ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಮದ್ದೂರಿನಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವದ ಪರಿಸರ ಜಾಗೃತಿ ಕಾರ್ಯಕ್ರಮ
ವರದಿಗಾರರು : ಕೆಂಡೇಶ್ ಸೂರ್ಯ, | ಸ್ಥಳ : ಹುಣಸೂರು | ದಿನಾಂಕ : 29-10-2025

ಮದ್ದೂರಿನಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವದ ಪರಿಸರ ಜಾಗೃತಿ ಕಾರ್ಯಕ್ರಮ

ಪ್ರತಿದಿನ ಉಂಟಾಗುತ್ತಿರುವ ತ್ಯಾಜ್ಯದಲ್ಲಿ ಜೀವಸಂಕುಲಕ್ಕೆ ಕಂಟಕಪ್ರಾಯವಾದ ಏಕಬಳಕೆಯ ಪ್ಲಾಸ್ಟಿಕ್‌ ವಿಲೇವಾರಿ ಆಡಳಿತ ವ್ಯವಸ್ಥೆಗೆ ದೊಡ್ಡ ಸವಾಲಾಗಿದೆ ಎಂದು ತಾಲ್ಲೂಕು ದಂಡಾಧಿಕಾರಿ ಹಾಗೂ ಮದ್ದೂರು ನಗರಸಭೆ ಪೌರಾಯುಕ್ತ ಪರಶುರಾಮ ಸತ್ತಿಗೇರಿ ಆತಂಕ ವ್ಯಕ್ತಪಡಿಸಿದರು.

ನಗರದ ಅಂಬೇಡ್ಕರ್ ಭವನದಲ್ಲಿ ತಾಲ್ಲೂಕು ಆಡಳಿತ ಹಾಗೂ ನಗರಸಭೆ ಮದ್ದೂರು ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಮಾಲಿನ್ಯ ನಿಯಂತ್ರಣ ಮಂಡಳಿಯ 50ನೇ ವರ್ಷದ ಸುವರ್ಣ ಮಹೋತ್ಸವದ ಪರಿಸರ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

“ಡಂಪಿಂಗ್ ಯಾರ್ಡ್‌ಗಳು ಈಗ ಪ್ಲಾಸ್ಟಿಕ್ ಗುಡ್ಡಗಳಾಗಿ ಮಾರ್ಪಟ್ಟಿವೆ. ಪ್ಲಾಸ್ಟಿಕ್ ಬಾಟಲಿಗಳು, ತಿಂಡಿಗಳ ಕವರ್‌ಗಳು ಜಲಮೂಲ ಸೇರಿ ಮಾಲಿನ್ಯ ಉಂಟುಮಾಡುತ್ತಿವೆ. ಯಾವ ನಗರವೂ ಈ ಸಮಸ್ಯೆಯಿಂದ ಹೊರತಾಗಿಲ್ಲ,” ಎಂದು ಹೇಳಿದರು.

ಪ್ಲಾಸ್ಟಿಕ್‌ನ ದುಷ್ಪರಿಣಾಮಗಳ ಕುರಿತು ಜಾಗೃತಿ ಸಂಪನ್ಮೂಲ ವ್ಯಕ್ತಿ ಜಗದೀಶ ಮಾತನಾಡಿ, “ರಸ್ತೆ ಬದಿಯಲ್ಲಿ ಬಿದ್ದಿರುವ ಒಂದೊಂದು ಪ್ಲಾಸ್ಟಿಕ್ ಕ್ಯಾರಿಬ್ಯಾಗ್‌ಗಳು ಸೇರಿ ದೊಡ್ಡ ಪ್ರಮಾಣದ ತ್ಯಾಜ್ಯ ಉಂಟುಮಾಡುತ್ತವೆ. ಅದು ಮುಂದೆ ಬೃಹದಾಕಾರವಾಗಿ ಬೆಳೆಯುತ್ತ ಪರಿಸರಕ್ಕೆ ಅಪಾಯ ಉಂಟುಮಾಡುತ್ತದೆ,” ಎಂದು ಹೇಳಿದರು.

ಯುವಕರಿಗೆ ಕಿವಿಮಾತು “ನಮ್ಮ ನಗರವನ್ನು ಸ್ವಚ್ಛವಾಗಿ ಇಡಲು ಪ್ರತಿಯೊಬ್ಬ ಯುವಕರೂ ಮುಂದಾಗಬೇಕು. ತ್ಯಾಜ್ಯ ಜಲಮೂಲಗಳಲ್ಲಿ ಸೇರುವುದನ್ನು ತಡೆಯಿ, ಜಲಚರ ಪ್ರಾಣಿಗಳ ರಕ್ಷಣೆಗೆ ಸಹಕರಿಸಿ,” ಎಂದು ಕರೆ ನೀಡಿದರು.

ಪ್ಲಾಸ್ಟಿಕ್ ಹೊದಿಕೆಯಾದ ರಸ್ತೆ — ಹೊಸ ಪ್ರಯೋಗ ಮಳೆಯ ಪ್ರಮಾಣ ಹೆಚ್ಚಿರುವ ಕರಾವಳಿ ಪ್ರದೇಶಗಳಲ್ಲಿ ಡಾಂಬರ್ ರಸ್ತೆಗಳಲ್ಲಿ ಹೊಂಡಗಳು ಉಂಟಾಗುವುದನ್ನು ತಡೆಯಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಂಗಳೂರು ಕಚೇರಿಯು 67 ಕಿ.ಮೀ ಪ್ಲಾಸ್ಟಿಕ್ ಹೊದಿಕೆಯಾದ ರಸ್ತೆ ನಿರ್ಮಾಣ ಯೋಜನೆ ಕೈಗೊಂಡಿದೆ. ಈ ಯೋಜನೆ ಪರಿಸರ ಸ್ನೇಹಿ ಪ್ರಯೋಗವಾಗಲಿದೆ ಎಂದು ಹೇಳಿದರು.

ವಿದ್ಯಾರ್ಥಿಗಳಿಂದ ಜಾಗೃತಿ ಚಟುವಟಿಕೆಗಳು ಕಾಲೇಜು ವಿದ್ಯಾರ್ಥಿಗಳಲ್ಲಿ ಪರಿಸರ ಸಂರಕ್ಷಣೆಯ ಅರಿವು ಮೂಡಿಸಲು ಪ್ರಬಂಧ ಸ್ಪರ್ಧೆ ನಡೆಸಿ ವಿಜೇತರನ್ನು ಗೌರವಿಸಲಾಯಿತು. ನಂತರ ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳು ನಗರದ ಪ್ರಮುಖ ಬೀದಿಗಳಲ್ಲಿ ಘೋಷಣೆ ಕೂಗುತ್ತ ಸ್ವಚ್ಛತೆಯ ಜಾಗೃತಿ ಜಾಥಾ ನಡೆಸಿದರು.

ಈ ಸಂದರ್ಭದಲ್ಲಿ ಇ.ಓ ರಾಮಲಿಂಗಯ್ಯ, ಬಿ.ಇ.ಓ ಧನಂಜಯ ಎಸ್., ನಗರಸಭೆ ಪರಿಸರ ಅಭಿಯಂತರ ಅರ್ಚನಾ ಆರಾಧ್ಯ, ತಾಲ್ಲೂಕು ಕಚೇರಿ ಹಾಗೂ ನಗರಸಭೆಯ ಸಿಬ್ಬಂದಿಗಳು ಸೇರಿದಂತೆ 150 ಕ್ಕೂ ಹೆಚ್ಚು ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದರು.

ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 7892441717 ಸಂಖ್ಯೆಯನ್ನು ಸೇರಿಸಿ.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 1092+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 4140+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 4181+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 4238+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 4340+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 4388+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 4420+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 4464+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 4512+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 4525+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 4599+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 4659+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6879+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6942+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6993+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 7049+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 7210+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 7238+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 7368+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 7549+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9752+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9917+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9978+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 10149+