ಲೇಡಿ ರೌಡಿಶೀಟರ್ಗೆ ಲೈಂಗಿಕ ಕಿರುಕುಳ: ಚಿನ್ನ, ಮುದ್ದು, ಬಂಗಾರಿ ಎಂದವನಿಂದಲೇ ಕೊಲೆ ಬೆದರಿಕೆ!
ಬೆಂಗಳೂರಿನ ಕೋಣನಕುಂಟೆ ಇನ್ಸ್‌ಪೆಕ್ಟರ್ ಪಾಪಣ್ಣ ವಿರುದ್ಧ ಲೇಡಿ ರೌಡಿಶೀಟರ್ ಲೈಂಗಿಕ ಕಿರುಕುಳದ ಗಂಭೀರ ಆರೋಪ ಹೊರಿಸಿದ್ದಾರೆ. ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದು, ಅದಕ್ಕೆ ವಿರೋಧಿಸಿದಾಗ ಕೊಲೆ ಬೆದರಿಕೆ ಹಾಕಿದ ಆರೋಪ ಕೇಳಿಬಂದಿದೆ. ಸಂತ್ರಸ್ತೆಯು ವಾಟ್ಸಾಪ್ ಚಾಟ್ ಮತ್ತು ಆಡಿಯೋ ಸಾಕ್ಷ್ಯಗಳೊಂದಿಗೆ ಪೊಲೀಸ್ ಕಮಿಷನರ್‌ಗೆ ದೂರು ಸಲ್ಲಿಸಿದ್ದು ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಪಾಪಣ್ಣ ವಿರುದ್ಧ ಲೈಂಗಿಕ ಕಿರುಕುಳದ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ದೂರು ಸಲ್ಲಿಸಿರುವ ಸಂತ್ರಸ್ತೆ, ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಸಂತ್ರಸ್ತೆಯು ರೌಡಿಶೀಟರ್ ಆಗಿದ್ದು, ಆಕೆಗೆ ಫೋನ್ ಕರೆ ಮಾಡಿದ್ದ ಇನ್ಸ್‌ಪೆಕ್ಟರ್ ‘ಚಿನ್ನ, ಮುದ್ದು, ಬಂಗಾರಿ’ ಎಂದೆಲ್ಲ ಸಂಬಂಧಿಸಿದ್ದಲ್ಲದೆ ಅಶ್ಲೀಲ ಸಂದೇಶಗಳನ್ನೂ ಕಳುಹಿಸಿದ್ದ ಎಂಬ ಆರೋಪ ಮಾಡಲಾಗಿದೆ. ಅಲ್ಲದೆ, ನಂತರ ಕೊಲೆ ಬೆದರಿಕೆಯನ್ನೂ ಹಾಕಿದ್ದ ಎಂದು ಸಂತ್ರಸ್ತೆ ದೂರಿದ್ದಾರೆ. ದೂರುದಾರೆಯ ಪ್ರಕಾರ, ಇನ್ಸ್‌ಪೆಕ್ಟರ್ ಪಾಪಣ್ಣ ಕಚೇರಿಯ ಹಾಗೂ ವೈಯಕ್ತಿಕ ಮೊಬೈಲ್ ಸಂಖ್ಯೆಯಿಂದ ಹಲವು ಬಾರಿ ಕರೆ ಮಾಡಿ ಕಿರುಕುಳ ನೀಡಿದ್ದಾರೆ. ಅಲ್ಲದೆ, ಅಸಭ್ಯವಾಗಿ ಮಾತನಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಆರೋಪಿಯು ವಾಟ್ಸಪ್ ಮೂಲಕ ಕಳುಹಿಸಿದ್ದ ಅಶ್ಲೀಲ ಸಂದೇಶಗಳು ಹಾಗೂ ಸಂಭಾಷಣೆಗಳ ಸ್ಕ್ರೀನ್‌ಶಾಟ್‌ಗಳನ್ನು ಕೂಡ ಪೊಲೀಸ್ ಆಯುಕ್ತರಿಗೆ ಸಂತ್ರಸ್ತೆ ಸಲ್ಲಿಸಿದ್ದಾರೆ. ಜೊತೆಗೆ, ಇನ್ಸ್‌ಪೆಕ್ಟರ್ ಮತ್ತು ದೂರುದಾರೆ ನಡುವೆ ನಡೆದಿದ್ದೆಂದು ಹೇಳಲಾಗುತ್ತಿರುವ ಆಡಿಯೋ ದಾಖಲೆಗಳನ್ನೂ ಕಮಿಷನರ್ ಕಚೇರಿಗೆ ನೀಡಿದ್ದಾರೆ.
ಇತರೆ ಸುದ್ದಿಗಳು