ಬಿಜೆಪಿಯಲ್ಲಿ ಬದಲಾವಣೆಯ ಗಾಳಿ ! ಗರಿ ಗೆದರಿದ ರಾಜ್ಯ ಬಿಜೆಪಿಯಲ್ಲಿ ರಾಜಕೀಯ...
ಬೆಂಗಳೂರು: ದೇಶದಲ್ಲಿ ಐದು ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟಗೊಂಡು, ಅಲ್ಲಿ ಸರ್ಕಾರ ರಚನೆಯಾಗಿ ಆಡಳಿತವೂ ಆರಂಭವಾಗಿದೆ. ಇದರ ಬೆನ್ನಲ್ಲೇ ಈಗ ಕರ್ನಾಟಕ ರಾಜ್ಯ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿ ಗೆದರಿವೆ. ಕಾಂಗ್ರೆಸ್ ಆಡಳಿತಕ್ಕೆ ಕೌಂಟರ್ ಕೊಡಲು ಮತ್ತು ಮುಂಬರುವ ಚುನಾವಣೆಗಳಲ್ಲಿ ಶತಾಯಗತಾಯ ರಾಜ್ಯದಲ್ಲಿ ಅಧಿಕಾರ ಹಿಡಿಯಲು ಬಿಜೆಪಿ ಹೈಕಮಾಂಡ್ ಈಗ ಕರ್ನಾಟಕದ ಕಡೆಗೆ ಸಂಪೂರ್ಣ ಫೋಕಸ್ ಮಾಡಿದೆ. ಪಕ್ಷದ ಒಳಗೆ ಮತ್ತು ಹೊರಗೆ ಭಾರಿ ‘ರಿಪೇರಿ’ಗೆ ಮುಂದಾಗಿರುವ ದೆಹಲಿ ನಾಯಕರು, ರಾಜ್ಯಕ್ಕೆ ಸರಣಿ ಭೇಟಿ ನೀಡುತ್ತಿರುವುದು ತೀವ್ರ ಕುತೂಹಲ ಮೂಡಿಸಿದೆ. ರಾಜ್ಯದಲ್ಲಿ ಎಸ್‌ಐಆರ್ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ವೀಕ್ಷಕರ ಮೊದಲ ತಂಡ ಈಗಾಗಲೇ ಸಿಲಿಕಾನ್ ಸಿಟಿಗೆ ಲಗ್ಗೆ ಇಟ್ಟಿದೆ. ಬಿಜೆಪಿ ರಾಷ್ಟ್ರೀಯ ಜಂಟಿ ಸಂಘಟನಾ ಕಾರ್ಯದರ್ಶಿ ಶಿವಪ್ರಕಾಶ್, ರಾಷ್ಟ್ರೀಯ ಉಪಾಧ್ಯಕ್ಷ ಬೈಜಯಂತ್ ಜಯ್ ಪಾಂಡಾ ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿ ಡಾ. ರಾಧಾಮೋಹನ್ ದಾಸ್ ಅಗರ್‌ವಾಲ್ ಬೆಂಗಳೂರಿಗೆ ಆಗಮಿಸಿದ್ದಾರೆ.