ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಎನ್‌ಡಿಎ ಚುನಾವಣಾ ಪ್ರಚಾರ : ಇಂದು ಕೇರಳದಲ್ಲಿ ಮೋದಿ ರೋಡ್ ಶೋ !
ವರದಿಗಾರರು : shobha jagadish | ಸ್ಥಳ : ಬೆಂಗಳೂರು | ದಿನಾಂಕ : 04-04-2026

ಎನ್‌ಡಿಎ ಚುನಾವಣಾ ಪ್ರಚಾರ : ಇಂದು ಕೇರಳದಲ್ಲಿ ಮೋದಿ ರೋಡ್ ಶೋ !

ತಿರುವನಂತಪುರಂ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಎನ್‌ಡಿಎ ಚುನಾವಣಾ ಪ್ರಚಾರದ ಅಂಗವಾಗಿ ಇಂದು ಕೇರಳಕ್ಕೆ ಆಗಮಿಸಲಿದ್ದಾರೆ. ಪ್ರಧಾನಿಯವರು ತಿರುವಲ್ಲಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದು, ಬಳಿಕ ತಿರುವನಂತಪುರಂನಲ್ಲಿ ರೋಡ್‌ ಶೋ ಒಂದರಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಮೋದಿ ಅವರು ಮಧ್ಯಾಹ್ನ ಸುಮಾರು 2.30ರ ಹೊತ್ತಿಗೆ ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ಬಂದಿಳಿಯಲಿದ್ದು ಚೆಂಗನ್‌ಚೇರಿ ಎನ್‌ಎಸ್‌‍ಎಸ್‌‍ ಕಾಲೇಜು ಮೈದಾನಕ್ಕೆ ಹೆಲಿಕಾಪ್ಟರ್‌ ಮೂಲಕ ತೆರಳಲಿದ್ದಾರೆ. 3 ಗಂಟೆಗೆ ಅವರು ಇಲ್ಲಿಗೆ ಆಗಮಿಸುವ ನಿರೀಕ್ಷೆ ಇದೆ.ಅಲ್ಲಿಂದ ಅವರು ರಸ್ತೆ ಮೂಲಕ ಸಾಗಿ ತಿರುವಲ್ಲಾ ಸ್ಟೇಡಿಯಂನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಪಕ್ಷದ ಮುಖಂಡರು ಮತ್ತು ಎನ್‌ಡಿಎ ಅಭ್ಯರ್ಥಿಗಳು ಉಪಸ್ಥಿತರಿರಲಿದ್ದಾರೆ ಎಂದು ಮೂಲಗಳು ಹೇಳಿವೆ. ಸಾರ್ವಜನಿಕ ಸಭೆಯ ಬಳಿಕ ಪ್ರಧಾನಿ ಮೋದಿಯವರು ಸಂಜೆ ತಿರುವನಂತಪುರಂಗೆ ಪ್ರಯಾಣಿಸಿ ಕಿಲ್ಲಿಪಾಲಂನಿಂದ ಕರಮಣ ಜಂಕ್ಷನ್‌ವರೆಗೆ ರೋಡ್‌ ಶೋ ನಡೆಸಲಿದ್ದಾರೆ. ಶೋ 1.5ಕಿ.ಮೀ. ದೂರ ನಡೆಯಲಿದೆ ಎಂದು ಅವರು ವಿವರಿಸಿವೆ. ರೋಡ್‌ ಶೋಗೆ ಅಪಾರ ಸಂಖ್ಯೆಯ ಬಿಜೆಪಿ ಕಾರ್ಯಕರ್ತರು ಮತ್ತು ಬೆಂಬಲಿಗರು ಆಗಮಿಸುವ ಸಾಧ್ಯತೆ ಇದೆ. ರಾಜೀವ್‌ ಚಂದ್ರಶೇಖರ್‌ ಮತ್ತು ವಿ.ಮುರಳೀಧರನ್‌ ಸೇರಿದಂತೆ ಹಿರಿಯ ಬಿಜೆಪಿ ನಾಯಕರು ಭಾಗವಹಿಸಲಿದ್ದಾರೆ. ಮೋದಿ ಅವರು ಜಿಲ್ಲೆಯ ಎನ್‌ಡಿಎ ಅಭ್ಯರ್ಥಿಗಳನ್ನು ಭೇಟಿಯಾಗುವ ನಿರೀಕ್ಷೆ ಇದ್ದು ಸಂಜೆ 7 ಗಂಟೆಗೆ ದೆಹಲಿಗೆ ತೆರಳಲಿದ್ದಾರೆ. ಕೇರಳದಲ್ಲಿ ಏಪ್ರಿಲ್‌ 9 ರಂದು ಮತದಾನ ನಡೆಯಲಿದೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1618+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1848+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4311+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4489+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4510+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4589+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7068+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7549+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7587+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12782+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12906+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13181+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13202+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27170+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30208+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30228+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30257+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33261+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33266+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33388+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33482+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33513+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39059+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39148+