ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಅನುಮಾನದ ಹಿನ್ನೆಲೆ ತನ್ನ 6 ವರ್ಷದ ಮಗುವನ್ನು ಕೊಲೆ ಮಾಡಿದ ಕಟುಕ ತಂದೆ...
ವರದಿಗಾರರು : Shobha jagadish | ಸ್ಥಳ : Bangalore | ದಿನಾಂಕ : 14-04-2026

ಅನುಮಾನದ ಹಿನ್ನೆಲೆ ತನ್ನ 6 ವರ್ಷದ ಮಗುವನ್ನು ಕೊಲೆ ಮಾಡಿದ ಕಟುಕ ತಂದೆ...

ಪುಣೆ : ಮಹಾರಾಷ್ಟ್ರ-ಕರ್ನಾಟಕ ಗಡಿ ಭಾಗದಲ್ಲಿ ತಂದೆಯೋರ್ವ ತಮ್ಮ 6 ವರ್ಷದ ಮಗನನ್ನು ಕೊಲೆ ಮಾಡಿದ್ದಾರೆ. ಮಗು ತನ್ನ ಹೋಲಿಕೆ ಇಲ್ಲವೆಂಬ ಡಿಎನ್‌ಎ ಅನುಮಾನದಿಂದ, ಮಲ್ಲಿಕಾರ್ಜುನ ಆರೇಕರಿ ಎಂಬಾತ ಮಗನನ್ನು ಕೃಷ್ಣಾ ನದಿಗೆ ಎಸೆದಿದ್ದಾನೆ. ವಿಜಯಪುರದಿಂದ ಮಗುವನ್ನು ಕರೆದೊಯ್ದು ಈ ಕ್ರೂರ ಕೃತ್ಯ ಎಸಗಿದ್ದು, ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ತಾನೇ ಈ ಮಗುವಿನ ತಂದೆ ಹೌದೋ ಅಲ್ಲವೋ ಎಂಬ ಅನುಮಾನದಲ್ಲಿ ತನ್ನ ಆರು ವರ್ಷದ ಮಗನನ್ನು ತಂದೆ ಕೊಲೆ ಮಾಡಿ ಕೃಷ್ಣಾ ನದಿಗೆ ಎಸೆದಿರುವ ಘಟನೆ ಮಹಾರಾಷ್ಟ್ರ ಮತ್ತು ಕರ್ನಾಟಕ ಗಡಿ ಭಾಗದಲ್ಲಿ ನಡೆದಿದೆ. ಮಗ ತನ್ನ ಹೋಲಿಕೆ ಇಲ್ಲ ಎಂದು ಅನುಮಾನ ಪಟ್ಟ ತಂದೆ ಡಿಎನ್​ಎ ಪರೀಕ್ಷೆ ಮಾಡಿಸುವ ಬದಲು ಮಗನನ್ನೇ ಕೊಲೆ ಮಾಡಿ ನದಿಗೆ ಎಸೆದಿದ್ದಾನೆ.ವಿಜಯಪುರ ಜಿಲ್ಲೆಯ ನಾಗಠಾಣೆ ಗ್ರಾಮದ ಮಲ್ಲಿಕಾರ್ಜುನ ಆರೇಕರಿ ಮತ್ತು ಭಾಗ್ಯಶ್ರೀ ದಂಪತಿಯ ಆರು ವರ್ಷದ ಮಗ ಸಿದ್ಧಾರ್ಥ್. ಸುಂದರವಾಗಿದ್ದ ಆ ಮಗು ತನ್ನ ತಂದೆಯನ್ನೇ ಹೋಲುತ್ತಿಲ್ಲ ಎಂದು ಕೆಲವು ಪರಿಚಯಸ್ಥರು ಹೇಳಿದ್ದ ಹಿನ್ನಲೆಯಲ್ಲಿ ಮಲ್ಲಿಕಾರ್ಜುನನ ತಲೆಯಲ್ಲಿ ವಿಷ ಬಿತ್ತಿತ್ತು. ಕಳೆದ ಒಂದೂವರೆ ವರ್ಷಗಳಿಂದ ಇದೇ ವಿಷಯಕ್ಕೆ ದಂಪತಿ ನಡುವೆ ಜಗಳ ನಡೆಯುತ್ತಿತ್ತು. ಕೊನೆಗೆ ಈ ಸಂಶಯ ಕೊಲೆಯಲ್ಲಿ ಅಂತ್ಯವಾಯಿತು. ಶಾಲೆಗೆಂದು ಕರೆದೊಯ್ದು ನದಿಗೆ ಎಸೆದ ಕಟುಕ ಮಾರ್ಚ್ 16ರಂದು ಮಗನನ್ನು ಶಾಲಾ ಪ್ರವೇಶಕ್ಕಾಗಿ ಕರೆದುಕೊಂಡು ಹೋಗುವುದಾಗಿ ಹೆಂಡತಿಗೆ ಸುಳ್ಳು ಹೇಳಿದ ಮಲ್ಲಿಕಾರ್ಜುನ, ಮಗನಿಗೆ ಹೊಸ ಬಟ್ಟೆಗಳನ್ನು ತೊಡಿಸಿ ವಿಜಯಪುರದಿಂದ ಮಹಾರಾಷ್ಟ್ರದ ಕರಾಡ್‌ಗೆ ಕರೆದೊಯ್ದಿದ್ದಾನೆ. ಕರಾಡ್ ತಾಲೂಕಿನ ವಡೋಲಿ ಭಿಕೇಶ್ವರ ಬಳಿಯ ಕೃಷ್ಣಾ ನದಿಯ ದಡಕ್ಕೆ ಮಗನನ್ನು ಕರೆದೊಯ್ದ ಆತ, ಕಿಂಚಿತ್ತೂ ದಯೆಯಿಲ್ಲದೆ ಮಗನನ್ನು ತುಂಬಿ ಹರಿಯುತ್ತಿದ್ದ ನದಿಗೆ ಎಸೆದಿದ್ದಾನೆ. ಮಗು ನೀರಿನಲ್ಲಿ ಮುಳುಗಿ ಪ್ರಾಣಬಿಟ್ಟ ನಂತರ, ಏನೂ ಗೊತ್ತಿಲ್ಲದವನಂತೆ ಮನೆಗೆ ಮರಳಿದ್ದಾನೆ. ಮಾರ್ಚ್ 18 ರಂದು ಕರಾಡ್ ಪೊಲೀಸರಿಗೆ ನದಿಯ ದಡದಲ್ಲಿ ಮಗುವಿನ ಗುರುತು ಪತ್ತೆಯಾಗದ ಶವ ಸಿಕ್ಕಿತ್ತು. ಇತ್ತ ಮಲ್ಲಿಕಾರ್ಜುನ ಮಗನನ್ನು ಹಾಸ್ಟೆಲ್‌ಗೆ ಸೇರಿಸಿದ್ದೇನೆ ಎಂದು ಹೆಂಡತಿಯನ್ನು ನಂಬಿಸಿದ್ದ. ಆದರೆ ಏಪ್ರಿಲ್ 1 ರಂದು ಮಗ ಸಿದ್ಧಾರ್ಥ್‌ನ ಹುಟ್ಟುಹಬ್ಬದ ದಿನ ಪತಿಯನ್ನು ಪದೇ ಪದೇ ಒತ್ತಾಯಿಸಿದಾಗ ಆತ ನೀಡಿದ ಅಸಂಬದ್ಧ ಉತ್ತರಗಳು ಅನುಮಾನ ಹುಟ್ಟಿಸಿದವು. ಕೂಡಲೇ ಆಕೆ ಪೊಲೀಸರಿಗೆ ನಾಪತ್ತೆ ದೂರು ನೀಡಿದರು. ತನಿಖೆಯಲ್ಲಿ ಸತ್ಯ ಒಪ್ಪಿಕೊಂಡ ಆರೋಪಿ ಕರ್ನಾಟಕ ಮತ್ತು ಮಹಾರಾಷ್ಟ್ರ ಪೊಲೀಸರು ಜಂಟಿಯಾಗಿ ತಾಂತ್ರಿಕ ವಿಶ್ಲೇಷಣೆ ನಡೆಸಿದಾಗ, ಮಲ್ಲಿಕಾರ್ಜುನನ ಮೊಬೈಲ್ ಲೊಕೇಶನ್ ಕರಾಡ್ ಬಳಿ ಇರುವುದು ಪತ್ತೆಯಾಯಿತು. ಪೊಲೀಸರ ತೀವ್ರ ವಿಚಾರಣೆಯ ಎದುರು ನಿಲ್ಲಲಾಗದ ಪಾಪಿ ತಂದೆ, ತನ್ನ ಸಂಶಯದ ಕಾರಣಕ್ಕಾಗಿ ಮಗನನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾನೆ. ಇದು ಅತ್ಯಂತ ಕ್ರೂರ ಮತ್ತು ಪೂರ್ವಯೋಜಿತ ಕೃತ್ಯ, ಮಗುವನ್ನು ತನ್ನನ್ನು ಹೋಲುತ್ತಿಲ್ಲ ಎಂಬ ಕಾರಣಕ್ಕಾಗಿ ಹತ್ಯೆ ಮಾಡಿರುವುದು ತನಿಖೆಯಲ್ಲಿ ದೃಢಪಟ್ಟಿದೆ, ಎಂದು ವಿಜಯಪುರ ಗ್ರಾಮೀಣ ಡಿವೈಎಸ್‌ಪಿ ಟಿ.ಎಸ್. ಸುಲ್ಪಿ ತಿಳಿಸಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದ್ದು, ಘಟನಾ ಸ್ಥಳಕ್ಕೆ ಕರೆದೊಯ್ದು ಮಹಜರು ನಡೆಸಲಾಗಿದೆ

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1648+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1878+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4341+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4519+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4540+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4619+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7098+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7579+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7617+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12812+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12936+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13211+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13232+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27200+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30238+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30258+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30287+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33291+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33296+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33418+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33512+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33543+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39089+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39178+