ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ
ವರದಿಗಾರರು : ಮಮತಾ | ಸ್ಥಳ : Bengaluru | ದಿನಾಂಕ : 16-01-2026

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

ದೇಶಭಕ್ತಿಗೆ ಹೆಸರಾಗಿದ್ದ ದರ್ಭಾಂಗ ರಾಜಮನೆತನದ ಕೊಂಡಿಯೊಂದು ಕಳಚಿದೆ. ಈ ಮನೆತನದ ಕೊನೆಯ ಮಹಾರಾಣಿ 'ಕಾಮಸುಂದರಿ ದೇವಿ' ಅವರು ನಿಧನರಾಗಿದ್ದಾರೆ. ಅವರ ನಿಧನವು ದರ್ಭಾಂಗ ರಾಜಮನೆತನದ ಐತಿಹಾಸಿಕ ಕೊಡುಗೆಗಳನ್ನು ಮತ್ತೆ ಮುನ್ನೆಲೆಗೆ ತಂದಿದೆ.

ಅನಾರೋಗ್ಯದಿಂದ ಬಳಲುತ್ತಿದ್ದ ಮಹಾರಾಣಿ ಕಾಮಸುಂದರಿ ಅವರು, ಬಿಹಾರದ ದರ್ಭಾಂಗದಲ್ಲಿರುವ ತಮ್ಮ ಐತಿಹಾಸಿಕ ನಿವಾಸ 'ಕಲ್ಯಾಣಿ'ಯಲ್ಲಿ ಕೊನೆಯುಸಿರೆಳೆದರು. ಅವರ ನಿಧನದೊಂದಿಗೆ ಮಿಥಿಲಾಂಚಲ ಭಾಗದ ಪ್ರಸಿದ್ಧ ರಾಜಮನೆತನದ ಯುಗ ಅಂತ್ಯಗೊಂಡಂತಾಗಿದೆ.

ದೇಶಕ್ಕಾಗಿ 600 ಕೆ.ಜಿ ಚಿನ್ನ, 3 ವಿಮಾನಗಳನ್ನು ದಾನ ನೀಡಿದ್ದ ಮಹಾರಾಣಿ

1962ರ ಭಾರತ-ಚೀನಾ ಯುದ್ಧದ ಸಂದರ್ಭದಲ್ಲಿ, ಸರ್ಕಾರ ಯುದ್ಧದ ವೆಚ್ಚಕ್ಕಾಗಿ ನೆರವು ನೀಡುವಂತೆ ಮನವಿ ಮಾಡಿತ್ತು. ಆ ಮನವಿಗೆ ಸ್ಪಂದಿಸಿದ್ದ ಮಹಾರಾಣಿಯ ಕುಟುಂಬವು, ದರ್ಭಾಂಗದ ಇಂದ್ರಭವನ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ, ದೇಶದ ರಕ್ಷಣಾ ನಿಧಿಗೆ ಸುಮಾರು 15 ಮಣ (ಸುಮಾರು 600 ಕೆಜಿ ) ಚಿನ್ನವನ್ನು ದಾನವಾಗಿ ನೀಡಿತ್ತು. ಇದರ ಜತೆಗೆ, ಮೂರು ವಿಮಾನಗಳು ಮತ್ತು 90 ಎಕರೆ ಭೂಮಿಯನ್ನು ಸರ್ಕಾರಕ್ಕೆ ಹಸ್ತಾಂತರಿಸಿದ್ದರು. ಅಂದು ಅವರು ನೀಡಿದ ಆ ಜಾಗವೇ ಇಂದು 'ದರ್ಭಾಂಗ ವಿಮಾನ ನಿಲ್ದಾಣ'ವಾಗಿ ಅಭಿವೃದ್ಧಿಪಡಿಸಲಾಗಿದೆ.

ಅಲ್ಲದೇ ಈ ಮನೆತನ ಹಲವಾರು ವಿಶ್ವವಿದ್ಯಾಲಯಗಳು, ಸಕ್ಕರೆ ಮತ್ತು ಕಾಗದದ ಕಾರ್ಖಾನೆಗಳನ್ನು ಸ್ಥಾಪಿಸುವ ಮೂಲಕ ಶಿಕ್ಷಣ ಮತ್ತು ಕೈಗಾರಿಕಾ ಕ್ಷೇತ್ರಕ್ಕೂ ಗಮನಾರ್ಹ ಕೊಡುಗೆಗಳನ್ನು ನೀಡಿದೆ.

ಕಾಮಸುಂದರಿ ದೇವಿ ಆಸ್ತಿಯ ವಿವರ:

1962ರಲ್ಲಿ, ಕೊನೆಯ ಮಹಾರಾಜ ಕಾಮೇಶ್ವರ ಸಿಂಗ್ ನಿಧನರಾದಾಗ, ದರ್ಭಾಂಗ ಮನೆತನದ ಸಂಪತ್ತು ಸುಮಾರು ₹2,000 ಕೋಟಿ ಎಂದು ಅಂದಾಜಿಸಲಾಗಿತ್ತು. ನಂತರದ ವರ್ಷಗಳಲ್ಲಿ, ಈ ಮನೆತನದ ಟ್ರಸ್ಟಿಗಳು ಈ ಅಪಾರ ಸಂಪತ್ತಿನ ಬಹುಭಾಗವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಇದರಿಂದಾಗಿ ಸಂಪತ್ತು ಕ್ರಮೇಣ ಕ್ಷೀಣಿಸಿದೆ ಎಂದು ವರದಿಯಾಗಿದೆ.

ಇಂದು ಉಳಿದಿರುವ ಸಂಪತ್ತೆಷ್ಟು?

ಕುಟುಂಬದ ಪ್ರಸ್ತುತ ಸಂಪತ್ತಿನ ನಿಖರವಾದ ಅಂಕಿ ಅಂಶ ಲಭ್ಯವಿಲ್ಲ. ಆದರೆ 1962ರಲ್ಲಿ ಸುಮಾರು ₹2,000 ಕೋಟಿ ಮೌಲ್ಯದ ಈ ಮನೆತನದ ಆಸ್ತಿಯ ಪ್ರಸ್ತುತ ಮಾರುಕಟ್ಟೆ ಮೌಲ್ಯ ಸುಮಾರು ₹4 ಲಕ್ಷ ಕೋಟಿ ಇರಬಹುದು ಎಂದು 'ಇಂಡಿಯಾ ಟುಡೇ' ವರದಿ ಮಾಡಿದೆ. ಈ ಆಸ್ತಿಯಲ್ಲಿ 14 ದೊಡ್ಡ ಕಂಪನಿಗಳು, ಭಾರತ ಮತ್ತು ವಿದೇಶಗಳಲ್ಲಿರುವ ಬಂಗಲೆಗಳು, ಚಿನ್ನಾಭರಣ, ಭೂಮಿ ಮತ್ತು ಷೇರು ಮಾರುಕಟ್ಟೆಯಲ್ಲಿನ ಹೂಡಿಕೆಗಳು ಸೇರಿವೆ.

ಕಾಮಸುಂದರಿ ದೇವಿ ಶಿಕ್ಷಣ ಮತ್ತು ಕೈಗಾರಿಕಾ ಕ್ಷೇತ್ರಕ್ಕೂ ಅಪಾರ ಕೊಡುಗೆ ದರ್ಭಾಂಗ ರಾಜಮನೆತನ ಶಿಕ್ಷಣ ಮತ್ತು ಕೈಗಾರಿಕಾ ಅಭಿವೃದ್ಧಿಯಲ್ಲಿಯೂ ಪ್ರಮುಖ ಪಾತ್ರ ವಹಿಸಿದೆ. ಲಲಿತ್ ನಾರಾಯಣ್ ಮಿಥಿಲಾ ವಿಶ್ವವಿದ್ಯಾಲಯವು ರಾಜಮನೆತನದ ಸಂಕೀರ್ಣದಲ್ಲಿದೆ. ಬನಾರಸ್ ಹಿಂದೂ ವಿಶ್ವವಿದ್ಯಾಲಯ, ಕಲ್ಕತ್ತಾ ವಿಶ್ವವಿದ್ಯಾಲಯ, ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯ ಮತ್ತು ಪಟ್ನಾ ವಿಶ್ವವಿದ್ಯಾಲಯಗಳಿಗೆ ಈ ಕುಟುಂಬ ಅಪಾರ ಆರ್ಥಿಕ ನೆರವು ನೀಡಿದೆ. ದರ್ಭಾಂಗ ವೈದ್ಯಕೀಯ ಕಾಲೇಜು ಕೂಡ ಇದರ ಕೊಡುಗೆಗಳಲ್ಲಿ ಒಂದು.

ಇದಲ್ಲದೇ ಸಕ್ರಿ, ಲೋಹತ್, ರಾಯಮ್ ಮತ್ತು ಹಸನ್‌ಪುರದಲ್ಲಿ ಸಕ್ಕರೆ ಕಾರ್ಖಾನೆಗಳನ್ನು, ಹಯಾಘಾಟ್‌ನಲ್ಲಿ ಅಶೋಕ್ ಕಾಗದ ಕಾರ್ಖಾನೆ ಮತ್ತು ಸಮಷ್ಟಿಪುರದಲ್ಲಿ ರಾಮೇಶ್ವರ ಸೆಣಬಿನ ಕಾರ್ಖಾನೆ ಸ್ಥಾಪಿಸಿದ್ದರು. ಕಾಮಸುಂದರಿ ದೇವಿ ಎಂಟನೇ ವಯಸ್ಸಿನಲ್ಲಿ ವಿವಾಹ ಮಹಾರಾಣಿ ಕಾಮಸುಂದರಿ ದೇವಿ ಅವರು ಕಾಮೇಶ್ವರ ಸಿಂಗ್ ಅವರ ಮೂರನೇ ಪತ್ನಿ. 1932 ಅಕ್ಟೋಬರ್ 22, ರಂದು ಒಡಿಶಾದ ಮಧುಬನಿ ಜಿಲ್ಲೆಯಲ್ಲಿ ಜನಿಸಿದರು. ಎಂಟನೇ ವಯಸ್ಸಿನಲ್ಲಿ ಅವರು ವಿವಾಹವಾಗಿದ್ದರು. 1962ರಲ್ಲಿ ಮಹಾರಾಜ ಕಾಮೇಶ್ವರ ಸಿಂಗ್ ನಿಧನದನಂತರ 64 ವರ್ಷಗಳ ಕಾಲ ಒಂಟಿಯಾಗಿಯೇ (ವಿಧವೆ) ಜೀವನ ಸಾಗಿಸಿದ್ದರು.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1719+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1949+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4412+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4590+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4611+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4690+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7169+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7650+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7688+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12883+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 13007+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13282+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13303+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27271+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30309+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30329+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30358+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33362+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33367+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33489+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33582+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33613+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39159+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39248+