ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ ನೀಡಿದ ಎಎಂಆರ್ ಗ್ರೂಪ್ ಅಧ್ಯಕ್ಷ ಎ. ಮಹೇಶ್ ರೆಡ್ಡಿ
ಬಂಗಾರದ ಬೆಲೆ ಗಗನಕ್ಕೇರಿದರೂ ಬರೋಬ್ಬರಿ 2.50 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟವನ್ನು ಅಂಜನಾದ್ರಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ದೇಣಿಗೆ ನೀಡಿದ್ದಾರೆ. ಎಎಂಆರ್ ಗ್ರೂಪ್ ಅಧ್ಯಕ್ಷ ಎ. ಮಹೇಶ್ ರೆಡ್ಡಿ ನೇತೃತ್ವದಲ್ಲಿ ಬಂಗಾರದ ಪ್ರಭಾವಳಿ, ಕಿರೀಟ ಹಾಗೂ ಗದೆ ಅರ್ಪಣೆ ಮಾಡಲಾಗಿದೆ. ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಹಾಗೂ ಪತ್ನಿ ಅರುಣಾ ಲಕ್ಷ್ಮೀ ಸಹ ಈ ವೇಳೆ ಭಾಗಿಯಾಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ತಿರುಪತಿ ಮಾದರಿಯಲ್ಲಿ ದೇವಸ್ಥಾನ ಅಭಿವೃದ್ಧಿಯಾಗಬೇಕು ಎಂಬ ಉದ್ದೇಶದಿಂದ ಈ ದೇಣಿಗೆ ನೀಡಲಾಗಿದೆ. ಹೈದರಾಬಾದ್‌ನ ನೆಲ್ಲೂರು ಮೂಲದ ಉದ್ಯಮಿ ಮಹೇಶ್ ರೆಡ್ಡಿ ಈಗಾಗಲೇ ಶಿರಡಿ ಸಾಯಿ ಬಾಬಾ ದೇವಸ್ಥಾನಕ್ಕೂ 140 ಕೆಜಿ ಬಂಗಾರ ದೇಣಿಗೆ ನೀಡಿದ್ದು, ಅಂಜನಾದ್ರಿಗೆ ಇದೇ ಮೊದಲ ಕೊಡುಗೆಯಾಗಿದೆ.