ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ  ಗುಡುಗಿದ ಸಿ ಎಂ
ವರದಿಗಾರರು : Shobha jagadish | ಸ್ಥಳ : Bangalore | ದಿನಾಂಕ : 09-04-2026

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

ಚುನಾವಣಾ ಆಯೋಗ ಅನುಸರಿಸುತ್ತಿರುವ ನೀತಿಯು ಅನುಮಾನಾಸ್ಪದವಾಗಿದೆ ಎಂದು ರಾಜ್ಯದ ಮುಖ್ಯಮಂತ್ರಿ ಸಿ ಎಂ ಸಿದ್ದರಾಮಯ್ಯ ಗುಡುಗಿದ್ದಾರೆ . ನಿಮ್ಮ ಗೊಡ್ಡು ಬೆದರಿಕೆಗಳಿಗೆ ಬಗ್ಗಲ್ಲ ‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಸಿದ್ದರಾಮಯ್ಯ ಸಿಡಿಮಿಡಿಗೊಂಡಿದ್ದಾರೆ . ಮಹಾರಾಷ್ಟ್ರ ಮತ್ತು ಬಿಹಾರದಂತಹ ರಾಜ್ಯಗಳಲ್ಲಿ ಚುನಾವಣೆಗೂ ಮುನ್ನ ನಗದು ವರ್ಗಾವಣೆ ಯೋಜನೆಗಳನ್ನು ಪ್ರಕಟಿಸಲಾಗಿದೆ ಮತ್ತು ಅಂತಹ ಯೋಜನೆಗಳ ಪ್ರಕ್ರಿಯೆಯನ್ನು ವೇಗಗೊಳಿಸಲಾಗಿದೆ. ಗ್ಯಾರಂಟಿ ಯೋಜನೆಗಳ ಬಗ್ಗೆ ಚುನಾವಣಾ ಆಯೋಗ ವರದಿ ಕೇಳಿದ್ದು, ಇದರ ಬೆನ್ನಲ್ಲೇ ಆಯೋಗದ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಅಸಮಾಧಾನವನ್ನು ಹೊರಹಾಕಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ದಾವಣಗೆರೆ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ನಡೆಯುತ್ತಿರುವ ಉಪಚುನಾವಣೆಗಳ ಸಂದರ್ಭದಲ್ಲಿ ಭಾರತದ ಚುನಾವಣಾ ಆಯೋಗವು ಕರ್ನಾಟಕ ಸರ್ಕಾರಕ್ಕೆ ಪತ್ರ ಬರೆದು, ರಾಜ್ಯದ ಗ್ಯಾರಂಟಿ ಯೋಜನೆಗಳಡಿ ಬಿಡುಗಡೆಯಾದ ನಿಧಿಗಳ ವಿವರಗಳನ್ನು ಕೇಳಿದೆ. ಆದರೆ, ನಮ್ಮ ಗ್ಯಾರಂಟಿ ಯೋಜನೆಗಳು ಈ ಉಪಚುನಾವಣೆ ಸಮಯದಲ್ಲಿ ಜಾರಿಯಾದವುಗಳಲ್ಲ ಎಂದು ಹೇಳಿದ್ದಾರೆ. ಗ್ಯಾರಂಟಿ ಯೋಜನೆಗಳು 2023ರ ವಿಧಾನಸಭೆ ಚುನಾವಣೆಯಲ್ಲಿ ಜನರಿಗೆ ನೀಡಿದ ಭರವಸೆಗಳ ಭಾಗವಾಗಿ ನಮ್ಮ ಸರ್ಕಾರ ಅನುಷ್ಠಾನಕ್ಕೆ ತಂದಿರುವ ಕಾರ್ಯಕ್ರಮಗಳಾಗಿವೆ. ಈ ಯೋಜನೆಗಳಡಿ ರಾಜ್ಯದ ಎಲ್ಲ ಫಲಾನುಭವಿಗಳ ಖಾತೆಗಳಿಗೆ ನಿಯಮಿತವಾಗಿ, ಪಾರದರ್ಶಕವಾಗಿ ಹಣ ವರ್ಗಾವಣೆಯಾಗುತ್ತಿದೆ. ರಾಜ್ಯದ ಎಲ್ಲ ವರ್ಗದ ಜನರು ಘನತೆಯಿಂದ ಜೀವಿಸಲು ಮತ್ತು ಜೀವನ ನಿರ್ವಹಣೆಗೆ ಹಾಗೂ ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಸರ್ಕಾರವು ನೇರವಾಗಿ ಒದಗಿಸುತ್ತಿರುವ ಅನುದಾನವಾಗಿದೆ. ಈ ಯೋಜನೆಗಳು ಆಡಳಿತದ ಭಾಗವೇ ಹೊರತು, ಮತದಾರರನ್ನು ಸೆಳೆಯುವ ಕಾರ್ಯಕ್ರಮಗಳಲ್ಲ. ಬಿಜೆಪಿಯು ಗ್ಯಾರಂಟಿ ಯೋಜನೆಗಳ ಬಗ್ಗೆ ಇಬ್ಬಗೆ ನೀತಿಯ ಧೋರಣೆಯನ್ನು ತಳೆದಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಒಂದು ಕಡೆ ಕರ್ನಾಟಕದ ಗ್ಯಾರಂಟಿ ಯೋಜನೆಗಳನ್ನು 'ಬಿಟ್ಟಿ ಭಾಗ್ಯ' ಎಂದು ಅಪಹಾಸ್ಯ ಮಾಡುತ್ತಾರೆ. ಮತ್ತೊಂದು ಕಡೆ ಅದೇ ಯೋಜನೆಗಳನ್ನು ಅನುಕರಿಸಿ ತಾವು ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಜಾರಿಗೊಳಿಸುತ್ತಾರೆ. ಇದರಿಂದ ಕರ್ನಾಟಕದ ಮಾದರಿಯು ದೇಶಕ್ಕೆ ಪ್ರೇರಣೆಯಾಗಿದೆ ಎಂಬುದು ಸ್ಪಷ್ಟವಾಗುತ್ತದೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1719+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1949+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4412+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4590+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4611+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4690+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7169+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7650+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7688+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12883+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 13007+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13282+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13303+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27271+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30309+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30329+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30358+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33362+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33367+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33489+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33582+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33613+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39159+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39248+