು. ಜೈಲು ಮ್ಯಾನ್ಯುಯಲ್ ಪ್ರಕಾರ ಅಗತ್ಯ ಸೌಲಭ್ಯಗಳನ್ನು ನೀಡಲು ಸೂಚಿಸುತ್ತೇವೆ” ಎಂದರು. ದರ್ಶನ್ ಪರ ವಕೀಲರು ಹಾಗೂ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ವಾದ-ಪ್ರತಿವಾದ ಆಲಿಸಿದ ಸುಪ್ರೀಂ ಕೋರ್ಟ್ ಇಂದು (ಮೇ 15) ದರ್ಶನ್ ಜಾಮೀನು ಅರ್ಜಿಯನ್ನು ಪುರಸ್ಕರಿಸಿಲ್ಲ. ಬದಲಿಗೆ ಒಂದು ವರ್ಷದ ಕಾಲಾವಕಾಶವನ್ನು ನೀಡಿದೆ.ಜಾಮೀನು ನಿರೀಕ್ಷೆಯಲ್ಲಿದ್ದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು ಇನ್ನು ಒಂದು ವರ್ಷ ಜೈಲಿನಲ್ಲಿ ಕಾಲ ಕಳೆಯುವುದು ಅನಿವಾರ್ಯವಾಗಿದೆ.