ದಂಪತಿಗಳಿಬ್ಬರು ಒಂದೇ ದಿನ ಸಾವು ! ಮಕ್ಕಳು ಅನಾಥ
ಬೆಳೆಗಾವಿಯಲ್ಲಿ ಒಂದು ಮನಕಲಕುವ ಘಟನೆ ನಡೆದಿದೆ .ಬೆಳಗಾವಿ ಜಿಲ್ಲೆಯಲ್ಲಿ ದಂಪತಿ ಒಂದೇ ದಿನ ಸಾವನ್ನಪ್ಪಿದ್ದು, ಮೂವರು ಮಕ್ಕಳು ಅನಾಥರಾಗಿದ್ದಾರೆ. ಬೈಲಹೊಂಗಲದ ಮಧುರಾ (30) ಹೊಟ್ಟೆನೋವಿನಿಂದ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡರೆ, ಪತಿ ಕರೆಪ್ಪ (36) ಈ ಸುದ್ದಿ ಕೇಳಿ ಆಸ್ಪತ್ರೆಗೆ ಧಾವಿಸುವಾಗ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಈ ದುರಂತ ಕುಟುಂಬದಲ್ಲಿ ಶೋಕ ಆವರಿಸಿದೆ. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ. ಜಿಲ್ಲೆಯಲ್ಲಿ ಒಂದೇ ದಿನ ಪತಿ-ಪತ್ನಿ ಸಾವನ್ನಪ್ಪಿರುವ ಘಟನೆ ನಡೆದಿದ್ದು, ದಂಪತಿಯ ಮೂವರು ಮಕ್ಕಳು ಅನಾಥರಾಗಿದ್ದಾರೆ. ಪತ್ನಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿದ ಪತಿ, ಬೈಕ್‌ನಲ್ಲಿ ಬರುವಾಗ ಅಪಘಾತಕ್ಕೀಡಾಗಿದ್ದು, ದಾರುಣವಾಗಿ ಸಾವನ್ನಪ್ಪಿದ್ದಾನೆ. ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದ ಕರೆಪ್ಪ (36) ಹಾಗೂ ಅವರ ಪತ್ನಿ ಮಧುರಾ (30) ಮೃತ ದಂಪತಿ. ಹಲವು ವರ್ಷಗಳಿಂದ ಹೊಟ್ಟೆನೋವಿನಿಂದ ಬಳಲುತ್ತಿದ್ದ ಮಧುರಾ, ನೋವು ತಾಳಲಾರದೆ ಕ್ರಿಮಿನಾಶಕ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ತಕ್ಷಣವೇ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ಸಾಗಿಸಲು ಮುಂದಾದರೂ, ಮಾರ್ಗ ಮಧ್ಯೆಯೇ ಅವರು ಮೃತಪಟ್ಟಿದ್ದಾರೆ. ಪತ್ನಿಯ ಸಾವಿನ ಸುದ್ದಿ ತಿಳಿದು ಆಘಾತಗೊಂಡ ಕರೆಪ್ಪ, ಬೈಕ್‌ನಲ್ಲಿ ಆಸ್ಪತ್ರೆಗೆ ಧಾವಿಸುತ್ತಿದ್ದ ವೇಳೆ ಅಪಘಾತಕ್ಕೀಡಾಗಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಅವಸರದಲ್ಲಿ ಬರುತ್ತಿದ್ದ ವೇಳೆ ಬಸ್ ಚಕ್ರಕ್ಕೆ ಸಿಲುಕಿದ ಪರಿಣಾಮ ಸ್ಥಳದಲ್ಲೇ ಅವರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.