ಮುಂದಿನ 7 ದಿನ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಂಭವ ! ಗುಡುಗು-ಮಿಂಚಿನ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ
ಕರ್ನಾಟಕದಲ್ಲಿ ಮುಂದಿನ 7 ದಿನ ಗುಡುಗು ಮಿಂಚಿನೊಂದಿಗೆ ಮಳೆ, ಕರಾವಳಿ ಮತ್ತು ಉತ್ತರ ಒಳನಾಡಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಗಂಟೆಗೆ 30-40 ಕಿಮೀ ಬಲವಾದ ಗಾಳಿ, ಜನರಿಗೆ ಎಚ್ಚರಿಕೆ.ರಾಜ್ಯದಲ್ಲಿ ಸೂರ್ಯನ ತಾಪಮಾನ ಏರುತ್ತಿರುವ ಬೆನ್ನಲ್ಲೇ ಈಗ ಹವಾಮಾನ ಇಲಾಖೆ ಅತ್ಯಂತ ಮಹತ್ವದ ಮುನ್ಸೂಚನೆಯೊಂದನ್ನು ನೀಡಿದೆ. ಕಳೆದ ಕೆಲವು ದಿನಗಳಿಂದ ಬಿಸಿಲಿನ ಬೇಗೆಯಿಂದ ಬೆಂದು ಹೋಗಿದ್ದ ಕರ್ನಾಟಕದ ಜನತೆಗೆ ವರುಣ ದೇವ ತಂಪೆರೆಯಲು ಸಜ್ಜಾಗಿದ್ದಾನೆ. ಆದರೆ, ಇದು ಬರಿ ಮಳೆಯಲ್ಲ, ಇದರೊಂದಿಗೆ ಆತಂಕಕಾರಿ ಗಾಳಿಯ ವೇಗವೂ ಇರಲಿದೆ ಎಂದು ಎಚ್ಚರಿಸಲಾಗಿದೆ.ಮುಂದಿನ 7 ದಿನ ಹವಾಮಾನ ಎಚ್ಚರಿಕೆ ನೀಡಿದೆ . ಹವಾಮಾನ ಇಲಾಖೆಯ ವರದಿಯ ಪ್ರಕಾರ, ಮುಂದಿನ 7 ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಹಗುರ ಮಳೆಯಾಗಲಿದೆ. ವಿಶೇಷವಾಗಿ ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕೇವಲ ಮಳೆ ಮಾತ್ರವಲ್ಲದೆ, ಪ್ರತಿ ಗಂಟೆಗೆ 30 ರಿಂದ 40 ಕಿಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಜನಸಾಮಾನ್ಯರು ಜಾಗರೂಕರಾಗಿರಲು ಸೂಚಿಸಲಾಗಿದೆ.ಮುಂದಿನ 24 ಗಂಟೆಗಳಲ್ಲಿ ಬೀದರ್, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ದಾವಣಗೆರೆ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಇತ್ತ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಸಂಜೆ ವೇಳೆಗೆ ವರುಣನ ಆರ್ಭಟ ಜೋರಾಗಿರಲಿದೆ. ಮಲೆನಾಡಿನ ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಮಳೆ ಮುಂದುವರಿಯಲಿದ್ದು, ಇಲ್ಲಿನ ಪ್ರವಾಸಿಗರು ಮತ್ತು ನಿವಾಸಿಗಳು ಎಚ್ಚರದಿಂದಿರಬೇಕು ಎಂದು ಹವಾಮಾನ ಇಲಾಖೆ ಸ್ಪಷ್ಟ ಪಡಿಸಿದೆ .