ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಖರ್ಗೆ ಹೇಳಿಕೆಗೆ ರಾಜ್ಯಸಭೆಯಲ್ಲೇ ದೇವೇಗೌಡರ ತಿರುಗೇಟು.!
ವರದಿಗಾರರು : Shobha jagadish | ಸ್ಥಳ : Bengaluru | ದಿನಾಂಕ : 24-03-2026

ಖರ್ಗೆ ಹೇಳಿಕೆಗೆ ರಾಜ್ಯಸಭೆಯಲ್ಲೇ ದೇವೇಗೌಡರ ತಿರುಗೇಟು.!

ನವದೆಹಲಿ: ನಮ್ಮ ಜತೆ ಪ್ರೀತಿಯಲ್ಲಿ ಇದ್ದರು ಕೂಡ , ಮೋದಿ ಅವರ ಜತೆ ಮದುವೆ ಆದರು ಎಂದು ತಮ್ಮ ಬಗ್ಗೆ ಟೀಕೆ ಮಾಡಿದ್ದ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ರಾಜ್ಯ ಸಭೆಯಲ್ಲಿಯೇ ನಿನ್ನೆ ಸೋಮವಾರ ತಿರುಗೇಟು ನೀಡಿದ್ದಾರೆ. ನಾನು ಸದನದಲ್ಲಿ ಇಲ್ಲದಿದ್ದ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಈ ವಿಷಯ ಪ್ರಸ್ತಾಪಿಸಿ ಮಾತನಾಡಿದ್ದಾರೆ. ಅವರು ನಾನೇನೂ ಅವರಿಗೆ, ಅವರ ಪಕ್ಷಕ್ಕೆ ದ್ರೋಹ ಬಗೆದಿದ್ದೇನೆ ಎಂದು ಅರ್ಥ ಬರುವ ರೀತಿಯಲ್ಲಿ ಮಾತನಾಡಿದ್ದಾರೆ. ಆದರೆ, ನಿಜವಾಗಿಯೂ ಕಾಂಗ್ರೆಸ್ ಪಕ್ಷದಿಂದ ದ್ರೋಹ ಆಗಿರುವುದು ನಮಗೆ, ನಮ್ಮ ಪಕ್ಷಕ್ಕೆ ಎಂದು ಎಂದು ಹರಿಹಾಯ್ದಿದ್ದಾರೆ. ನನ್ನ ಮತ್ತು ನರೇಂದ್ರ ಮೋದಿ ಅವರ ನಡುವಿನ ಮೈತ್ರಿ ಕಳೆದ ಲೋಕಸಭೆ ಚುನಾವಣೆಯಲ್ಲಿ ಶುರುವಾಗಿದ್ದಲ್ಲ. 2014ರಲ್ಲಿಯೇ ಆರಂಭವಾಯಿತು. ನಾನು ಅವತ್ತಿನ ಲೋಕಸಭೆ ಚುನಾವಣೆಯಲ್ಲಿ ಮೋದಿ ಅವರ ವಿರುದ್ಧ ಪ್ರಚಾರ ನಡೆಸಿದ್ದೆ. ಅವರ ಬಗ್ಗೆ ಅತ್ಯಂತ ಕಟುವಾಗಿ ಮಾತನಾಡಿದ್ದೆ. ಅವರು ಅಧಿಕಾರಕ್ಕೆ ಬಂದರೆ ಲೋಕಸಭೆ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಘೋಷಣೆ ಮಾಡಿದ್ದೆ. ಬಳಿಕ ಅವರು ಗೆದ್ದ ನಂತರ ನಾನು ನಿಜವಾಗಿಯೂ ಲೋಕಸಭೆ ಸ್ಥಾನಕ್ಕೆ ರಾಜೀನಾಮೆ ಕೊಡಲು ಮುಂದಾದೆ. ಆದರೆ, ಮೋದಿ ಅವರು ಹಾಗೆ ಮಾಡಬೇಡಿ ಎಂದು ತಡೆದರು. ನಾನು ಅವತ್ತಿನ ಅವರ ನಡಳಿವಳಿಕೆಯಿಂದ ಪ್ರಭಾವಿತನಾದೆ ಎಂದು ದೇವೇಗೌಡರು ಹೇಳಿದರು. ಆ ಘಟನೆ ನಡೆದ ನಂತರ ನಾನು ಅವರ ಮೈತ್ರಿಯಲ್ಲಿ ಇದ್ದೇನೆ. ರಾಷ್ಟ್ರಕ್ಕೆ ನರೇಂದ್ರ ಮೋದಿ ಅವರು ಸದೃಢ ನಾಯಕತ್ವ ನೀಡಿದ್ದಾರೆ. ಜನರು ಕೂಡ ಅವರ ಮೇಲೆ ಅಪರಿಮಿತ ವಿಶ್ವಾಸ ಇರಿಸಿ ಸತತವಾಗಿ ಆಯ್ಕೆ ಮಾಡುತ್ತಾ ಬರುತ್ತಿದ್ದಾರೆ. ಇದು ಅವರ ಜನಪ್ರಿಯತೆಗೆ ಸಾಕ್ಷಿಯಾಗಿದೆ ಎಂದರು. 2018ರಲ್ಲಿ ಕಾಂಗ್ರೆಸ್ ಪಕ್ಷದ ಜತೆ ನಮ್ಮ ಪಕ್ಷ ಮೈತ್ರಿ ಹೊಂದಿದ್ದ ಕಾರಣಕ್ಕೆ ಹೆಚ್.ಡಿ. ಕುಮಾರಸ್ವಾಮಿ ಅವರು ಕರ್ನಾಟಕದ ಸಿಎಂ ಆಗದಂತೆ ತಡೆಯಿತು. ಆಗ ಮತ್ತೆ ಮನೆ ಬಾಗಿಲಿಗೆ ಬಂದು ಮೈತ್ರಿ ಹಸ್ತ ಚಾಚಿದ ಕಾಂಗ್ರೆಸ್, ಕುಮಾರಸ್ವಾಮಿ ಅವರನ್ನು ಸಿಎಂ ಮಾಡುವಂತೆ ಒತ್ತಡ ಹೇರಿತು. ಮತ್ತೆ ಒಂದೇ ವರ್ಷದಲ್ಲಿ ಕಾಂಗ್ರೆಸ್ ನಮಗೆ ದ್ರೋಹ ಬಗೆಯಿತು. ಈ ಎಲ್ಲಾ ವಿವರಗಳು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಗೊತ್ತಿವೆ ಎಂದು ಹರಿಹಾಯ್ದಿದ್ದಾರೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1648+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1878+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4341+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4519+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4540+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4619+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7098+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7579+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7617+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12812+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12936+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13211+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13232+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27200+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30238+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30258+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30287+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33291+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33296+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33418+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33512+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33543+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39089+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39178+