ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

 ಪ್ರೀತಿಸಿದವನ ಜೊತೆ ಓಡಿ ಹೋಗಿದ್ದಕೆ ವಿಷ ಹಾಕಿದ ತಂದೆ ತಾಯಿ ...!
ವರದಿಗಾರರು : Shobha jagadish | ಸ್ಥಳ : Bangalore | ದಿನಾಂಕ : 15-04-2026

ಪ್ರೀತಿಸಿದವನ ಜೊತೆ ಓಡಿ ಹೋಗಿದ್ದಕೆ ವಿಷ ಹಾಕಿದ ತಂದೆ ತಾಯಿ ...!

ಬೆಳಗಾವಿ ಜಿಲ್ಲೆಯಲ್ಲಿ ನಡೆದ ಮರ್ಯಾದೆ ಹತ್ಯೆ ಪ್ರಕರಣ ರಾಜ್ಯಾದ್ಯಂತ ಆತಂಕ ಮೂಡಿಸಿದೆ. ಪ್ರೀತಿಸಿದವನ ಜೊತೆ ಓಡಿ ಹೋದ ಕಾರಣಕ್ಕೆ 25 ವರ್ಷದ ಯುವತಿಯನ್ನು ಕುಟುಂಬಸ್ಥರೇ ವಿಷ ನೀಡಿ ಕೊಂದಿದ್ದಲ್ಲದೆ ಸಾಕ್ಷಿ ನಾಶಪಡಿಸಲು ಶವವನ್ನು ಸುಟ್ಟು ಹಾಕಿದ್ದಾರೆ. ಪ್ರಿಯಕರನ ದೂರಿನ ಮೇರೆಗೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.ಜಿಲ್ಲೆಯ ಹುಕ್ಕೇರಿ ತಾಲೂಕಿನ ನದಿಗುಡಿ ಪ್ರದೇಶದಲ್ಲಿ ನಡೆದ ಮರ್ಯಾದೆ ಹತ್ಯೆ ಪ್ರಕರಣವು ರಾಜ್ಯದಾದ್ಯಂತ ಆತಂಕ ಮೂಡಿಸಿದೆ. ಸತ್ತೆವ್ವಾ ಹೆಳವರ್ (25) ಎಂಬ ಯುವತಿಯನ್ನು ಕುಟುಂಬಸ್ಥರೇ ವಿಷ ನೀಡಿ ಹತ್ಯೆ ಮಾಡಿ, ಬಳಿಕ ಸಾಕ್ಷಿ ನಾಶಪಡಿಸಲು ಶವವನ್ನು ಸುಟ್ಟು ಹಾಕಿದ್ದಾರೆ . ಸತ್ತೆವ್ವಾ ನದಿಗುಡಿ ಗ್ರಾಮದ ಕೃಷ್ಣಾ ಪಾಟೀಲ್ ಎಂಬ ಯುವಕನನ್ನು ಪ್ರೀತಿಸುತ್ತಿದ್ದಳು. ಈ ಸಂಬಂಧ ಕುಟುಂಬಕ್ಕೆ ತಿಳಿದ ನಂತರ, ನಾಲ್ಕು ವರ್ಷಗಳ ಹಿಂದೆ ರಾಯಬಾಗ ತಾಲೂಕಿನ ಹನಬರಟ್ಟಿ ಗ್ರಾಮದ ಸಂತೋಷ ಹೆಳವಿ ಜೊತೆ ವಿವಾಹ ಮಾಡಲಾಗಿತ್ತು. ಆದಾಗ್ಯೂ, ಮದುವೆಯಾದ ಬಳಿಕವೂ ಸತ್ತೆವ್ವಾ ತನ್ನ ಪ್ರಿಯಕರ ಕೃಷ್ಣಾ ಜೊತೆ ಸಂಪರ್ಕದಲ್ಲಿದ್ದು, 17 ಫೆಬ್ರವರಿ 2026ರಂದು ಇಬ್ಬರೂ ಮನೆ ಬಿಟ್ಟು ಓಡಿ ಹೋಗಿ, ಸವದತ್ತಿ ತಾಲೂಕಿನ ಬೆಳವಡಿ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಸುಮಾರು ಹದಿನೈದು ದಿನಗಳ ಹಿಂದೆ ಕುಟುಂಬಸ್ಥರು ಅವರನ್ನು ಪತ್ತೆಹಚ್ಚಿ ಮನೆಗೆ ಕರೆತಂದಿದ್ದರು. ಬಳಿಕ ಎರಡು ಕುಟುಂಬಗಳ ನಡುವೆ ರಾಜಿ ಸಂಧಾನವೂ ನಡೆದಿತ್ತು. ಕೃಷ್ಣನನ್ನು ಮರೆಯುವಂತೆ ಸತ್ತೆವ್ವಾಳ ಮೇಲೆ ಒತ್ತಡ ಹಾಕಲಾಗಿತ್ತು. ಆಕೆ ಒಪ್ಪದ ಹಿನ್ನೆಲೆಯಲ್ಲಿ, ಮೊದಲಿಗೆ ಮಹಾರಾಷ್ಟ್ರದ ಶಿರೋಳದಲ್ಲಿರುವ ಅಕ್ಕನ ಮನೆಗೆ ಕಳುಹಿಸಲಾಯಿತು. ಅಲ್ಲಿಯೂ ಒತ್ತಡ ಮುಂದುವರೆದ ಹಿನ್ನೆಲೆಯಲ್ಲಿ, ಸಾಂಗ್ಲಿ ಜಿಲ್ಲೆಯ ಅರಗ ಗ್ರಾಮಕ್ಕೆ ಕರೆದುಕೊಂಡು ಹೋಗಿ ಮಾರ್ಚ್ 21ರಂದು ವಿಷ ನೀಡಿ ಹತ್ಯೆ ಮಾಡಲಾಗಿದೆ ಎನ್ನಲಾಗಿದೆ. ಸತ್ತೆವ್ವಾಳ ಅಣ್ಣ ಶಾನೂರ ಹೆಳವರ್, ಚಿಕ್ಕಪ್ಪ ಪ್ರಕಾಶ್ ಹೆಳವರ್ ಮತ್ತು ಸಂಬಂಧಿ ಮಾಯಪ್ಪ ಹೆಳವಿ ಈ ಕೃತ್ಯವನ್ನೆಸಗಿದ್ದು, ಬಳಿಕ ಶವವನ್ನು ಸ್ಮಶಾನದಲ್ಲಿ ಸುಟ್ಟು ಹಾಕಿ, ಹಾಸಿಗೆ ಬಟ್ಟೆ ಸೇರಿಸಿ ಸಾಕ್ಷಿ ನಾಶಪಡಿಸಲಾಗಿದೆ ಎಂದು ಆರೋಪಿಸಲಾಗಿದೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1608+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1838+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4301+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4479+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4500+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4579+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7058+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7539+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7577+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12772+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12896+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13171+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13192+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27160+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30198+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30218+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30247+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33251+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33256+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33378+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33472+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33503+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39048+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39137+