ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...
ವರದಿಗಾರರು : SHOBHA JAGADISH | ಸ್ಥಳ : BANGLORE | ದಿನಾಂಕ : 01-06-2026

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

ಸಚಿವ ಸಂಪುಟ ರಚನೆ, ಕೆಪಿಸಿಸಿ ಅಧ್ಯಕ್ಷ ಹುದ್ದೆ, ಡಿಸಿಎಂ ಸ್ಥಾನ ಕುರಿತಂತೆ ವರಿಷ್ಠರ ಜತೆ ಚರ್ಚಿಸಿ ಎಲ್ಲವನ್ನು ಅಂತಿಮಗೊಳಿಸಲು ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉಸ್ತುವಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದೆಹಲಿಗೆ ತೆರಳಿದರು. ಜೂ. ೩ ರಂದು ನಡೆಯುವ ನೂತನ ಮುಖ್ಯಮಂತ್ರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ೮-೧೦ ಸಚಿವರನ್ನು ಸೇರ್ಪಡೆ ಮಾಡಿಕೊಳ್ಳಲು ಹೈಕಮಾಂಡ್ ನಿರ್ಧರಿಸಿದ್ದು, ಮೊದಲ ಹಂತದಲ್ಲಿ ಯಾರನ್ನೆಲ್ಲಾ ಸಚಿವರನ್ನಾಗಿಸಬೇಕು ಎಂಬ ಬಗ್ಗೆ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರ ಜತೆ ಚರ್ಚಿಸಿ ಪಟ್ಟಿಯನ್ನು ಅಂತಿಮಗೊಳಿಸಲಿದೆ. ಇಂದು ದೆಹಲಿಗೆ ತೆರಳಿರುವ ಡಿ.ಕೆ. ಶಿವಕುಮಾರ್ ಹಾಗೂಸಿದ್ದರಾಮಯ್ಯ ಇಬ್ಬರೂ ತಮ್ಮ ಕಡೆಯಿಂದ ಯಾರನ್ನು ಸಚಿವರನ್ನಾಗಿಸಬೇಕು ಎಂಬ ಹೆಸರುಗಳ ಪಟ್ಟಿಯನ್ನು ಹೈಕಮಾಂಡ್‌ಗೆ ನೀಡಲಿದ್ದಾರೆ. ಹೈಕಮಾಂಡ್ ಎಲ್ಲವನ್ನು ಅಳೆದು ತೂಗಿ ಸಚಿವ ಪಟ್ಟಿಯನ್ನು ಅಂತಿಮಗೊಳಿಸಲಿದೆ. ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ಪ್ರಸ್ತಾವನ್ನು ಬಹುತೇಕ ಕೈಬಿಡುವ ನಿರ್ಧಾರಕ್ಕ ಬಂದಿದ್ದರೂ ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಗೆ ಪಟ್ಟು ಹಿಡಿಯುವ ಸಾಧ್ಯತೆಗಳಿವೆ. ಜತೆಗೆ ಮೊದಲ ಹಂತದ ಸಂಪುಟ ರಚನೆಯಲ್ಲಿ ತಮ್ಮ ಬೆಂಬಲಿಗರಿಗೆ ಹೆಚ್ಚಿನ ಸ್ಥಾನ ನೀಡುವಂತೆಯೂ ಅವರು ಹೈಕಮಾಂಡ್ ಮುಂದೆ ಬೇಡಿಕೆ ಇಡಲಿದ್ದಾರೆ. ದೆಹಲಿಗೆ ತೆರಳಿರುವ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಇಬ್ಬರೂ ಮೊದಲಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನಖರ್ಗೆ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ ಇವರುಗಳೊಂದಿಗೆ ಚರ್ಚಿಸಿ ಮೊದಲ ಹಂತದಲ್ಲಿ ಯಾರನ್ನೆಲ್ಲಾ ಸಚಿವರನ್ನಾಗಿಸಬೇಕು ಎಂಬ ಬಗ್ಗೆ ಪಟ್ಟಿಯನ್ನು ಅಂತಿಮಗೊಳಿಸಿಕೊಂಡು ನಂತರ ರಾಹುಲ್‌ಗಾಂಧಿ ಅವರನ್ನು ಭೇಟಿ ಮಾಡಿ ಅವರ ಒಪ್ಪಿಗೆ ಪಡೆದು ಸಚಿವರ ಪಟ್ಟಿಯನ್ನು ಬಿಡುಗಡೆ ಮಾಡುವರು ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1517+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1748+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4210+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4388+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4410+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4488+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 6968+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7448+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7487+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12682+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12806+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13081+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13102+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27070+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30107+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30128+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30157+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33161+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33165+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33287+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33382+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33412+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 38958+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39047+