ಬಿಜೆಪಿ ಶಾಸಕ ಬಿ.ಪಿ ಹರೀಶ್ ಬಂಧನಕ್ಕೆ ಅರೆಸ್ಟ್ ವಾರೆಂಟ್!
ಜಾತಿ ನಿಂದನೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಜಡ್ಜ್ ಸಂತೋಷ್ ಗಜಾನನ ಭಟ್ ಅರೆಸ್ಟ್ ವಾರೆಂಟ್ ಜಾರಿ ಮಾಡಿದ್ದು, ಮೇ 7ರಂದು ಕೋರ್ಟ್ಗೆ ಹಾಜರುಪಡಿಸುವಂತೆ ನಿರ್ದೇಶನ ನೀಡಿದ್ದಾರೆ. ದಾವಣಗೆರೆ: ಹರಿಹರ ಬಿಜೆಪಿ ಶಾಸಕ ಬಿ.ಪಿ.ಹರೀಶ್ ಬಂಧನಕ್ಕೆ ಜನಪ್ರತಿನಿಧಿ ವಿಶೇಷ ನ್ಯಾಯಾಲಯ ವಾರೆಂಟ್ ಹೊರಡಿಸಿದೆ. ಜಾತಿನಿಂದನೆ ಮಾಡಿದ್ದಾರೆ ಎಂಬ ಆರೋಪದಡಿ ಹರಿಹರದ ಬಿಜೆಪಿ ಶಾಸಕ ಬಿ.ಪಿ.ಹರೀಶ್ ವಿರುದ್ಧ ಹರಿಹರ ಟೌನ್ ಠಾಣೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹರೀಶ್ಗೆ ಕೋರ್ಟ್ ಬಂಧನದ ವಾರಂಟ್ ಜಾರಿ ಮಾಡಿದೆ. ಜಾತಿ ನಿಂದನೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಜಡ್ಜ್ ಸಂತೋಷ್ ಗಜಾನನ ಭಟ್ ಅರೆಸ್ಟ್ ವಾರೆಂಟ್ ಜಾರಿ ಮಾಡಿದ್ದು, ಮೇ 7ರಂದು ಕೋರ್ಟ್ಗೆ ಹಾಜರುಪಡಿಸುವಂತೆ ನಿರ್ದೇಶನ ನೀಡಿದ್ದಾರೆ. ಹೀಗಾಗಿ ಶಾಸಕ ಹರೀಶ್ ಗೆ ಬಂಧನ ಭೀತಿ ಎದುರಾಗಿದೆ. 2023 ವಿಧಾನಸಭೆಯ ಚುನಾವಣಾ ಫಲಿತಾಂಶದ ಮರುದಿನ ದಲಿತ ಸಮಾಜದ ಬಗ್ಗೆ ಶಾಸಕ ಬಿ.ಪಿ.ಹರೀಶ್ ಅವಹೇಳನಕಾರಿಯಾಗಿ ಮಾತನಾಡಿದ್ದರು. ಹರಿಹರ ಬಿಎಸ್ಪಿ ಮುಖಂಡ ಹನುಮಂತಪ್ಪ ಎಂಬವರು ಹರಿಹರನಗರ ಠಾಣೆಯಲ್ಲಿ ಜಾತಿ ನಿಂದನೆ ಪ್ರಕರಣ ದಾಖಲಿಸಿದ್ದರು.