ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

 ಧುರಂಧರ್ 2 ಎದುರು ಮಂಕಾದ ಪವನ್ ಕಲ್ಯಾಣ್ ಅಭಿನಯದ ಉಸ್ತಾದ್ ಭಗತ್ ಸಿಂಗ್
ವರದಿಗಾರರು : shobha jagadish | ಸ್ಥಳ : ಬೆಂಗಳೂರು | ದಿನಾಂಕ : 25-03-2026

ಧುರಂಧರ್ 2 ಎದುರು ಮಂಕಾದ ಪವನ್ ಕಲ್ಯಾಣ್ ಅಭಿನಯದ ಉಸ್ತಾದ್ ಭಗತ್ ಸಿಂಗ್

ಧುರಂಧರ್ 2 ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಯಶಸ್ಸು ಗಳಿಸಿದ್ದು, ಪವನ್ ಕಲ್ಯಾಣ್ ಅಭಿನಯದ ಉಸ್ತಾದ್ ಭಗತ್ ಸಿಂಗ್ ಚಿತ್ರವನ್ನು ಮೀರಿಸಿದೆ. ಧುರಂಧರ್ 2 ಮಂಗಳವಾರ 56 ಕೋಟಿ ಗಳಿಸಿದರೆ, ಉಸ್ತಾದ್ ಭಗತ್ ಸಿಂಗ್ ಕೇವಲ 1.5 ಕೋಟಿ ಗಳಿಸಿದೆ. ಪವನ್ ಕಲ್ಯಾಣ್ ಅವರ ಇತ್ತೀಚಿನ ಚಿತ್ರಗಳು ನಿರೀಕ್ಷೆ ಮೂಡಿಸದೆ ನಿರಾಸೆ ಮೂಡಿಸಿವೆ. ಧುರಂಧರ್ 2 ಸಿನಿಮಾ ಅಬ್ಬರಕ್ಕೆ ಎಲ್ಲರೂ ನಡುಗಿ ಹೋಗಿದ್ದಾರೆ. ಇಡೀ ಬಾಕ್ಸ್ ಆಫೀಸ್​ ಶೇಕ್ ಆಗುತ್ತಿದೆ. ಈ ಚಿತ್ರದ ನಾಗಾಲೋಟಕ್ಕೆ ಎಲ್ಲಾ ಸಿನಿಮಾಗಳು ಮಂಕಾಗುತ್ತಿವೆ. ಪವನ್ ಕಲ್ಯಾಣ್ ನಟನೆಯ ಉಸ್ತಾದ್ ಭಗತ್ ಸಿಂಗ್ ಚಿತ್ರವಂತೂ ಮಕಾಡೆ ಮಲಗಿದೆ. ಈ ಚಿತ್ರ ಮಂಗಳವಾರ ಗಳಿಕೆ ಮಾಡಿದ್ದು ಕೇಲವ ಒಂದು ಕೋಟಿ ರೂಪಾಯಿ. ಆದರೆ, ತೆಲುಗು ಭಾಷೆಯಲ್ಲಿ ಡಬ್ ಆಗಿ ರಿಲೀಸ್ ಆದ ಧುರಂಧರ್ 2 ಸಿನಿಮಾ, ಪವನ್ ಚಿತ್ರಕ್ಕಿಂತ ಹೆಚ್ಚು ಕಲೆಕ್ಷನ್ ಮಾಡಿದೆ. ಧುರಂಧರ್ 2 ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇತ್ತು. ಆ ನಿರೀಕ್ಷೆಯನ್ನೂ ಮೀರಿ ಧುರಂಧರ್ 2 ಸಿನಿಮಾ ಗೆಲುವು ಕಂಡಿದೆ. ಈ ಚಿತ್ರದ ಗಳಿಕೆ ಮಂಗಳವಾರ 56 ಕೋಟಿ ರೂಪಾಯಿ ಇದೆ. ತೆಲುಗು ಭಾಷೆಯಲ್ಲೇ ಚಿತ್ರ ಮೂರು ಕೋಟಿ ರೂಪಾಯಿ ಗಳಿಸಿದೆ. ಈ ಮೂಲಕ ಧುರಂಧರ್ 2 ಚಿತ್ರವು ಅನಾಯಾಸವಾಗಿ ಉಸ್ತಾದ್ ಭಗತ್ ಸಿಂಗ್ ಚಿತ್ರವನ್ನು ಮಣಿಸಿದೆ. ಪವನ್ ಚಿತ್ರ ಮಂಗಳವಾರ ಒಂದೂವರೆ ಕೋಟಿ ರೂಪಾಯಿ ಗಳಿಸಿದೆ ಎಂದು ವರದಿ ಆಗಿದೆ. ಪವನ್ ಕಲ್ಯಾಣ್ ಅವರು ರಾಜಕೀಯದಲ್ಲಿ ಬ್ಯುಸಿ ಇದ್ದಾರೆ. ಈ ಕಾರಣಕ್ಕೆ ಒಪ್ಪಿಕೊಂಡ ಚಿತ್ರಗಳನ್ನು ಮುಗಿಸಬೇಕಾದ ಅನಿವಾರ್ಯತೆ ಕಾರಣದಿಂದ ಆದಷ್ಟು ಪ್ರಯತ್ನಿಸಿ ಶೂಟ್ ಮುಗಿಸಿಕೊಟ್ಟರು. ಓಜಿ, ಹರಿ ಹರ ವೀರ ಮಲ್ಲು ಸಿನಿಮಾಗಳು ರಿಲೀಸ್ ಆಗಿ ಸೋತವು. ಈ ಸಾಲಿಗೆ ಉಸ್ತಾದ್ ಭಗತ್ ಸಿಂಗ್ ಕೂಡ ಸೇರ್ಪಡೆ ಆಗುತ್ತಿದೆ. ಪವನ್ ಕಲ್ಯಾಣ್​ಗೆ ಟಾಲಿವುಡ್​​​ನಲ್ಲಿ ಬಹುಬೇಡಿಕೆ ಇದೆ. ಅವರು ಅನೇಕ ಚಿತ್ರಗಳನ್ನು ಮಣಿಸಿದ್ದಾರೆ. ಆದರೆ, ಈಗ ಅವರು ಧುರಂಧರ್ 2 ಚಿತ್ರದ ಎದುರು ಮಂಡಿ ಊರಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಪವನ್ ಚಿತ್ರಕ್ಕೆ ಈಗಾಗಲೇ ಸಾಕಷ್ಟು ನೆಗೆಟಿವ್ ವಿಮರ್ಶೆ ಸಿಕ್ಕಿದೆ. ಹೀಗಾಗಿ, ಅವರ ಸಿನಿಮಾ ಮತ್ತೆ ಮೇಲಕ್ಕೆ ಏಳೋದು ಅನುಮಾನ ಎಂದೇ ಹೇಳಲಾಗುತ್ತಾ ಇದೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1618+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1848+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4311+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4489+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4510+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4589+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7068+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7549+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7587+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12782+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12906+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13181+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13202+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27170+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30208+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30228+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30257+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33261+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33266+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33388+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33482+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33513+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39059+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39148+