ದಾವಣಗೆರೆಯಲ್ಲಿ ಶಾಮನೂರು ಫ್ಯಾಮಿಲಿಗೆ ಶಾಕ್, ಬಿಜೆಪಿ ಅಭ್ಯರ್ಥಿಗೆ ಭರ್ಜರಿ ಮುನ್ನಡೆ
ದಾವಣಗೆರೆ : ಭಾರೀ ಕುತೂಹಲ ಕೆರಳಿಸಿರುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆ ನಡೆದಿದ್ದು, ಶಾಮನೂರು ಫ್ಯಾಮಿಲಿಗೆ ಬಿಗ್ ಶಾಕ್ ಎದುರಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರನ್ನ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಹಿಂದಿಕ್ಕಿದ್ದು, ಭರ್ಜರಿ ಮುನ್ನಡೆ ಸಾಧಿಸಿದ್ದಾರೆ. 4 ಸುತ್ತುಗಳ ಮತ ಎಣಿಕೆಯಲ್ಲೂ ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್‌ನಿಂದ ಸಮರ್ಥ್ ಶಾಮನೂರು, ಬಿಜೆಪಿಯಿಂದ ಶ್ರೀನಿವಾಸ ದಾಸಕರಿಯಪ್ಪ ನಡುವೆ ಪೈಪೋಟಿ ನಡೆದಿದ್ದು, ರಾಜ್ಯದ ಜನರ ಚಿತ್ತ ದಾವಣಗೆರೆ ಫಲಿತಾಂಶದತ್ತ ನೆಟ್ಟಿದೆ. ಬಿಜೆಪಿ 4ನೇ ಸುತ್ತಿನ ಮತ ಎಣಿಕೆಯಲ್ಲೂ 5,701 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಮುನ್ನಡೆ ಕಾಯ್ದುಕೊಂಡಿದ್ದುಮ ಶಾಮನೂರು ಫ್ಯಾಮಿಲಿಗೆ ಆರಂಭದಲ್ಲೇ ಶಾಕ್ ಎದುರಾಗಿದೆ. ಈವರೆಗೆ ಅಭ್ಯರ್ಥಿಗಳು ಪಡೆದ ಮತಗಳು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ 17,654 ಮತಗಳು.