ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!
ವರದಿಗಾರರು : SHOBHA JAGADISH | ಸ್ಥಳ : BANGLORE | ದಿನಾಂಕ : 23-05-2026

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

ಬೆಂಗಳೂರಿನ ಟೌನ್‌ಹಾಲ್ ಮುಂಭಾಗದಲ್ಲಿ ಮೇ 24ರಂದು ಭಾನುವಾರ ಹಮ್ಮಿಕೊಳ್ಳಲಾಗಿದ್ದ ಕಾಕ್ರೋಚ್ ಜನತಾ ಪಾರ್ಟಿ ಕರ್ನಾಟಕ ಸಂಘಟನೆಯ ಮಾನವ ಸರಪಳಿ ಪ್ರತಿಭಟನೆಗೆ ಬೆಂಗಳೂರು ನಗರ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ.ಈ ಪ್ರತಿಭಟನಾ ಸಭೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪೋಸ್ಟ್‌ಗಳ ಕುರಿತು ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ಪ್ರಕಟಣೆ ಹೊರಡಿಸಿದ್ದು, ಕಟ್ಟುನಿಟ್ಟಿನ ಎಚ್ಚರಿಕೆಗಳನ್ನು ನೀಡಿದೆ.ಪೊಲೀಸರು ಬ್ರೇಕ್ ಹಾಕಲು ಪ್ರಮುಖ ಕಾರಣಗಳನ್ನು ನೀಡಿದ್ದಾರೆ .ನ್ಯಾಯಾಲಯದ ಆದೇಶದ ಉಲ್ಲಂಘನೆ ಕರ್ನಾಟಕ ಹೈಕೋರ್ಟ್‌ನ 2022ರ ಆದೇಶದ ಪ್ರಕಾರ, ಬೆಂಗಳೂರಿನಲ್ಲಿ ಯಾವುದೇ ರೀತಿಯ ಧರಣಿ, ರ್ಯಾಲಿ ಅಥವಾ ಪ್ರತಿಭಟನೆಗಳನ್ನು ನಡೆಸಲು ಫ್ರೀಡಂ ಪಾರ್ಕ್ ಹೊರತುಪಡಿಸಿ ಬೇರೆ ಯಾವುದೇ ಸಾರ್ವಜನಿಕ ಸ್ಥಳದಲ್ಲಿ ಅವಕಾಶವಿಲ್ಲ. ಟೌನ್‌ಹಾಲ್ ಬಳಿ ಇಂತಹ ಸಭೆ ನಡೆಸುವುದು ನ್ಯಾಯಾಲಯದ ಆದೇಶದ ಉಲ್ಲಂಘನೆಯಾಗುತ್ತದೆ.ಈ ಮಾನವ ಸರಪಳಿ ಕಾರ್ಯಕ್ರಮ ಆಯೋಜಿಸಲು ಯಾವುದೇ ವ್ಯಕ್ತಿ, ಸಂಘಟನೆ ಅಥವಾ ಪಕ್ಷವು ಪೊಲೀಸ್ ಇಲಾಖೆಯಿಂದ ಅಥವಾ ಸ್ಥಳೀಯ ಗ್ರೇಟರ್ ಬೆಂಗಳೂರು ಅಥಾರಿಟಿ (GBA) ಯಿಂದ ಯಾವುದೇ ಅಧಿಕೃತ ಅನುಮತಿ ಪಡೆದಿಲ್ಲ. ಭಾನುವಾರ ಬೆಳಗ್ಗೆ 11 ಗಂಟೆಗೆ ಜನರನ್ನು ಸೇರಲು ಸಾಮಾಜಿಕ ಜಾಲತಾಣಗಳಲ್ಲಿ ಕರೆ ನೀಡಲಾಗಿತ್ತು. ಇದರಿಂದ ನಗರದ ಹೃದಯಭಾಗದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಂಚಾರ ದಟ್ಟಣೆಗೆ ತೊಂದರೆಯಾಗುವ ಸಾಧ್ಯತೆ ಇರುವುದರಿಂದ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.ಸಾರ್ವಜನಿಕರಿಗೆ ಪೊಲೀಸರ ಕಟ್ಟುನಿಟ್ಟಿನ ಸೂಚನೆಗಳು. ಸಾರ್ವಜನಿಕರು ತಿಳಿದೋ ಅಥವಾ ತಿಳಿಯದೆಯೋ ಮೇ 24ರಂದು ಟೌನ್‌ಹಾಲ್ ಬಳಿ ಪ್ರತಿಭಟನೆಗಾಗಿ ಗುಂಪು ಸೇರಬಾರದು ಎಂದು ವಿನಂತಿಸಲಾಗಿದೆ.ಪೋಸ್ಟ್ ಹಂಚಿಕೊಂಡರೆ ಕಾನೂನು ಕ್ರಮ: ಕಾಕ್ರೋಚ್ ಜನತಾ ಪಾರ್ಟಿಯ ಈ ಮಾನವ ಸರಪಳಿಗೆ ಸಂಬಂಧಿಸಿದ ಯಾವುದೇ ಮೆಸೇಜ್ ಅಥವಾ ಪೋಸ್ಟ್‌ಗಳನ್ನು ವಾಟ್ಸಾಪ್, ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಎಕ್ಸ್ (ಟ್ವಿಟರ್) ನಂತಹ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡರೆ ಅಥವಾ ಫಾರ್ವರ್ಡ್ ಮಾಡಿದರೆ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸರು ಎಚ್ಚರಿಸಿದ್ದಾರೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1608+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1838+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4301+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4479+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4500+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4579+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7058+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7539+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7577+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12772+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12896+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13171+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13192+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27160+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30198+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30218+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30247+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33251+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33256+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33378+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33472+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33503+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39048+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39138+