ಉತ್ತರ ಪ್ರದೇಶದ ಜೆವಾರ್‌ನಲ್ಲಿ ಅಂತಾರಾಷ್ಟ್ರೀಯ ಏರ್ಪೋರ್ಟ್ ಉದ್ಘಾಟಿಸಿದ ಮೋದಿ
ಉತ್ತರ ಪ್ರದೇಶ : ಉತ್ತರ ಪ್ರದೇಶದ ಜೆವಾರ್‌ನಲ್ಲಿ ಅಂತಾರಾಷ್ಟ್ರೀಯ ಏರ್ಪೋರ್ಟ್ ಉದ್ಘಾಟನೆ ಮಾಡಿದ ಮೋದಿಯವರು ಜೆವಾರ್‌ನಲ್ಲಿ ನಿರ್ಮಾಣಗೊಂಡಿರುವ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದ್ದಾರೆ . ಸುಮಾರು 11,200 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಈ ವಿಮಾನ ನಿಲ್ದಾಣವು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಾಣಗೊಂಡಿದೆ. ಈ ಯೋಜನೆ ಉತ್ತರ ಪ್ರದೇಶದ ಮೂಲಸೌಕರ್ಯ ಅಭಿವೃದ್ಧಿಗೆ ಮಹತ್ವದ ಮೈಲುಗಲ್ಲಾಗಲಿದೆ. ಈ ವಿಮಾನ ನಿಲ್ದಾಣ ಉದ್ಘಾಟನೆಯೊಂದಿಗೆ ಉತ್ತರ ಪ್ರದೇಶ ದೇಶದಲ್ಲೇ 5 ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನು ಹೊಂದಿರುವ ಮೊದಲ ರಾಜ್ಯವಾಗಿದೆ. ಹೊಸ ಏರ್‌ಪೋರ್ಟ್‌ನಿಂದ ಪ್ರಯಾಣಿಕರಿಗೆ ಸುಧಾರಿತ ಸೇವೆಗಳು ಲಭ್ಯವಾಗಲಿದ್ದು, ಉದ್ಯೋಗಾವಕಾಶಗಳು ಹೆಚ್ಚಾಗುವ ನಿರೀಕ್ಷೆಯಿದೆ. ಈ ಯೋಜನೆಯಿಂದ ಜನತೆಗೆ ಉತ್ತಮ ಸೇವೆಗಳು ಸಿಗಲಿವೆ ಎಂದು ಮೋದಿ ಅಭಿಪ್ರಾಯ ಪಟ್ಟಿದ್ದಾರೆ.