ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಹಾರ್ಮುಜ್ ಜಲಸಂಧಿ ದಾಟುವ ಹಡಗುಗಳಿಗೆ 2 ಮಿಲಿಯನ್ ಡಾಲರ್ ಟೋಲ್; ಭಾರತದಿಂದಲೂ ಹಣ ಕೀಳುತ್ತಾ ಇರಾನ್‌?
ವರದಿಗಾರರು : Jagadeesha BM | ಸ್ಥಳ : Bengaluru | ದಿನಾಂಕ : 23-03-2026

ಹಾರ್ಮುಜ್ ಜಲಸಂಧಿ ದಾಟುವ ಹಡಗುಗಳಿಗೆ 2 ಮಿಲಿಯನ್ ಡಾಲರ್ ಟೋಲ್; ಭಾರತದಿಂದಲೂ ಹಣ ಕೀಳುತ್ತಾ ಇರಾನ್‌?

ನೀನು ಚಾಪೆ ಕೆಳಗೆ ತೂರಿದರೆ ನಾನು ರಂಗೋಲಿ ಕೆಳಗೆ ತೂರುತ್ತೇನೆ ಎಂಬಂತೆ, ಹಾರ್ಮುಜ್‌ ಜಲಸಂಧಿ ತೆರೆಯಲು 48 ಗಂಟೆಗಳ ಡೆಡ್‌ಲೈನ್‌ ನೀಡಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರಿಗೆ, ಇರಾನ್‌ ಮತ್ತೊಂದು ಶಾಕ್‌ ನೀಡಿದೆ. ಹಾರ್ಮುಜ್‌ ಜಲಸಂಧಿಯನ್ನು ಹಾದುಹೋಗುವ ವಾಣಿಜ್ಯ ಹಡಗುಗಳ ಮೇಲೆ ಇರಾನ್‌ 2 ಮಿಲಿಯನ್‌ ಡಾಲರ್‌ ಟೋಲ್‌ ವಿಧಿಸಿದೆ. ಅಲ್ಲದೇ ತನ್ನ ವಿದ್ಯುತ್‌ ಘಟಕಗಳ ಮೇಲೆ ಅಮೆರಿಕ ಮತ್ತು ಇರಾನ್‌ ದಾಳಿ ಮಾಡಿದರೆ, ಹಾರ್ಮುಜ್‌ ಜಲಸಂಧಿಯನ್ನೇ ಮುಚ್ಚುವುದಾಗಿ ಇರಾನ್‌ ಎಚ್ಚರಿಸಿದೆ. ಇದರಿಂದ ಭಾರತದ ಮೇಲಾಗುವ ಪರಿಣಾಮವೇನು? ನೋಡೋಣ ಬನ್ನಿ.

ಟೆಹ್ರಾನ್‌: ಮಧ್ಯಪ್ರಾಚ್ಯದಲ್ಲಿ ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ದಿನದಿಂದ ದಿನಕ್ಕೆ ಭೀಕರ ಸ್ವರೂಪ ಪಡೆದುಕೊಳ್ಳುತ್ತಿದೆ. ಗುಂಡು, ಕ್ಷಿಪಣಿ, ಡ್ರೋನ್ ದಾಳಿಗಳ ಅಬ್ಬರದ ನಡುವೆ ಇದೀಗ ಜಾಗತಿಕ ಆರ್ಥಿಕತೆಯನ್ನೇ ಬುಡಮೇಲು ಮಾಡುವಂತಹ ಮತ್ತೊಂದು ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಯುದ್ಧದಲ್ಲಿ ಶತ್ರುಗಳನ್ನು ಮಣಿಸಲು ಬಗೆಬಗೆಯ ತಂತ್ರಗಳನ್ನು ಹೆಣೆಯುತ್ತಿರುವ ಇರಾನ್, ಇದೀಗ ಜಗತ್ತನ್ನೇ ಬೆಚ್ಚಿಬೀಳಿಸುವಂತಹ ನಿರ್ಧಾರವೊಂದನ್ನು ಪ್ರಕಟಿಸಿದೆ. ಅಮೆರಿಕ ಮತ್ತು ಇಸ್ರೇಲ್ ವಿರುದ್ಧದ ಹೋರಾಟದಲ್ಲಿ ತನ್ನ ಭೌಗೋಳಿಕ ಅಸ್ತ್ರವನ್ನು ಪ್ರಯೋಗಿಸಿರುವ ಇರಾನ್‌, ಜಾಗತಿಕ ತೈಲ ಪೂರೈಕೆಯ ಜೀವನಾಡಿಯಾಗಿರುವ ಹಾರ್ಮುಜ್ ಜಲಸಂಧಿಯಲ್ಲಿ ಹೊಸ 'ಟೋಲ್' ನಿಯಮವನ್ನು ಜಾರಿಗೆ ತಂದಿದೆ.

ಹೌದು, ನೀವು ರಸ್ತೆಗಳಲ್ಲಿ ವಾಹನ ಚಲಾಯಿಸುವಾಗ ಟೋಲ್ ಕಟ್ಟುವುದು ಸಾಮಾನ್ಯ. ಆದರೆ ಇರಾನ್‌, ಸಮುದ್ರ ಮಾರ್ಗದಲ್ಲಿ ಸಂಚರಿಸುವ ಹಡಗುಗಳಿಗೆ ಬರೋಬ್ಬರಿ 2 ಮಿಲಿಯನ್ ಡಾಲರ್, ಅಂದರೆ ಭಾರತೀಯ ರೂಪಾಯಿ ಲೆಕ್ಕದಲ್ಲಿ ಸುಮಾರು 16 ರಿಂದ 18 ಕೋಟಿ ರೂಪಾಯಿ ಟೋಲ್ ವಿಧಿಸಿದೆ. ಜಗತ್ತಿನ ಕಚ್ಚಾ ತೈಲ ಪೂರೈಕೆಯ ಶೇಕಡಾ 20ರಷ್ಟು, ಅಂದರೆ ಜಾಗತಿಕ ತೈಲದ ಐದನೇ ಒಂದು ಭಾಗ ಇದೇ ಹಾರ್ಮುಜ್ ಜಲಸಂಧಿಯ ಮೂಲಕವೇ ಹಾದುಹೋಗಬೇಕು. ಈ ನಿರ್ಣಾಯಕ ಜಲಮಾರ್ಗದ ಮೇಲೆ ತನ್ನ ಹಿಡಿತ ಸಾಧಿಸಿರುವ ಇರಾನ್, ಇದೀಗ ಕೆಲವು ನಿರ್ದಿಷ್ಟ ಹಡಗುಗಳು ಜಲಸಂಧಿ ದಾಟಲು 2 ಮಿಲಿಯನ್ ಡಾಲರ್ ಶುಲ್ಕ ಪಾವತಿಸಬೇಕು ಎಂದು ಫರ್ಮಾನು ಹೊರಡಿಸಿದೆ. ಇದರಿಂದ ಜಗತ್ತು ಅಕ್ಷರಶ: ಬೆಚ್ಚಿಬಿದ್ದಿದೆ. ಜಾಗತಿಕ ತೈಲ ಬಿಕ್ಕಟ್ಟು ಮತ್ತಷ್ಟು ಭೀಕರ ಆಗುವ ಸಾಧ್ಯತೆ ದಟ್ಟವಾಗಿದೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1618+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1848+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4311+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4489+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4510+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4589+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7068+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7549+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7587+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12782+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12906+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13181+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13202+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27170+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30208+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30228+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30257+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33261+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33266+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33388+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33482+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33513+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39059+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39148+