ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ! ಕರಾವಳಿ ಭಾಗಗಳಿಗೆ ಯೆಲ್ಲೋ ಅಲರ್ಟ್
ಹವಾಮಾನ ಇಲಾಖೆಯು ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮತ್ತು ಗಾಳಿ ಸಹಿತ ಗುಡುಗು ಸಿಡಿಲಿನ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ. ಕರ್ನಾಟಕದಾದ್ಯಂತ ಮುಂದಿನ ಕೆಲವು ದಿನಗಳ ಕಾಲ ವರುಣನ ಅಬ್ಬರ ಜೋರಾಗಿರಲಿದ್ದು, ಹವಾಮಾನ ಇಲಾಖೆಯು ರಾಜ್ಯದ ಹಲವು ಜಿಲ್ಲೆಗಳಿಗೆ ಬಿರುಗಾಳಿ ಸಹಿತ ಭಾರಿ ಮಳೆ ಹಾಗೂ ಆಲಿಕಲ್ಲು ಮಳೆಯ ಮುನ್ನೆಚ್ಚರಿಕೆಯನ್ನು ನೀಡಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಆಲಿಕಲ್ಲು ಮಳೆಯಾಗುವ ಮುನ್ಸೂಚನೆ ಇರುವುದರಿಂದ ಹವಾಮಾನ ಇಲಾಖೆಯು ಆರೆಂಜ್ ಅಲರ್ಟ್ ಘೋಷಿಸಿದೆ. ಮುಂದಿನ ನಾಲ್ಕು ದಿನ ಕರ್ನಾಟಕದಾದ್ಯಂತ ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ.ದಕ್ಷಿಣ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಆಲಿಕಲ್ಲಿ ಮಳೆಯಾಗುವ ಸಾಧ್ಯತೆ ಎಂದು ಏಳು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್.ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಗಂಟೆಗೆ 50-60 ಕಿ.ಮೀ ವೇಗದಲ್ಲಿ ಬಲವಾದ ಬಿರುಗಾಳಿ ಬೀಸಲಿದ್ದು, ಆಲಿಕಲ್ಲು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ದಕ್ಷಿಣ ಒಳನಾಡಿನ ದಾವಣಗೆರೆ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯೊಂದಿಗೆ ಆಲಿಕಲ್ಲು ಜೊತೆಗೆ ವರುಣಾರ್ಭಟವಿರಲಿದ್ದು, ಈ ಜಿಲ್ಲೆಗಳಿಗೂ ಆರೆಂಜ್ ಅಲರ್ಟ್ ನೀಡಲಾಗಿದೆ. ಆಲಿಕಲ್ಲು ಮಳೆ ಮತ್ತು ಬಿರುಗಾಳಿ ಬೀಸುವ ಸಂದರ್ಭದಲ್ಲಿ ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಬೇಕು. ಪ್ರಮುಖವಾಗಿ ರೈತರು ಹಾಗೂ ಜಾನುವಾರು ಸಾಕಣೆದಾರರು ಹವಾಮಾನ ವೈಪರೀತ್ಯದ ಬಗ್ಗೆ ಎಚ್ಚರಿಕೆ ವಹಿಸಲು ಕೋರಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ ಹಾಗೂ ಗುಡುಗು ಸಹಿತ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಈ ಭಾಗಕ್ಕೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ನಿರೀಕ್ಷೆಯಿದೆ.