ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಭೀಕರ ಅಪಘಾತ: ದೇವರ ದರ್ಶನ ಮುಗಿಸಿ ಹಿಂದಿರುಗುತ್ತಿದ್ದ ಮೂವರು ಸ್ಥಳದಲ್ಲೇ ಸಾವು
ವರದಿಗಾರರು : ನಜ್ರುಲ್ಲ ಬೇಗ್ | ಸ್ಥಳ : ತುಮಕೂರು | ದಿನಾಂಕ : 05-11-2025

ಭೀಕರ ಅಪಘಾತ: ದೇವರ ದರ್ಶನ ಮುಗಿಸಿ ಹಿಂದಿರುಗುತ್ತಿದ್ದ ಮೂವರು ಸ್ಥಳದಲ್ಲೇ ಸಾವು

ಬೀದರ್, ನ.5: ಭಾಲ್ಕಿ ತಾಲೂಕಿನ ನೀಲಮನಳ್ಳಿ ತಾಂಡಾ ಬಳಿ ಬುಧವಾರ ಬೆಳಿಗ್ಗೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ತೆಲಂಗಾಣದ ನಾರಾಯಣಖೇಡ್ ತಾಲೂಕಿನ ಜಗನಾಥಪುರ ಗ್ರಾಮದ ನಿವಾಸಿಗಳು ದೇವರ ದರ್ಶನ ಮುಗಿಸಿಕೊಂಡು ಊರಿಗೆ ಹಿಂದಿರುಗುತ್ತಿದ್ದ ವೇಳೆ, ಅವರು ಪ್ರಯಾಣಿಸುತ್ತಿದ್ದ ಕಾರು ಡಿಟಿಡಿಸಿ ವಾಹನಕ್ಕೆ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ನವೀನ (25), ರಾಚಪ್ಪ (45) ಮತ್ತು ನಾಗರಾಜ (40) ಸ್ಥಳದಲ್ಲೇ ಪ್ರಾಣ ಕಳೆದುಕೊಂಡರೆ, ಕಾಶಿನಾಥ ಮತ್ತು ಪ್ರತಾಪ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಬೀದರ್‌ನ ಬ್ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಹಾಗೂ ಡಿಟಿಡಿಸಿ ವಾಹನ ಎರಡೂ ನುಜ್ಜುಗುಜ್ಜಾಗಿವೆ. ಧನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಕುಟುಂಬ ಹಾಗೂ ಗ್ರಾಮದಲ್ಲಿ ಶೋಕದ ಮಡುಗಟ್ಟಿದೆ.

ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಿಮ್ಮ ವಾಟ್ಸಾಪ್ ಗ್ರೂಪ್‌ಗೆ 7892441717 ಸಂಖ್ಯೆಯನ್ನು ಸೇರಿಸಿ

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 1092+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 4140+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 4181+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 4238+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 4340+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 4388+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 4420+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 4464+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 4512+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 4525+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 4599+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 4659+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6879+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6942+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6993+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 7049+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 7210+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 7238+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 7368+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 7549+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9752+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9917+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9978+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 10149+