ವಾಯು ಭಾರ ಕುಸಿತ ಹಿನ್ನೆಲೆ ಇಂದು ಕೂಡ ಬೆಂಗಳೂರಿನಲ್ಲಿ ಮಳೆಯಾಗುವ ಸಾದ್ಯತೆ!
ಹೌದು, ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (IMD) ಕರ್ನಾಟಕದ ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಮುಂದಿನ ಮೂರು ದಿನಗಳ ಕಾಲ ರಾಜ್ಯಾದ್ಯಂತ ಗುಡುಗು, ಮಿಂಚು ಹಾಗೂ ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ. ಹವಾಮಾನ ವರದಿಯ ಪ್ರಮುಖ ವಿವರಗಳು ಹೀಗಿವೆ: ಆರೆಂಜ್ ಅಲರ್ಟ್ ಘೋಷಿಸಲಾದ ಪ್ರದೇಶಗಳುದಕ್ಷಿಣ ಒಳನಾಡು: ಪ್ರಮುಖವಾಗಿ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ 11 ಸೆಂ.ಮೀ ನಿಂದ 20 ಸೆಂ.ಮೀ ವರೆಗೆ ಅತ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ ನೀಡಲಾಗಿದೆ.ಉತ್ತರ ಒಳನಾಡು ಉತ್ತರ ಒಳನಾಡಿನ ಕೆಲವು ಭಾಗಗಳಲ್ಲೂ ವರುಣನ ಅಬ್ಬರ ಹೆಚ್ಚಾಗಲಿದ್ದು, ಗಾಳಿಯ ವೇಗ ಗಂಟೆಗೆ 40 ರಿಂದ 50 ಕಿ.ಮೀ ಇರಲಿದೆ. ಕೆಲವೆಡೆ ಆಲಿಕಲ್ಲು ಮಳೆಯ ಮುನ್ಸೂಚನೆ ಇದೆ. ಬೆಂಗಳೂರು ಮತ್ತು ಕರಾವಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ . ಬೆಂಗಳೂರು ನಗರ, ರಾಜಧಾನಿ ಬೆಂಗಳೂರಿನಲ್ಲಿ ಯೆಲ್ಲೋ ಅಲರ್ಟ್ ಮುಂದುವರಿದಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಭಾರಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಈಗಾಗಲೇ ನಗರದ ಹಲವೆಡೆ ಮಳೆಯಿಂದಾಗಿ ಟ್ರಾಫಿಕ್ ಜಾಮ್ ಹಾಗೂ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ.ಕರಾವಳಿ ಮತ್ತು ಮಲೆನಾಡು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ನದಿ ಹಾಗೂ ಹಳ್ಳಗಳ ನೀರಿನ ಮಟ್ಟ ಹೆಚ್ಚಾಗುವ ಸಾಧ್ಯತೆ ಇದೆ. ಸಾರ್ವಜನಿಕರಿಗೆ ಮುನ್ನೆಚ್ಚರಿಕೆಗಳುಮಳೆ ಮತ್ತು ಗಾಳಿ ಬೀಸುವಾಗ ಮರಗಳ ಕೆಳಗೆ ಅಥವಾ ವಿದ್ಯುತ್ ಕಂಬಗಳ ಬಳಿ ಆಶ್ರಯ ಪಡೆಯಬೇಡಿ.ತಗ್ಗು ಪ್ರದೇಶಗಳು ಹಾಗೂ ನೀರು ನಿಲ್ಲುವ ಅಂಡರ್ ಪಾಸ್‌ಗಳಲ್ಲಿ ವಾಹನ ಚಲಾಯಿಸುವಾಗ ಜಾಗರೂಕರಾಗಿರಿ.ನದಿ ಪಾತ್ರದ ಮತ್ತು ಕರಾವಳಿ ತೀರದ ನಿವಾಸಿಗಳು ಹಾಗೂ ಮೀನುಗಾರರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.