ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

 ಪ್ರತಿಭಾವಂತ   ಯುವಬರಹಗಾರ ನಂದೀಶ್ ಶೆಟ್ಟಿ ನಿಧನ !
ವರದಿಗಾರರು : SHOBHA JAGADISH | ಸ್ಥಳ : BANGLORE | ದಿನಾಂಕ : 21-05-2026

ಪ್ರತಿಭಾವಂತ ಯುವಬರಹಗಾರ ನಂದೀಶ್ ಶೆಟ್ಟಿ ನಿಧನ !

ಕನ್ನಡ ಚಿತ್ರರಂಗದ ಪ್ರತಿಭಾವಂತ ಯುವ ಬರಹಗಾರ ಮತ್ತು ಸಹ ನಿರ್ದೇಶಕರಾಗಿದ್ದ ನಂದೀಶ್‌ ಜಿ.ಟಿ (37) ಅವರು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ತೀರ್ಥಹಳ್ಳಿ ತಾಲೂಕಿನ ಮಾಳೂರಿನಲ್ಲಿರುವ ತಮ್ಮ ನಿವಾಸದಲ್ಲಿದ್ದಾಗಲೇ ನಂದೀಶ್‌ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ವೈದ್ಯರು ತುರ್ತು ಚಿಕಿತ್ಸೆ ವೇಳೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.ಚಿತ್ರಕಥೆ, ಸಂಭಾಷಣೆಯಲ್ಲಿ ಗುರುತಿಸಿಕೊಂಡಿದ್ದ ನಂದೀಶ್‌ ಅವರು ಕನ್ನಡ ಸಿನಿಮಾ ಹಾಗೂ ಧಾರಾವಾಹಿ ಲೋಕದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು. ಹಲವಾರು ಕನ್ನಡ ಸಿನಿಮಾಗಳಿಗೆ ಹಾಗೂ ಜನಪ್ರಿಯ ಧಾರಾವಾಹಿಗಳಿಗೆ ಕಥೆ, ಚಿತ್ರಕಥೆ ಮತ್ತು ಚುರುಕಾದ ಸಂಭಾಷಣೆಯನ್ನು ಬರೆಯುವ ಮೂಲಕ ಚಿತ್ರರಂಗದಲ್ಲಿ ಭರವಸೆಯ ಬರಹಗಾರನಾಗಿ ಗುರುತಿಸಿಕೊಂಡಿದ್ದರು. ಕೇವಲ ಬರವಣಿಗೆಗೆ ಮಾತ್ರ ಸೀಮಿತವಾಗದೆ, ಇತ್ತೀಚೆಗಷ್ಟೇ ನಿಧನರಾದ ಸ್ಯಾಂಡಲ್‌ವುಡ್‌ನ ಪ್ರಸಿದ್ಧ ನಟ ಹಾಗೂ ನಿರ್ಮಾಪಕ ದಿಲೀಪ್‌ ರಾಜ್‌ ಅವರ ಜೊತೆಯಲ್ಲಿ ಹಲವು ಪ್ರಾಜೆಕ್ಟ್‌ಗಳಿಗೆ ಸಹ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ್ದರು. ನಂದೀಶ್‌ ಅವರ ಅಕಾಲಿಕ ಮರಣಕ್ಕೆ ಸ್ಯಾಂಡಲ್‌ವುಡ್‌ನ ಖ್ಯಾತ ಚಲನಚಿತ್ರ ಸಾಹಿತಿ ಕವಿರಾಜ್‌ ಸೇರಿದಂತೆ ಚಿತ್ರರಂಗ ಹಾಗೂ ಕಿರುತೆರೆಯ ಹಲವು ಗಣ್ಯರು, ನಿರ್ದೇಶಕರು ಮತ್ತು ಸಹೋದ್ಯೋಗಿಗಳು ತೀವ್ರ ಕಂಬನಿ ಮಿಡಿದಿದ್ದಾರೆ. ಕೇವಲ 37ನೇ ವಯಸ್ಸಿಗೆ ಪ್ರತಿಭಾವಂತ ತಂತ್ರಜ್ಞನನ್ನು ಕಳೆದುಕೊಂಡಿರುವುದು ಕನ್ನಡ ಉದ್ಯಮಕ್ಕೆ ದೊಡ್ಡ ನಷ್ಟವಾಗಿದೆ ಎಂದು ಸಂತಾಪ ಸೂಚಿಸಿದ್ದಾರೆ.ಮೃತ ನಂದೀಶ್‌ ಅವರು ಪತ್ನಿ ಹಾಗೂ ಇಬ್ಬರು ಪುಟ್ಟ ಮಕ್ಕಳನ್ನು ಒಳಗೊಂಡಂತೆ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ಮೃತರ ಅಂತ್ಯಸಂಸ್ಕಾರವು ಅವರ ಸ್ವಗ್ರಾಮವಾದ ತೀರ್ಥಹಳ್ಳಿಯ ಮಾಳೂರಿನಲ್ಲಿ ಸಕಲ ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1648+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1878+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4341+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4519+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4540+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4619+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7098+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7579+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7617+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12812+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12936+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13211+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13232+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27200+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30238+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30258+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30287+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33291+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33296+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33418+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33512+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33543+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39089+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39178+