ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಚೀನಾ ನಿರ್ಮಿತ ಪಾಕಿಸ್ತಾನದ ತರಬೇತಿ ಜೆಟ್‌ ಪತನ
ವರದಿಗಾರರು : SHOBHA JAGADISH | ಸ್ಥಳ : BANGLORE | ದಿನಾಂಕ : 21-05-2026

ಚೀನಾ ನಿರ್ಮಿತ ಪಾಕಿಸ್ತಾನದ ತರಬೇತಿ ಜೆಟ್‌ ಪತನ

ಇಸ್ಲಾಮಾಬಾದ್‌ : ಪಾಕಿಸ್ತಾನದ ಪಂಜಾಬ್‌ ಪ್ರಾಂತ್ಯದ ಮಿಯಾನ್ವಾಲಿ ಜಿಲ್ಲೆಯ ಬಳಿ ಹೊಂಗ್ಡು ಜೆಎಲ್‌-8 ತರಬೇತಿ ಯುದ್ಧವಿಮಾನ ಪತನವಾಗಿದೆ. ಜೆಟ್‌ ನಿಯಮಿತ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಅನಾಹುತ ನಡೆದಿದೆ. ತಾಂತ್ರಿಕ ದೋಷ ಇದಕ್ಕೆ ಕಾರಣ ಎನ್ನಲಾಗಿದೆ. ಈ ಏರ್‌ ಜೆಟ್‌ ಅನ್ನು ಪಾಕಿಸ್ತಾನ ಮತ್ತು ಚೀನಾ ಜಂಟಿಯಾಗಿ ಅಭಿವೃದ್ಧಿ ಪಡಿಸಿತ್ತು. ಇತ್ತೀಚಿನ ದಿನಗಳಲ್ಲಿ ಪಾಕ್‌ನಲ್ಲಿ ಪತನವಾದ 7ನೇ ವಿಮಾನ ಇದು ಎಂದು ಗೊತ್ತಾಗಿದೆ. ಘಟನೆ ಸಂಭವಿಸುತ್ತಿದ್ದಂತೆ ಇಬ್ಬರು ಪೈಲಟ್‌ಗಳು ಜೆಟ್‌ನಿಂದ ಕೆಳಕ್ಕೆ ಹಾರಿ ಜೀವ ಉಳಿಸಿಕೊಂಡಿದ್ದಾರೆ. ಈ ವಿಡಿಯೋ ಜಾಲತಾಣದಲ್ಲಿ ವೈರಲ್‌ ಆಗಿದೆ. ಇನ್ನು ಈ ಪತನದ ಬಗ್ಗೆ ಇದುವರೆಗೂ ಪಾಕಿಸ್ತಾನ ವಾಯು ಸೇನೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಅಮೆರಿಕವು ಫೆಬ್ರವರಿ 28ರಂದು ಇರಾನ್ ವಿರುದ್ಧ ನಡೆಸಿದ ಹೈ-ವೋಲ್ಟೇಜ್ ಮಿಲಿಟರಿ ಕಾರ್ಯಾಚರಣೆ ‘ಆಪರೇಷನ್ ಎಪಿಕ್ ಫ್ಯೂರಿ’ ವೇಳೆ ತನ್ನ ಅತ್ಯಂತ ಆಧುನಿಕ ಫೈಟರ್ ಜೆಟ್‌ಗಳು ಮತ್ತು ಡ್ರೋನ್‌ಗಳು ಸೇರಿದಂತೆ ಕನಿಷ್ಠ 42 ಯುದ್ಧ ವಿಮಾನಗಳನ್ನು ಕಳೆದುಕೊಂಡಿದೆ ಅಥವಾ ಭೀಕರವಾಗಿ ಹಾನಿಗೊಳಿಸಿಕೊಂಡಿದೆ ಎಂದು ಅಧಿಕೃತ ವರದಿ ಬಹಿರಂಗಪಡಿಸಿದೆ. ಮಿಲಿಟರಿ ಕಾರ್ಯಾಚರಣೆಗಳ ರಹಸ್ಯ ವರ್ಗೀಕರಣ ನಿರ್ಬಂಧಗಳು, ಆ ಪ್ರದೇಶದಲ್ಲಿ ಇನ್ನೂ ನಡೆಯುತ್ತಿರುವ ಯುದ್ಧ ಮತ್ತು ಹಾನಿಯ ನಿಖರ ಮೌಲ್ಯಮಾಪನದ ಸವಾಲುಗಳಿಂದಾಗಿ ಈ ಸಂಖ್ಯೆ ಇನ್ನೂ ಹೆಚ್ಚಾಗಬಹುದು ಎಂದು ಸಿಆರ್ಎಸ್ ವರದಿ ಹೇಳಿದೆ. ಯುಎಸ್ ರಕ್ಷಣಾ ಇಲಾಖೆ ಮತ್ತು ಯುನೈಟೆಡ್ ಸ್ಟೇಟ್ಸ್ ಸೆಂಟ್ರಲ್ ಕಮಾಂಡ್ ನೀಡಿದ ಆಂತರಿಕ ಹೇಳಿಕೆಗಳು ಹಾಗೂ ಮಾಧ್ಯಮ ವರದಿಗಳನ್ನು ಕಟ್ಟುನಿಟ್ಟಾಗಿ ಪರಿಶೀಲಿಸಿ ಈ ಕರಡು ಸಿದ್ಧಪಡಿಸಲಾಗಿದೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1608+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1838+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4301+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4479+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4500+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4579+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7058+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7539+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7577+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12772+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12896+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13171+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13192+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27160+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30198+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30218+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30247+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33251+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33256+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33378+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33472+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33503+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39048+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39137+